Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಛೋಟಾರಾಜನ್ ಕುರಿತ ಪುಸ್ತಕದ ವಿಚಾರದಲ್ಲಿ...

ಛೋಟಾರಾಜನ್ ಕುರಿತ ಪುಸ್ತಕದ ವಿಚಾರದಲ್ಲಿ ಜೆ.ಡೇ ಹತ್ಯೆ: ಸಿಬಿಐ

ವಾರ್ತಾಭಾರತಿವಾರ್ತಾಭಾರತಿ6 Aug 2016 8:12 PM IST
share
ಛೋಟಾರಾಜನ್ ಕುರಿತ ಪುಸ್ತಕದ  ವಿಚಾರದಲ್ಲಿ ಜೆ.ಡೇ ಹತ್ಯೆ: ಸಿಬಿಐ

ಮುಂಬೈ, ಆ.6: ಪತ್ರಕರ್ತ ಜೆ.ಡೇ ಹತ್ಯೆ ಪ್ರಕರಣದಲ್ಲಿ ಸಿಬಿಐ ಇಂದು ಗ್ಯಾಂಗ್‌ಸ್ಟರ್ ಛೋಟಾ ರಾಜನ್ ವಿರುದ್ಧ ಪೂರಕ ಆರೋಪ ಪಟ್ಟಿಯೊಂದನ್ನು ದಾಖಲಿಸಿದೆ. ಡೇಯವರ ಬರಹಗಳು ಹಾಗೂ ಅವರು ಪ್ರಕಟಿಸಲುದ್ದೇಶಿಸಿದ್ದ ಪುಸ್ತಕವೊಂದರಲ್ಲಿ ರಾಜನ್‌ನನ್ನು ‘ಕ್ಷುಲ್ಲಕ ಜಂತು’ ವೆಂಬಂತೆ ಚಿತ್ರಿಸಿದ್ದುದು ಅವರ ಹತ್ಯೆಗೆ ಕಾರಣವೆಂದು ಅದು ಹೇಳಿದೆ.

ಇಲ್ಲಿನ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ(ಮೊಕಾ) ನ್ಯಾಯಾಲಯದಲ್ಲಿ ಈ ಪೂರಕ ಆರೋಪ ಪಟ್ಟಿಯನ್ನು ದಾಖಲಿಸಲಾಗಿದೆ.

ಖ್ಯಾತ ಅಪರಾಧ ವರದಿಗಾರನಾಗಿದ್ದ ಡೇ,‘ಚಿಂದಿ-ರ್ಯಾಗ್ಸ್ ಟು ರಿಚಸ್’ ಶಿರೋನಾಮೆಯ ಪುಸ್ತಕವೊಂದನ್ನು ಬರೆಯುವ ಯೋಜನೆಯಲ್ಲಿದ್ದರು. ಅದರಲ್ಲಿ ಅವರು ವಿನಮ್ರ ಮೂಲಗಳ 20 ಗ್ಯಾಂಗ್‌ಸ್ಟರ್‌ಗಳ ಕತೆಗಳನ್ನು ಬರೆಯಲಿದ್ದರು.

ತನ್ನ ರಕ್ಷಣೆಗಾಗಿ ಹಾಗೂ ಕುಟುಂಬಕ್ಕೆ ಸಂಪತ್ತನ್ನು ಕ್ರೋಡೀಕರಿಸುವುದಕ್ಕಾಗಿ ರಾಜನ್ ಉಪಯೋಗಿಸುತ್ತಿದ್ದ ನಕಲಿ ದೇಶಭಕ್ತನ ಮುಖವಾಡವನ್ನು ಡೇ ಬಯಲು ಮಾಡಲಿದ್ದರು. ತನ್ನನ್ನು ದೊಡ್ಡವನನ್ನಾಗಿ ಮಾಡಿದವರ ಬಗ್ಗೆ ಆತನಿಗೆ ಕಾಳಜಿಯಿರಲಿಲ್ಲವೆಂದು ಡೇ. ಬರೆಯಲಿದ್ದರೆಂದು ಆರೋಪ ಪಟ್ಟಿ ತಿಳಿಸಿದೆ.

ರಾಜನ್‌ನ ಕಟ್ಟಾ ವೈರಿ ದಾವೂದ್ ಇಬ್ರಾಹೀಂ, ಆತನಿಂದ ಉತ್ತಮನೆಂದು ಪುಸ್ತಕವು ಚಿತ್ರಿಸುವುದರಲ್ಲಿತ್ತು.

 ಮಲೇಶಿಯದಲ್ಲಿ ಅಡಗಿಕೊಂಡಿದ್ದಾನೆನ್ನಲಾದ ರಾಜನ್, ಡೇಯವರ ಭೇಟಿಗೆ ಬಯಸಿದ್ದನು. ಆದರೆ, ಅವರದಕ್ಕೆ ನಿರಾಕರಿಸಿದ್ದರು. ಡೇಯವರನ್ನು ‘ದೇಶದ್ರೋಹಿಯೆಂದು’ ರಾಜನ್ ಘೋಷಿಸಿದ್ದನು. ಈಗ ಜಾಮೀನಿನಲ್ಲಿ ಹೊರಗಿರುವ ಪ್ರಕರಣದ ಆರೋಪಿ ಹಾಗೂ ಡೇಯವರ ಪ್ರತಿಸ್ಪರ್ಧಿ ಪತ್ರಕರ್ತ ಜಿಗ್ಣಾ ವೋರಾ ಎಂಬಾತ ಈ ಕೊಲೆಗೆ ಪ್ರಚೋದನೆ ನೀಡಿದ್ದನೆಂದು ಸಿಬಿಐ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X