Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನಪಾ ವಲಯ ಕಚೇರಿಗಳು ಶೀಘ್ರ ಆರಂಭ: ಸಚಿವ...

ಮನಪಾ ವಲಯ ಕಚೇರಿಗಳು ಶೀಘ್ರ ಆರಂಭ: ಸಚಿವ ಬೇಗ್ ಆದೇಶ

ವಾರ್ತಾಭಾರತಿವಾರ್ತಾಭಾರತಿ4 Aug 2016 6:54 PM IST
share
ಮನಪಾ ವಲಯ ಕಚೇರಿಗಳು ಶೀಘ್ರ ಆರಂಭ: ಸಚಿವ ಬೇಗ್ ಆದೇಶ

ಮಂಗಳೂರು, ಆ.4: ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ, ಸುರತ್ಕಲ್ ಹಾಗೂ ಲಾಲ್‌ಬಾಗ್‌ನಲ್ಲಿ ಮಂಜೂರಾಗಿರುವ ವಲಯ ಕಚೇರಿಗಳನ್ನು ಶೀಘ್ರವೇ ಆರಂಭಿಸುವಂತೆ ರಾಜ್ಯ ನಗರಾಡಳಿತ ಸಚಿವ ಆರ್. ರೋಶನ್ ಬೇಗ್ ಆದೇಶಿಸಿದ್ದಾರೆ.

ಅವರು ಇಂದು ಮನಪಾ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಜನಪ್ರತಿನಿಧಿಗಳಿಂದ ಸಮಸ್ಯೆಗಳನ್ನು ಆಲಿಸಿದ ಬಳಿಕ ಈ ಆದೇಶ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ವಲಯ ಕಚೇರಿಗಳು ಮಂಜೂರು ಆಗಿ ವರ್ಷ ಕಳೆದಿವೆ. ವಲಯ ಆಯುಕ್ತರ ನೇಮಕವಾಗಿದ್ದರೂ, ವಲಯ ಕಚೇರಿಗಳು ಆರಂಭವಾಗದ ಹಿನ್ನಲೆಯಲ್ಲಿ ಆ ಅಧಿಕಾರಿಗಳನ್ನು ಇತರ ಇಲಾಖಾ ಕರ್ತವ್ಯಗಳಿಗೆ ಬಳಸಲಾಗುತ್ತಿದೆ. ನಗರದಿಂದ ದೂರದಲ್ಲಿರುವ ಜನರು ಸಣ್ಣ ಪುಟ್ಟ ಕೆಲಸಗಳಿಗಾಗಿಯೂ ಮಂಗಳೂರು ಮಹಾನಗರ ಪಾಲಿಕೆಗೆ ಅಲೆದಾಡುವ ಪರಿಸ್ಥಿತಿ ಇದೆ. ವಲಯ ಕಚೇರಿ ನಿರ್ಮಾಣ ಆದಲ್ಲಿ ಇಂತಹ ಸಮಸ್ಯೆ ಬಗೆಹರಿಯಲಿದೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕರಾದ ಜೆ.ಆರ್. ಲೋಬೊ, ಮೊಯ್ದಿನ್ ಬಾವಾ ಹಾಗೂ ಪಾಲಿಕೆ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ವಲಯ ಕಚೇರಿಗಳನ್ನು ತಕ್ಷಣ ಆರಂಭಿಸುವಂತೆ ಸಚಿವರು ಆದೇಶಿಸಿದರು.

ಪಾಲಿಕೆ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ

ಪಾಲಿಕೆಯ 1,725 ಮಂಜೂರು ಹುದ್ದೆಗಳಲ್ಲಿ ಪ್ರಸ್ತುತ ಕೇವಲ 548 ಹುದ್ದೆಗಳು ಮಾತ್ರ ಇವೆ. ಉಪ ಆಯುಕ್ತರು ಸೇರಿದಂತೆ ಹಲವಾರು ಪ್ರಮುಖ ಹುದ್ದೆಗಳೇ ಖಾಲಿಯಾಗಿರುವುದು ಗಮನಕ್ಕೆ ಬಂದಿದೆ. ಕೆಪಿಎಸ್ಸಿಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. ಇದು ಪೂರ್ಣಗೊಂಡ ಕೂಡಲೇ ತೆರವಾಗಿರುವ ಹುದ್ದೆಗಳು ಭರ್ತಿಯಾಗಲಿವೆ ಎಂದು ಸಚಿವ ರೋಶನ್ ಬೇಗ್ ತಿಳಿಸಿದರು.

ಸಮಸ್ಯೆಗಳ ಅಧ್ಯಯನ ಮಾಡಿ ಕ್ರಮ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಳಚರಂಡಿ, ಪುಟ್ಪಾತ್, ಪಾರ್ಕಿಂಗ್ ಮೊದಲಾದ ಹಲವಾರು ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು ಗಮನ ಸೆಳೆದಿದ್ದಾರೆ. ಅವುಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ, ದೀರ್ಘಾವಧಿ ಹಾಗೂ ಕಿರು ಅವಧಿಯ ಸಮಸ್ಯೆಗಳೆಂದು ವಿಭಾಗಿಸಿ ಆದ್ಯತೆಯ ನೆಲೆಯಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಶಾಸಕ ಜೆ.ಆರ್. ಲೋಬೊ ಮಾತನಾಡಿ, ಮಂಗಳೂರು ನಗರದಲ್ಲಿ ಸಿಂಗಲ್‌ಸೈಟ್ ಸಮಸ್ಯೆ ಪೆಡಂಭೂತವಾಗಿ ಕಾಡುತ್ತಿದೆ. ದುಬಾರಿ ಶುಲ್ಕ ಪಾವತಿಸಬೇಕಾಗುತ್ತದೆ. ಬಡವರು ಮನೆ ನಿರ್ಮಿಸಲಾಗದಂತ ಪರಿಸ್ಥಿತಿ ಇದೆ. ಇದರ ನಿಯಮಗಳನ್ನು ಸರಳೀಕರಣಗೊಳಿಸಬೇಕು ಹಾಗೂ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಸಚಿವರನ್ನು ಆಗ್ರಹಿಸಿದರು. ಎಡಿಬಿ 2 ನೆ ಹಂತದ ಕಾಮಗಾರಿಗಳಿಗೆ ಶೀಘ್ರ ಅಂತಿಮ ಮಂಜೂರಾತಿ ನೀಡಬೇಕು. ಎಸ್‌ಎ್ಸಿಯಲ್ಲಿ ಪಾಲಿಕೆಯ ಪ್ರಸಕ್ತ ಇರುವ 1 ಕೋ.ರೂ. ಯೋಜನೆ ಮಂಜೂರಾತಿ ಅಧಿಕಾರವನ್ನು 2 ಕೋ.ರೂ.ಗೇರಿಸಬೇಕು ಎಂಬ ಬೇಡಿಕೆಯನ್ನಿರಿಸಿದರು.

ಶಾಸಕ ಮೊಯ್ದೀನ್ ಬಾವ ಮಾತನಾಡಿ, ಮಹಾನಗರ ಪಾಲಿಕೆಗೆ ಹೊಸದಾಗಿ ಸೇರ್ಪಡೆಗೊಂಡಿರುವ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಬೇಕು. ಸುರತ್ಕಲ್ ಭಾಗದಲ್ಲಿ ಬೃಹತ್ ಉದ್ದಿಮೆಗಳ ಭಾರಿಗಾತ್ರದ ವಾಹನಗಳ ಸಂಚಾರದಿಂದ ರಸ್ತೆಗಳು ದುಸ್ಥಿತಿಯನ್ನು ತಲುಪಿದ್ದು ಇದರ ದುರಸ್ತಿಗೆ ಉದ್ದಿಮೆಗಳು ಹಣ ಒದಗಿಸುವಂತೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.

ಮೇಯರ್ ಹರಿನಾಥ್ ಅವರು ಪಾಲಿಕೆಯಲ್ಲಿ ಸಿಬ್ಬಂದಿ ಸಮಸ್ಯೆ , ನೂತನ ವೆಂಟೆಡ್ ಡ್ಯಾಂ ನೀರು ನಿಲುಗಡೆಗೆ ಭೂಸ್ವಾಧೀನದ ಅವಶ್ಯಕತೆಯ ಬಗ್ಗೆ ಸಚಿವರು ಅಹವಾಲು ಮಂಡಿಸಿದರು.

ಪಾಲಿಕೆ ಮುಖ್ಯ ಸಚೇತಕ ಶಶಿಧರ ಹೆಗ್ಡೆ , ಸ್ಥಾಯಿ ಸಮಿತಿ ಅಧ್ಯಕ್ಷರಾದ ಕವಿತಾ ಸನಿಲ್, ಲ್ಯಾನ್ಸ್‌ಲಾಟ್ ಪಿಂಟೋ, ಬಶೀರ್, ಅಪ್ಪಿ , ಪ್ರತಿಪಕ್ಷ ನಾಯಕಿ ರೂಪಾ ಡಿ. ಬಂಗೇರ ಹಾಗೂ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ, ನವೀನ್ ಡಿಸೋಜ, ಮುಹಮ್ಮದ್, ರಾಧಾಕೃಷ್ಣ , ಪ್ರತಿಭಾ ಕುಳಾಯಿ ಮುಂತಾದ ಪಾಲಿಕೆಯ ವಿವಿಧ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.

ಮೂಡಾ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್ ಉಪಸ್ಥಿತರಿದ್ದರು.

ಪೌರ ಕಾರ್ಮಿಕರ ನಿಯೋಗ ಕಳುಹಿಸಿ: ನಾನೇ ಸಮಸ್ಯೆ ತಿಳಿಯುತ್ತೇನೆ

ಪಾಲಿಕೆಯಲ್ಲಿ ಪೌರ ಕಾರ್ಮಿಕರ ದಿನಕೂಲಿ ನೌಕರರಾಗಿ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಹಾಗೂ ಸದಸ್ಯೆ ಅಪ್ಪಿಲತಾ ಗಮನ ಸೆಳೆದರು. ಕೊನೆಯಲ್ಲಿ ಮಾತನಾಡಿದ ಸಚಿವ ರೋಶನ್ ಬೇಗ್, ಪಾಲಿಕೆಯಲ್ಲಿ ಎಷ್ಟು ಮಂದಿ ಪೌರಕಾರ್ಮಿಕರಿದ್ದಾರೆ? ಅವರಿಗೆ ದಿನಕೂಲಿ ಎಷ್ಟು ನೀಡಲಾಗುತ್ತಿದೆ? ಎಂದು ಪ್ರಶ್ನಿಸಿದರು.

ಪಾಲಿಕೆಯಲ್ಲಿ 159 ಮಂದಿ ಖಾಯಂ ಪೌರ ಕಾರ್ಮಿಕರಿದ್ದು, 105 ಮಂದಿ ಪೌರಕಾರ್ಮಿಕರು ದಿನಕೂಲಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದಿನಕೂಲಿ ಮಾಸಿಕ ಒಟ್ಟು ತಲಾ 7,000 ರೂ. ಹಾಗೂ ಹೆಚ್ಚುವರಿ 2,000 ರೂ.ಗಳನ್ನು ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಅಷ್ಟು ಹಣ ಅವರಿಗೆ ಪಾವತಿಯಾಗುತ್ತಿದೆಯೇ ಎಂದು ಸಚಿವರು ಪ್ರಶ್ನಿಸಿದಾಗ, ಆ ಬಗ್ಗೆ ಮಾಹಿತಿ ಇಲ್ಲ ಎಂದು ಸದಸ್ಯರು ಹೇಳಿದರು. ಪೌರ ಕಾರ್ಮಿಕರ ನಿಯೋಗ ನನ್ನನ್ನು ಭೇಟಿ ಮಾಡಲಿ. ನಾನೇ ಅವರಿಗೆ ಸಿಗುತ್ತಿರುವ ಸೌಲಭ್ಯ, ಅವರಿಗೆ ನೀಡಲಾಗುತ್ತಿರುವ ಕೆಲಸದ ಬಗ್ಗೆ ತಿಳಿದುಕೊಳ್ಳುತ್ತೇನೆ ಎಂದು ಸಚಿವ ರೋಶನ್ ಬೇಗ್, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಉಪ್ಪು ನೀರು ಸಂಸ್ಕರಣೆ: ಮದ್ರಾಸ್‌ಗೆ ಹೋಗಿ ಬನ್ನಿ ಎಂದ ಸಚಿವರು!

ಮಂಗಳೂರಿನಲ್ಲಿ ಸಮುದ್ರದ ನೀರು ಸಂಸ್ಕರಿಸಿ ನೀರಿನ ಸಮಸ್ಯೆಯನ್ನು ನೀಗಿಸಲು ಸಾಧ್ಯವಿದೆ. ನಾನು ಇತ್ತೀಚೆಗೆ ಮದ್ರಾಸ್‌ನಲ್ಲಿ ಉಪ್ಪು ನೀರು ಸಂಸ್ಕರಿಸಿ ಶುದ್ಧ ನೀರಾಗಿ ಪರಿವರ್ತಿಸುವ ಘಟಕಕ್ಕೆ ಭೇಟಿ ನೀಡಿದ್ದೆ. ವಿದೇಶಿ ಹಾಗೂ ಸ್ಥಳೀಯ ಕಂಪೆನಿಗಳು ಈ ಘಟಕವನ್ನು ನಿರ್ವಹಿಸುತ್ತಿದ್ದು ಮದ್ರಾಸ್ ನಗರದ ಬಹು ಭಾಗಕ್ಕೆ ಪಾಲಿಕೆ ದರದಲ್ಲೇ ನೀರು ಪೂರೈಕೆ ಮಾಡಲಾಗುತ್ತಿದೆ. ಪಾಲಿಕೆಯ ಮೇಯರ್ ನೇತೃತ್ವದಲ್ಲಿ ವಿಪಕ್ಷ ನಾಯಕರು, ಹಿರಿಯ ಸದಸ್ಯರ ತಂಡ ಭೇಟಿ ನೀಡಿ. ಅಲ್ಲಿಗೆ ಕರೆದುಕೊಂಡು ಹೋಗುವ ವ್ಯವಸ್ಥೆಯನ್ನು ನಾನು ಮಾಡುತ್ತೇನೆ ಎಂದು ಸಚಿವ ರೋಶನ್ ಬೇಗ್ ಮನಪಾ ಜನಪ್ರತಿನಿಧಿಗಳಿಗೆ ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X