Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಹಾಯಕ ಕಮೀಷನರ್‌ರಿಂದ ಸುಳ್ಯದಲ್ಲಿ...

ಸಹಾಯಕ ಕಮೀಷನರ್‌ರಿಂದ ಸುಳ್ಯದಲ್ಲಿ ಅಹವಾಲು ಸ್ವೀಕಾರ

ಬ್ರೋಕರ್‌ಗಳಿಗೆ ಬ್ರೇಕ್: ಎಸಿ ಕಟ್ಟುನಿಟ್ಟಿನ ಆದೇಶ

ವಾರ್ತಾಭಾರತಿವಾರ್ತಾಭಾರತಿ5 Aug 2016 5:29 PM IST
share

ಸುಳ್ಯ, ಆ.5: ಪುತ್ತೂರು ಸಹಾಯಕ ಕಮೀಷನರ್ ಡಾ.ರಾಜೇಂದ್ರ ಪ್ರತಿ ಶುಕ್ರವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಶುಕ್ರವಾರ ಬೆಳಗ್ಗೆ ತಾಲೂಕು ಕಚೇರಿಯಲ್ಲಿ ಇಲಾಖೆಯ ಸಿಬ್ಬಂದಿ ವರ್ಗದ ಸಭೆ ಕರೆದ ಅವರು, ಕಚೇರಿಯ ಅಶುಚಿತ್ವದ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಶೌಚಾಲಯಗಳ ನಿರ್ವಹಣೆ ಸರಿಯಾಗಿಲ್ಲದ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಒಂದು ವಾರದ ಸಿಸಿ ಟಿವಿ ಫೂಟೇಜನ್ನು ತಾನು ಖುದ್ದು ವೀಕ್ಷಿಸಿದ್ದು, ಅವರು-ಇವರು, ಆ ಪಕ್ಷ-ಈ ಪಕ್ಷ ಎಂದು ಬಹಳಷ್ಟು ಜನ ನಿತ್ಯ ಕಚೇರಿಗೆ ಬಂದು ತೊಂದರೆ ನೀಡುತ್ತಿದ್ದಾರೆ. ಕೇಸ್ ವರ್ಕರ್‌ಗಳಿಗೆ ದಬ್ಬಾಳಿಕೆ ನಡೆಸುವುದು, ಕೂಗಾಡುವುದು, ಬಯ್ಯುವುದು ಗಮನಕ್ಕೆ ಬಂದಿದೆ. ಕಚೇರಿಯಲ್ಲಿ ಬ್ರೋಕರ್‌ಗಳಿಗೆ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಎಚ್ಚರಿಕೆ ನೀಡಿದರು. ಯಾವುದೇ ಒತ್ತಡಕ್ಕೆ ಮಣಿದು ಕೆಲಸ ಮಾಡಬೇಡಿ. ಕಾನೂನು ಪ್ರಕಾರ ಆಗುವ ಕೆಲಸ ಮಾಡಿ. ಬಡವರಿಗೆ ಮಾನವೀಯತೆ ತೋರಿಸಿ, ಅವರನ್ನು ವಿನಾ ಕಾರಣ ಅಲೆದಾಡಿಸಬೇಡಿ. ಮಹಿಳಾ ಸಿಬ್ಬಂದಿಯ ರಕ್ಷಣೆಗೆ ಸಮಿತಿಯನ್ನು ರಚಿಸಿ. ಪ್ರತಿ ವಾರ ಸಮಿತಿ ಸಭೆ ನಡೆಸಿ ಅದರ ವರದಿ ಕಳುಹಿಸಿ ಎಂದವರು ಹೇಳಿದರು.

ತಾಲೂಕು ಕಚೇರಿಯಲ್ಲಿ ಲಂಚ ಕೇಳುತ್ತಿರುವ ಬಗ್ಗೆ ಪ್ರತಿ ದಿನ ಮೂರು-ನಾಲ್ಕು ಅರ್ಜಿಗಳು ತನಗೆ ಬರುತ್ತಿವೆ. ಯಾರೂ ನೇರವಾಗಿ ದೂರು ನೀಡುತ್ತಿಲ್ಲ. ಯಾರೇ ಲಂಚ ಕೇಳಿದರೂ ನೇರವಾಗಿ ಅಧಿಕಾರಿಯ ಹೆಸರು ಸಹಿತ ದೂರು ನೀಡಿ. ಅಂತಹವರ ಮೇಲೆ ಕ್ರಮ ಕೈಗೊಳ್ಳುತ್ತೇನೆ. ತಾಲೂಕು ಕಚೇರಿಯಲ್ಲಿ ಮೂವರು ಸಿಬ್ಬಂದಿ ಕುರಿತು ಸಾಕಷ್ಟು ದೂರುಗಳು ಬಂದಿವೆ. ಅವರ ಮೇಲೆ ಕ್ರಮ ಕೈಗೊಳ್ಳುವ ಕುರಿತು ಪರಿಶೀಲಿಸಲಾಗುತ್ತದೆ ಎಂದವರು ಹೇಳಿದರು.

ಉಪ ಖಜಾನೆ ಸ್ಥಳಾಂತರ ಹಾಗೂ ಆಹಾರ ಶಾಖೆಯನ್ನು ಮಿನಿ ವಿಧಾನಸೌಧ ಕಟ್ಟಡಕ್ಕೆ ಸ್ಥಳಾಂತರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಣ್ಣೇಗೌಡರಿಗೆ ಸೂಚನೆ ನೀಡಿದರು. ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಶೌಚಾಲಯದ ನಿರ್ಮಾಣ ಏಕೆ ಆಗಿಲ್ಲ? ಉಪ ಖಜಾನೆಗೆ ಬೇಕಾದ ಗಾರ್ಡ್ ರೂಂ ವ್ಯವಸ್ಥೆಯನ್ನು ತಕ್ಷಣ ಮಾಡಬೇಕು. ಆಹಾರ ಶಾಖೆಯನ್ನು ತಕ್ಷಣ ಸ್ಥಳಾಂತರಿಸಬೇಕು. ಲಿಫ್ಟ್ ವ್ಯವಸ್ಥೆಗೆ ಅಂದಾಜು ಪಟ್ಟಿ ತಯಾರಿಸಬೇಕು. ಕಚೇರಿ ಒಳಗಿನ ಶೌಚಾಲಯಗಳು ಸರಿಯಾಗಿ ಕೆಲಸ ಮಾಡುವಂತೆ ವ್ಯವಸ್ಥೆ ಮಾಡಬೇಕು ಎಂದವರು ಸೂಚನೆ ನೀಡಿದರು.

ಮ್ಯುಟೇಶನ್‌ಗೆ ಕೇಸ್ ವರ್ಕರ್ ಒಬ್ಬರು 60 ಸಾವಿರ ರೂ.ಲಂಚ ಕೇಳಿದ್ದಾಗಿ ಮಾಜಿ ಶಾಸಕ ಕೆ. ಕುಶಲ ಸಹಾಯಕ ಕಮೀಷನರ್‌ಗೆ ದೂರು ನೀಡಿದ ಘಟನೆ ನಡೆಯಿತು. ಈ ಕುರಿತು ಎಸಿಯವರು ಕೇಸ್ ವರ್ಕರ್‌ರನ್ನು ಕರೆದು ವಿಚಾರಿಸಿದರು. ಹಲವು ಮಂದಿ ತಮ್ಮ ವೈಯಕ್ತಿಕ ಸಮಸ್ಯೆಗಳ ಕುರಿತು ದೂರು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X