Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂತರಾಜ್ಯ ಗಾಂಜಾ ಜಾಲ: 51 ಕೆಜಿ ಗಾಂಜಾ...

ಅಂತರಾಜ್ಯ ಗಾಂಜಾ ಜಾಲ: 51 ಕೆಜಿ ಗಾಂಜಾ ವಶ

ವಾರ್ತಾಭಾರತಿವಾರ್ತಾಭಾರತಿ4 Aug 2016 4:24 PM IST
share
ಅಂತರಾಜ್ಯ ಗಾಂಜಾ ಜಾಲ: 51 ಕೆಜಿ ಗಾಂಜಾ ವಶ

ಮಂಗಳೂರು,ಆ.4: ಅಂತಾರಾಜ್ಯ ಗಾಂಜಾ ವ್ಯವಹಾರ ಜಾಲವೊಂದನ್ನು ಪತ್ತೆಹಚ್ಚಿಸಿರುವ ಮಂಗಳೂರು ಸಿಸಿಬಿ ಪೊಲೀಸರು, ಓರ್ವ ಆರೋಪಿ, ಇನ್ನೋವಾ ಕಾರಿನ ಜತೆಗೆ 51 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪೊಲೀಸ್ ಆಯುಕ್ತ ಚಂದ್ರಶೇಖರ್, ವಶಪಡಿಸಿಕೊಳ್ಳಲಾಗಿರುವ ಗಾಂಜಾದ ವೌಲ್ಯ 10,50,000 ರೂ.ಗಳಾಗಬಹುದು ಎಂದು ಹೇಳಿದರು.

ಬಂಧಿತ ಆರೋಪಿ ಮೊಯ್ದಿನ್ ನವಾಝ್ (29) ಎಂಬಾತ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಈ ಬೃಹತ್ ಪ್ರಮಾಣದ ಗಾಂಜಾವನ್ನು ಗೋಣಿಚೀಲಗಳಲ್ಲಿ ತುಂಬಿ ಇಂದು ಬೆಳಗ್ಗೆ ಖಾಸಗಿ ಇನ್ನೋವಾ ಕಾರಿನಲ್ಲಿ ಮಂಗಳೂರು ಹಾಗೂ ಕಾಸರಗೋಡು ಜಿಲ್ಲೆಗೆ ಸಾಗಿಸಲು ಯತ್ನಿಸುತ್ತಿದ್ದ. ಖಚಿತ ಮಾಹಿತಿಯ ಮೇರೆಗೆ ಆರೋಪಿಯ ಕಾರನ್ನು ಬೆನ್ನು ಹತ್ತಿದ ಪೊಲೀಸರು ಕೋಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಕ್ರಾಸ್ ಬಳಿ, ಇಂದು ಬೆಳಗ್ಗೆ ಕಾರು ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಆಯುಕ್ತರು ಹೇಳಿದರು.

ಆರೋಪಿ ಕಾಸರಗೋಡಿನ ಉಪ್ಪಳ ನಿವಾಸಿಯಾಗಿದ್ದು, ದುಬೈನಲ್ಲಿ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಕೆಲಸದಲ್ಲಿದ್ದು, ನಷ್ಟದ ಹಿನ್ನೆಲೆಯಲ್ಲಿ ಕೆಲಸ ಬಿಟ್ಟು ಬಂದಿರುವ ಆತ ಕಳೆದ ಒಂದು ವರ್ಷದಿಂದ ಇಲ್ಲೇ ಇರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಅವರು ಹೇಳಿದರು. ಸಿಸಿಬಿ ಘಟಕದ ಇನ್ಸ್‌ಪೆಕ್ಟರ್ ಸುನಿಲ್ ವೈ. ನಾಯಕ್ ನೇತೃತ್ವದಲ್ಲಿ ಎಸ್ಸೈ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿ ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

6 ತಿಂಗಳಲ್ಲಿ ವಶಪಡಿಸಿಕೊಂಡ ಬೃಹತ್ ಪ್ರಮಾಣದ ಗಾಂಜಾ!

ಕಳೆದ ಆರು ತಿಂಗಳಲ್ಲಿ ಪೊಲೀಸ್ ಇಲಾಖೆಯಿಂದ ವಶಪಡಿಸಿಕೊಳ್ಳಲಾದ ಬೃಹತ್ ಪ್ರಮಾಣದ ಗಾಂಜಾ ಇದಾಗಿದೆ. ಇಂದು ನಡೆದ ಕಾರ್ಯಾಚರಣೆಯ ವೇಳೆ ಇನ್ನೋವಾ ಕಾರಿನಲ್ಲಿ ಓರ್ವ ವ್ಯಕ್ತಿ ಮಾತ್ರ ಇದ್ದು, ಈ ಜಾಲದಲ್ಲಿ ಬೇರೆಯವರು ಇದ್ದಾರೆಯೇ, ಈ ಹಿಂದೆಯೂ ಈತ ಈ ಕೃತ್ಯದಲ್ಲಿ ತೊಡಗಿಕೊಂಡಿದ್ದನೇ ಎಂಬ ಬಗ್ಗೆ ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದರು. 

ರಿಚರ್ಡ್ ಅಪಹರಣ ಪ್ರಕರಣ: ಓರ್ವನ ಬಂಧನ

ರಾಜಸ್ತಾನದಲ್ಲ್ಲಿ ಮಂಗಳೂರಿನ ಕಿರ್ಲೋಸ್ಕರ್ ಡೀಲರ್‌ಶಿಪ್ ಉದ್ಯೋಗಿ ರಿಚರ್ಡ್ ಅಪಹರಣಕಾರರ ತಂಡದ ಶಂಕಿತ ನಾಲ್ವರ ಪೈಕಿ ಓರ್ವನನ್ನು ಬಂಧಿಸಲಾಗಿದೆ. ಶೀಘ್ರ ಎಲ್ಲಾ ಆರೋಪಿಗಳ ಬಂಧನವಾಗಲಿದೆ. ಆರೋಪಿಯ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದರು.

ಮಂಗಳೂರಿನ ಉರ್ವ ಚಿಲಿಂಬಿ ಸಮೀಪ ಮಗು ಮಾರಾಟಕ್ಕೆ ಯತ್ನಿಸಿ ಬಂಧಿತರಾದ ಆರೋಪಿಗಳು ಈ ಹಿಂದೆ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಹೆಚ್ಚಿನ ತನಿಖೆ ಉರ್ವ ಠಾಣಾ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ನಡೆಯುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X