Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಾದಾಯಿ ಹೋರಾಟದ ಅಮಾಯಕರನ್ನು ಬಿಡುಗಡೆ...

ಮಹಾದಾಯಿ ಹೋರಾಟದ ಅಮಾಯಕರನ್ನು ಬಿಡುಗಡೆ ಮಾಡಬೇಕು : ಜಗದೀಶ ಶೆಟ್ಟರ್

ವಾರ್ತಾಭಾರತಿವಾರ್ತಾಭಾರತಿ6 Aug 2016 5:34 PM IST
share
ಮಹಾದಾಯಿ ಹೋರಾಟದ ಅಮಾಯಕರನ್ನು ಬಿಡುಗಡೆ ಮಾಡಬೇಕು : ಜಗದೀಶ ಶೆಟ್ಟರ್

ಮುಂಡಗೋಡ, ಆ.6: ಮಹಾದಾಯಿ ನೀರಿನ ಮಧ್ಯಂತರ ತೀರ್ಪಿನ ವಿಚಾರದಲ್ಲಿ ರೈತರು ನೀರಿಗಾಗಿ ಹೋರಾಟ ಮಾಡುತ್ತಿದ್ದಾಗ ಪೊಲೀಸರು ದೌರ್ಜನ್ಯ ತೋರಿ ಕಂಡಕಂಡವರಿಗೆ ಹೊಡೆದು ಬಡಿದು ಸುಮಾರು 187 ಹೊರಾಟಗಾರರಿಗೆ ಜೈಲಿಗೆ ಅಟ್ಟಿರುವುದು ಅಕ್ಷಮ್ಯ ಅಪರಾಧ. ಹೋರಾಟದಲ್ಲಿ ಇಲ್ಲದವರ ಮನೆಮನೆ ಒಳಹೊಕ್ಕು ಅಮಾಯಕರನ್ನು ಎಳೆತಂದು ಜೈಲಿಗೆ ಅಟ್ಟಿರುವುದನ್ನು ಬಿಜೆಪಿ ಖಂಡಿಸುತ್ತಿದೆ. ಅಲ್ಲದೆ, ರೈತರಿಗೆ ನ್ಯಾಯವೊದಗಿಸಲು ಹೋರಾಟ ಮಾಡಲಾಗುವುದು ಎಂದು ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 7ರಂದು ಮುಖ್ಯಮಂತ್ರಿಗಳು ಸರ್ವ ಪಕ್ಷ ಸಭೆ ಕರೆದಿದ್ದಾರೆ. ಈ ಸಂದರ್ಭ ಸೇರಿರುವ ಅಮಾಯಕರನ್ನು ಬೇಶರತ್ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಗುವುದು. ಒತ್ತಾಯಕ್ಕೆ ಮಣಿಯದಿದ್ದರೆ ರಾಜ್ಯದ್ಯಾಂತ ಹೋರಾಟ ನಡೆಸಲಾಗುವುದು. ಅಮಾಯಕರಿಗೆ ನ್ಯಾಯ ಒದಗಿಸುವುದೇ ನಮ್ಮ ಆದ್ಯ ಕರ್ತವ್ಯ ಎಂದರು.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರತಿಪಕ್ಷಗಳ ಹೋರಾಟದಿಂದ ಸಚಿವ ಜಾರ್ಜ್‌ರ ರಾಜಿನಾಮೆ ಪಡೆಯಲಾಗಿತ್ತು. ಈ ಪ್ರಕರಣವನ್ನು ಸಿಒಡಿಗೆ ಕೊಡಲು ಹೇಳಿದರೂ ಸಿಐಡಿ ಮತ್ತು ನ್ಯಾಯಾಂಗ ತನಿಖೆಗೆ ಕೊಟ್ಟಿದ್ದಾರೆ. ನ್ಯಾಯಾಂಗ ತನಿಖೆ ಮಾಡುವುದಕ್ಕೆ ಅಧಿಕಾರಿಗಳು ತಯಾರಿದ್ದರೂ ಅವರಿಗೆ ಸಿಬ್ಬಂದಿ, ಕೊಠಡಿ ಮತ್ತು ವಾಹನಗಳನ್ನು ಕೊಡದೆ ಕಾಲಹರಣ ಮಾಡಿ ಜಾರ್ಜ್‌ರನ್ನು ರಕ್ಷಣೆ ಮಾಡುವ ಕೆಲಸ ಸರಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಗೋವಾ ರಾಜ್ಯ ಮತ್ತು ಮಹಾರಾಷ್ಟ್ರ ಮತ್ತು ಕೇಂದ್ರ ಸರಕಾರ ಹತ್ತು ವರ್ಷದಿಂದ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಮಹದಾಯಿ ತೀರ್ಪಿನ ಬಗ್ಗೆ ಚರ್ಚೆ ಮಾಡಬಹುದಿತ್ತು. ಈಗ ಕೇಂದ್ರದಲ್ಲಿ ಮೋದಿ ಸರಕಾರ ಇರುವುದರಿಂದ ಬಿಜೆಪಿ ಮೇಲೆ ಗೊಬೆ ಕುರಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಈಗಲೂ ಕಾಲ ಮಿಂಚಿಲ್ಲ, ಸರ್ವಪಕ್ಷಗಳು ಸೇರಿ ಈ ಮಹದಾಯಿ ಯೋಜನೆ ಸಮಸ್ಯೆಯನ್ನು ಬಗೆಹರಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ, ಬಸುವರಾಜ ಓಶಿಮಠ, ಎಸ್.ಪಿ.ಸಮ್ಮಸಗಿ, ಬಿ.ಎಂ.ರಾಯ್ಕರ, ಗುಡ್ಡಪ್ಪ ಕಾತೂರ, ನಾಗಭೂಷಣ ಹಾವಣಗಿ, ಫಣಿರಾಜ ಹದಳಗಿ, ರಾಜು ನಾಯಕ (ವಡಗಟ್ಟಾ), ಚೆನ್ನಪ್ಪ ಹಿರೇಮಠ, ಸುಭಾಸ ಲಮಾಣಿ, ವ್ಯಾ.ಪಿ.ಪಾಟೀಲ, ಚಂದ್ರು ಗಾಣಿಗೇರ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X