Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬದ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ...

ಕಡಬದ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ಎಂದು...?

ರಸ್ತೆಯಲ್ಲೇ ವಾಹನ ನಿಲುಗಡೆ, ವ್ಯಾಪಾರಿಗಳ ಸಂಕಷ್ಟ ಕೇಳೋರಿಲ್ಲ

ವರದಿ: ತಸ್ಲೀಂ ಮರ್ಧಾಳವರದಿ: ತಸ್ಲೀಂ ಮರ್ಧಾಳ5 Aug 2016 11:48 AM IST
share
ಕಡಬದ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ಎಂದು...?

ಕಡಬ, ಆ.5. ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವ ಕಡಬ ಪೇಟೆಯನ್ನು ಜ್ವಲಂತ ಸಮಸ್ಯೆಯಾಗಿ ಕಾಡುತ್ತಿರುವ ಪಾರ್ಕಿಂಗ್ ಸಮಸ್ಯೆಯು ಇಂದು ನಿನ್ನೆಯದಲ್ಲ. ಕಳೆದ ಹಲವಾರು ವರ್ಷಗಳಿಂದ ಕಡಬ ಪೇಟೆಯಲ್ಲಿ ಪಾರ್ಕಿಂಗ್ ಸಮಸೆಯಿದೆ. ಸುಮಾರು ಮೂರು ವರ್ಷಗಳ ಹಿಂದೆ ಆಗಿನ ಕಡಬ ಗ್ರಾ.ಪಂ. ಅಧ್ಯಕ್ಷರಾಗಿದ್ದ ಹಾಜಿ ಹನೀಫ್ ಕೆ.ಎಂ.ಮುಂದಾಳತ್ವದಲ್ಲಿ ಪೇಟೆಯಲ್ಲಿನ ಅಸಮರ್ಪಕ ಪಾರ್ಕಿಂಗ್ ವ್ಯವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಮತ್ತು ವರ್ತಕರ ಸಮಲೋಚನಾ ಸಭೆ ನಡೆಸಿದ್ದರು. ಸಭೆಯಲ್ಲಿ ಪೇಟೆಯ ಹೊರಗಡೆ ವಾಹನ ಪಾರ್ಕಿಂಗ್‌ಗೆಂದು ರಸ್ತೆಯ ಇಕ್ಕೆಡೆಗಳಲ್ಲಿ ಸ್ಥಳವನ್ನು ಗುರುತಿಸಲಾಗಿತ್ತು. ಅದರಂತೆ ಮಳೆಗಾಲ ಕಳೆದ ಕೂಡಲೇ ಪಾರ್ಕಿಂಗ್‌ಗೆ ಪೇಟೆಯಿಂದ ಹೊರಗೆ ಗುರುತಿಸಿದ ಜಾಗದಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ತೀರ್ಮಾನಿಸಲಾಗಿತ್ತು. ಆದರೆ ಈ ಪ್ರಕ್ರಿಯೆ ನನೆಗುದಿಗೆ ಬಿದ್ದಿದ್ದು, ಸ್ಥಳಾಂತರ ಪ್ರಕ್ರಿಯೆಗೆ ಚಾಲನೆ ಸಿಕ್ಕಿಲ್ಲ. ಕಡಬ ಪೇಟೆಯ ಹೃದಯಭಾಗದಲ್ಲೇ ರಸ್ತೆಯ ಎರಡೂ ಬದಿಗಳಲ್ಲಿ ಟೂರಿಸ್ಟ್ ಜೀಪು, ತೂಪಾನ್, ಟೆಂಪೋಗಳನ್ನು ನಿಲ್ಲಿಸಲಾಗುತ್ತಿದ್ದು, ಸರಕಾರಿ ಬಸ್ಸುಗಳನ್ನು ರಸ್ತೆಯಲ್ಲೇ ನಿಲ್ಲಿಸುವುದು ಕಂಡು ಬರುತ್ತಿದೆ. ಬೆಳಗ್ಗೆ ಹಾಗೂ ಸಂಜೆಯ ವೇಳೆ ಕೆಲವೊಂದು ದಿನಗಳಲ್ಲಿ ಪೊಲೀಸರು ಟ್ರಾಫಿಕ್ ನಿಯಂತ್ರಿಸುತ್ತಾರೆ. ಆದರೆ ಉಳಿದ ಇನ್ನುಳಿದ ದಿನಗಳಲ್ಲಿ ಟ್ರಾಫಿಕ್ ಸಮಸ್ಯೆ ಸಾಮಾನ್ಯವಾಗಿದೆ. ಪೇಟೆಯಲ್ಲಿ ಕಡಬ ಗ್ರಾಮ ಪಂಚಾಯತ್‌ನ ಅಧೀನಕ್ಕೊಳಪಟ್ಟ ವಾಣಿಜ್ಯ ಸಂಕೀರ್ಣವಿದ್ದು, ಅದರ ಮುಂಭಾಗಲ್ಲೇ ಟೂರಿಸ್ಟ್ ವಾಹನಗಳನ್ನು ಅಡ್ಡಾದಿಡ್ಡಿ ಪಾರ್ಕಿಗ್ ಮಾಡಲಾಗುತ್ತಿದೆ. ಇದರಿಂದ ದುಬಾರಿ ಬಾಡಿಗೆ ಕೊಟ್ಟು ಕಡಬ ಪಂಚಾಯತಿನ ಕಟ್ಟಡದಲ್ಲಿ ವ್ಯಾಪಾರ ನಡೆಸುತ್ತಿದ್ದರೂ ತೊಂದರೆ ಎದುರಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಪಾರ್ಕಿಂಗ್‌ಗೆ ಅವಕಾಶ ನೀಡಬಾರದು ಎಂದು ಎಂದು ಇಲ್ಲಿನ ವ್ಯಾಪಾರಿಗಳು ಪಂಚಾಯತ್‌ಗೆ ಅದೆಷ್ಟೇ ಬಾರಿ ಮನವಿ ಸಲ್ಲಿಸಿದರೂ ಪಂಚಾಯತ್ ಆಡಳಿತ ಸಮಿತಿ ಈ ಬಗ್ಗೆ ಕ್ಯಾರೇ ಅಂದಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಪಾರ್ಕಿಂಗ್ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಯವರಿಗೆ ಕಳುಹಿಸಲಾಗಿದೆ. ಅದನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಶ್ರಮಿಸಲಾಗುವುದು.

-ಹಾಜಿ ಹನೀಫ್ ಕೆ.ಎಂ. ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರು, ಗ್ರಾಪಂ ಕಡಬ
-------------
ಪಾರ್ಕಿಂಗ್ ಸಮಸ್ಯೆಗಳ ಬಗ್ಗೆ ದೂರುಗಳು ಬರುತ್ತಿದ್ದು, ಶೀಘ್ರದಲ್ಲೇ ಪೊಲೀಸ್ ಇಲಾಖೆ, ವರ್ತಕರ ಸಂಘ, ಕಂದಾಯ ಅಧಿಕಾರಿಗಳು, ಪಂಚಾಯತ್ ಆಡಳಿತ ಸಮಿತಿ ಸೇರಿ ಸಾರ್ವಜನಿಕ ಸಭೆೆ ಕರೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು.
-ಚೆನ್ನಪ್ಪ ಗೌಡ ಕಜೆಮೂಲೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಡಬ
-----------------
ಸಂಬಂಧಿಸಿದ ಇಲಾಖೆಯವರು ನೋ ಪಾರ್ಕಿಂಗ್ ಸೂಚನಾ ಫಲಕವನ್ನು ಹಾಕಿಕೊಟ್ಟಲ್ಲಿ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು.
-ಉಮೇಶ್ ಉಪ್ಪಳಿಕೆ, ಆರಕ್ಷಕ ಉಪ ನಿರೀಕ್ಷಕರು, ಕಡಬ ಠಾಣೆ

share
ವರದಿ: ತಸ್ಲೀಂ ಮರ್ಧಾಳ
ವರದಿ: ತಸ್ಲೀಂ ಮರ್ಧಾಳ
Next Story
X