Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಕ್ಕ: ಶ್ರೀನಿವಾಸ್ ಇಂಜಿನಿಯರಿಂಗ್...

ಮುಕ್ಕ: ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ6 Aug 2016 3:25 PM IST
share
ಮುಕ್ಕ: ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

ಮಂಗಳೂರು, ಆ.6: ಮುಕ್ಕದಲ್ಲಿರುವ ಶ್ರೀನಿವಾಸ್ ಸ್ಕೂಲ್ ಅಫ್ ಇಂಜಿನಿಯರಿಂಗ್‌ನ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳು ಮತ್ತು ಪೋಷಕರ ಸಮಾವೇಶ, ಸ್ವಾಗತ ಕಾರ್ಯಕ್ರಮ ಮತ್ತು ಓರಿಯೆಂಟೇಶನ್ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಜರಗಿತು.

ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಮಂಗಳೂರಿನ ಎ. ಶಾಮ ರಾವ್ ಪ್ರತಿಷ್ಠಾನದ ಅಧ್ಯಕ್ಷ ಸಿಎ ಎ. ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಿದ್ದರು. ಶ್ರೀನಿವಾಸ್ ವಿಶ್ವವಿದ್ಯಾಲಯದ ಸಹಕುಲಪತಿ ಹಾಗೂ ಎ. ಶಾಮ ರಾವ್ ಪ್ರತಿಷ್ಠಾನದ ಉಪಾಧ್ಯಕ್ಷ ಡಾ. ಶ್ರೀನಿವಾಸ್ ರಾವ್, ಪ್ರತಿಷ್ಠಾನದ ಕಾರ್ಯದರ್ಶಿ ಮಿತ್ರಾ ಎಸ್. ರಾವ್, ಶ್ರೀನಿವಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ವಿಜಯಲಕ್ಷ್ಮಿ ಆರ್. ರಾವ್, ಶ್ರೀನಿವಾಸ್ ಸ್ಕೂಲ್ ಅಫ್ ಇಂಜಿನಿಯರಿಂಗ್‌ನ ಪ್ರಾಂಶುಪಾಲ ಡಾ. ಶ್ರೀಪ್ರಕಾಶ್ ಬಿ., ಉಪಪ್ರಾಂಶುಪಾಲ ಡಾ. ರಾಮಕೃಷ್ಣ ಹೆಗಡೆ ಉಪಸ್ಥಿತರಿದ್ದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀನಿವಾಸ್ ಸ್ಕೂಲ್ ಅಫ್ ಇಂಜಿನಿಯರಿಂಗ್‌ನ ಪ್ರಾಂಶುಪಾಲ ಡಾ. ಶ್ರೀಪ್ರಕಾಶ್ ಬಿ. ಕಾಲೇಜಿನ ಧ್ಯೇಯ-ಉದ್ದೇಶ-ಆಶೋತ್ತರಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ಶೈಕ್ಷಣಿಕ ಪಠ್ಯವಿಷಯಗಳ ಜೊತೆಗೆ ಮೌಲ್ಯಾಧಾರಿತ ವಿಷಯಗಳಾದ ಸೊ್‌ಟ ಸ್ಕಿಲ್ (ಕುಶಲತೆ), ವ್ಯಕ್ತಿತ್ವ ವಿಕಸನ, ಸಂವಹನ ತರಬೇತಿಗಳ ಕುರಿತು ವಿಶೇಷ ಗಮನವನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದು ಅವರು ಹೇಳಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸೆಮಿಸ್ಟರ್ ಪದ್ದತಿ, ಕಾಲೇಜಿನ ನಿಯಮಗಳು, ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯಲ್ಲಿ ಪೋಷಕರ ಪಾತ್ರ, ಪರೀಕ್ಷೆಗಳು ಮತ್ತು ಇತರ ಶೈಕ್ಷಣಿಕ ವಿಷಯಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು.

ಡಾ.ರಾಮಕೃಷ್ಣ ಹೆಗಡೆ ಮಾತನಾಡಿ, ಇಂಜಿನಿಯರಿಂಗ್ ಅಭ್ಯಾಸದಲ್ಲಿ ಯಶಸ್ಸನ್ನು ಹೊಂದುವಲ್ಲಿ ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಪೋಷಕರ ಸಹಯೋಗ, ಕಾಲೇಜಿನ ಉಪನ್ಯಾಸಕ ವೃಂದದವರ ಸತತ ಮಾರ್ಗದರ್ಶನ, ಪೂರ್ವಭಾವಿ ತಯಾರಿ, ಸ್ಥಿರತೆ, ಜ್ಞಾನವನ್ನು ವೃದ್ಧಿಸಿಕೊಳ್ಳುವ ಉತ್ಸಾಹ, ಉತ್ತಮ ಹಾಜರಾತಿ, ಮತ್ತು ದೊರೆತ ಅವಕಾಶವನ್ನು ಸ್ವೀಕರಿಸಿ ಉತ್ತಮವಾಗಿ ನಿರ್ವಹಿಸುವ ಛಲ ಅತೀ ಅಗತ್ಯ ಎಂದು ಕಿವಿಮಾತು ಹೇಳಿದರು.

ಡಾ. ಶ್ರೀನಿವಾಸ್ ರಾವ್ ಮಾತನಾಡಿ, ಕಳೆದ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಶೇಕಡಾ 100 ಕ್ಯಾಂಪಸ್ ಉದ್ಯೋಗ ಅವಕಾಶವು ದೊರೆತಿದ್ದು, ಓರ್ವ ವಿದ್ಯಾರ್ಥಿಯು ಆರು ತಿಂಗಳ ತರಬೇತಿಯ ಬಳಿಕ ಸುಮಾರು 18 ಲಕ್ಷ ರೂಪಾಯಿ ವಾರ್ಷಿಕ ಆದಾಯದ ಉದ್ಯೋಗಾವಕಾಶವನ್ನು ಪಡೆಯಲಿದ್ದಾನೆ. ಶೈಕ್ಷಣಿಕ ವಿಭಾಗದಲ್ಲಿ ಆಸಕ್ತಿ, ಉತ್ತಮ ಸಂವಹನ ಕೌಶಲ್ಯ, ಕಠಿಣ ಪರಿಶ್ರಮ ಮತ್ತು ಸತತ ಅಭ್ಯಾಸಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯಗಳನ್ನು ಅನಾವರಣಗೊಳಿಸಬೇಕು ಎಂದು ಹೇಳಿದರು.

ವಿಜಯಲಕ್ಷ್ಮಿ ಆರ್ ರಾವ್ ಮಾತನಾಡಿ, ಉತ್ತಮ ನಡವಳಿಕೆ ಮತ್ತು ಉತ್ತಮ ಅಭ್ಯಾಸಗಳ ಮೂಲಕ ಉತ್ತಮ ಫಲಿತಾಂಶವನ್ನು ಪಡೆದು ಈ ಶೈಕ್ಷಣಿಕ ಸಂಸ್ಥೆಗೆ ಮತ್ತು ತಮ್ಮ ಹೆತ್ತವರಿಗೆ ಕೀರ್ತಿಯನ್ನು ತರಬೇಕು. ವಿದ್ಯಾರ್ಥಿಗಳು ಮೊಬೈಲ್ ಫೋನ್‌ಗಳಲ್ಲಿ ಅನಾವಶ್ಯಕ ಕಾಲಹರಣ ಮಾಡುವ ಬದಲು, ಕಲಿಯುವಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ತಮಗೆ ದೊರೆತ ಸಮಯವನ್ನು ಉತ್ತಮವಾಗಿ ಉಪಯೋಗಿಸಿಕೊಂಡು ಅದರ ಪ್ರತಿಫಲವನ್ನು ಪಡೆಯಬೇಕು ಎಂದರು.

ಮಿತ್ರಾ ಎಸ್.ರಾವ್‌ ಮಾತನಾಡಿ, ಜ್ಞಾನವು ಕೇವಲ ತರಗತಿಗೆ ಮಾತ್ರ ಸೀಮಿತವಾಗಿರದೆ, ಕಾಲೇಜಿನಲ್ಲಿರುವ ಸಕಲ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಂಡು, ಉತ್ತಮ ಸಂವಹನದ ಜ್ಞಾನವನ್ನು ಸಂಪಾದಿಸುವ ಮೂಲಕ ತಮ್ಮನ್ನು ಸಜ್ಜುಗೊಳಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎ ಎ.ರಾಘವೇಂದ್ರ ರಾವ್, ವಿದ್ಯಾರ್ಥಿಗಳು ಯಶಸ್ಸನ್ನು ಪಡೆಯುವಲ್ಲಿ ಗುರುಗಳ ಮತ್ತು ಹೆತ್ತವರ-ಪೋಷಕರ ಪಾತ್ರವು ಬಹಳ ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಭೇದ-ಭಾವಗಳಿಲ್ಲದೆ, ಸಮಾಜದ ಎಲ್ಲಾ ವರ್ಗಗಳ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುವುದು ಸಂಸ್ಥೆಯ ಮುಖ್ಯ ಉದ್ದೇಶ ಎಂದು ಹೇಳಿದರು.

ಭವಿಷ್ಯದಲ್ಲಿ ಇಲ್ಲಿನ ಪದವೀಧರರು ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿ, ತಮ್ಮ ಹೆತ್ತವರಿಗೆ ಹಾಗೂ ಈ ಈ ಶೈಕ್ಷಣಿಕ ಸಂಸ್ಥೆಗೆ ಮತ್ತಷ್ಟು ಕೀರ್ತಿಯನ್ನು ತರುವಂತಾಗಲಿ ಎಂದು ಆಶಿಸಿದರು.

ವಿದ್ಯಾರ್ಥಿನಿ ಚೈತ್ರಾ ಭಟ್ ಪ್ರಾರ್ಥಿಸಿದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊ.ಶ್ರೀನಾಥ್ ರಾವ್ ಸ್ವಾಗತಿಸಿದರು. ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಕಿಶೋರ್ ಬಾಗ್ಲೋಡಿ ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ರೋಹನ್ ಫೆರ್ನಾಂಡಿಸ್ ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಉಪನ್ಯಾಸಕಿ ಪ್ರೀತಿ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X