Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಪರಿಚಿತನ ಪ್ರಾಣ ಉಳಿಸಿ ಕೊನೆಯುಸಿರೆಳೆದ...

ಅಪರಿಚಿತನ ಪ್ರಾಣ ಉಳಿಸಿ ಕೊನೆಯುಸಿರೆಳೆದ ಆಪದ್ಬಾಂಧವ ಫಯಾಝ್ ಉಳ್ಳಾಲ್

ವಾರ್ತಾಭಾರತಿವಾರ್ತಾಭಾರತಿ6 Aug 2016 4:18 PM IST
share
ಅಪರಿಚಿತನ ಪ್ರಾಣ ಉಳಿಸಿ ಕೊನೆಯುಸಿರೆಳೆದ ಆಪದ್ಬಾಂಧವ ಫಯಾಝ್ ಉಳ್ಳಾಲ್

ಉಳ್ಳಾಲ, ಆ.6: ಉಳ್ಳಾಲ ಅಳಿವೆಬಾಗಿಲಿನಲ್ಲಿ ಮೀನುಗಾರಿಕಾ ದೋಣಿ ಮುಳುಗಿ, ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೀನುಗಾರ ಪೈಕಿ ಓರ್ವನನ್ನು ರಕ್ಷಿಸಿ, ಮತ್ತೊಬ್ಬರ ರಕ್ಷಣೆಗೆ ಯತ್ನಿಸುತ್ತಿದ್ದ ವೇಳೆ ಕೋಟೆಪುರದ ಆಪದ್ಭಾಂಧವ ಎಂದೇ ಪ್ರಸಿದ್ಧರಾಗಿದ್ದ ಜೀವರಕ್ಷಕ ಪಡೆಯ ಫಯಾಝ್ (38) ಮೃತಪಟ್ಟಿದ್ದಾರೆ. ಪರೋಪಕಾರಗೈಯುತ್ತಲೇ ತನ್ನ ಪ್ರಾಣತೆತ್ತ ಫಯಾಝ್  ಅವರ ಮೃತ್ಯು ಕೋಟೆಪುರವನ್ನು ಶೋಕಸಾಗರದಲ್ಲಿ ಮುಳುಗಿಸಿದೆ.

ಇಂದು ಮಧ್ಯಾಹ್ನ ವೇಳೆ ಉಳ್ಳಾಲ ಕೋಟೆಪುರದ ಅಳಿವೆಬಾಗಿಲಿನ ಬಳಿ ಮೀನುಗಾರಿಕೆ ನಡೆಸುತ್ತಿದ್ದ ನಾಡದೋಣಿಯೊಂದು ಕಡಲ ಅಲೆಗೆ ಸಿಲುಕಿ ಮಗುಚಿತ್ತು. ದೋಣಿಯಲ್ಲಿದ್ದ ಮೂವರು ಮೀನುಗಾರರು ನೀರಿನಲ್ಲಿ ಕೊಚ್ಚಿಹೋಗುತ್ತಿದ್ದರು. ಇದನ್ನು ಸಮುದ್ರತೀರದಲ್ಲೇ ಇದ್ದ ಫಯಾಝ್  ಗಮನಿಸಿದ್ದು, ಕೂಡಲೇ ಕಡಲಿಗೆ ಧುಮುಕಿ, ಮುಳುಗುತ್ತಿದ್ದ ಮೀನುಗಾರರ ಪೈಕಿ ಓರ್ವನನ್ನು ದಡಕ್ಕೆ ಎಳೆದು ತಂದಿದ್ದರು. ಮತ್ತೊಬ್ಬನನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದ ವೇಳೆ ಸಮುದ್ರದ ಅಲೆಯ ರಭಸಕ್ಕೆ ತಲೆ ಬಂಡೆಕಲ್ಲೊಂದಕ್ಕೆ ತಾಗಿ ಗಾಯಗೊಂಡು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉಳ್ಳಾಲ ವ್ಯಾಪ್ತಿಯಲ್ಲಿ ಯಾವುದೇ ಅವಘಡಗಳು ಸಂಭವಿಸಿದರೂ, ಫಯಾಝ್ ಅವರು ತಕ್ಷಣ ಕಾರ್ಯಪ್ರವೃತ್ತರಾಗುತ್ತಿದ್ದರು. ಸೋಮೇಶ್ವರ ಕಡಲತೀರದಲ್ಲಿ ನೀರುಪಾಲಾಗುತ್ತಿದ್ದ ಮೂವರು ಹೊರ ಜಿಲ್ಲೆಗಳ ಪ್ರವಾಸಿಗರನ್ನು ರಕ್ಷಿಸಿದ್ದರು. ಉಳ್ಳಾಲ ಕಡಲತೀರದಲ್ಲೂ ನೀರುಪಾಲಾಗುತ್ತಿದ್ದವರನ್ನು ರಕ್ಷಿಸಿದ್ದರು. ಸಮಾಜಸೇವಕರಾಗಿ ಗುರುತಿಸಿಕೊಂಡು, ಆಪದ್ಭಾಂಧವರಾಗಿದ್ದ ಫಯಾಝ್  ಅವರು ಓರ್ವನನ್ನು ರಕ್ಷಿಸುತ್ತಲೇ ಪ್ರಾಣತೆತ್ತಿರುವುದು ಬೇಸರದ ಸಂಗತಿ ಎಂದು ಫಯಾಝ್ ಅವರ ನಿಕಟವರ್ತಿಗಳು ತಿಳಿಸಿದ್ದಾರೆ.

ಮೃತ ಫಯಾಝ್ ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X