ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯ ಬಂಧನ
ಪುತ್ತೂರು, ಆ.5: ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಪೇಟೆಯಲ್ಲಿರುವ ಡಿಸಿಸಿ ಬ್ಯಾಂಕ್ ಬಳಿ ಗುರುವಾರ ನಸುಕಿನ ವೇಳೆ ಅನುಮಾನಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸಂಪ್ಯ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪದ ಪಿದಪಟ್ಲ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಮುಹಮ್ಮದ್ ಅಶ್ರಫ್(26) ಬಂಧಿತ ಆರೋಪಿ.
ನಸುಕಿನ ವೇಳೆ ಡಿಸಿಸಿ ಬ್ಯಾಂಕ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಆರೋಪಿಯನ್ನು ಗಸ್ತು ನಿರತರಾಗಿದ್ದ ಸಂಪ್ಯ ಪೊಲೀಸರು ವಿಚಾರಿಸಿ ವೇಳೆ ಆತ ಅಸಮರ್ಪಕ ಉತ್ತರ ನೀಡಿರುವುದಾಗಿ ತಿಳಿದು ಬಂದಿದೆ, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Next Story





