ರಿಯೋ ಒಲಿಂಪಿಕ್ಸ್ ಹಾಕಿ: ಭಾರತ ಶುಭಾರಂಭ

ರಿಯೋ ಡಿ ಜನೈರೊ, ಆ.6: ರೂಪಿಂದರ್ ಪಾಲ್ ಸಿಂಗ್ ಬಾರಿಸಿದ ಅವಳಿ ಗೋಲುಗಳ ನೆರವಿನಿಂದ ಭಾರತ ತಂಡ ರಿಯೋ ಒಲಿಂಪಿಕ್ಸ್‌ನಲ್ಲಿ ಐರ್ಲೆಂಡ್ ವಿರುದ್ಧದ ತನ್ನ ಮೊದಲ ಪಂದ್ಯದಲ್ಲಿ 3-2 ಗೋಲುಗಳ ಅಂತರದಿಂದ ಜಯ ಸಾಧಿಸಿ ಶುಭಾರಂಭ ಮಾಡಿದೆ. ಶನಿವಾರ ಇಲ್ಲಿ ನಡೆದ ಪಂದ್ಯದಲ್ಲಿ ಕನ್ನಡಿಗ ವಿಆರ್ ರಘುನಾಥ್ 15ನೆ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ರನ್ನು ಗೋಲಾಗಿ ಪರಿವರ್ತಿಸಿ 1-0 ಮುನ್ನಡೆ ಒದಗಿಸಿಕೊಟ್ಟರು.
27ನೆ ಹಾಗೂ 48ನೆ ನಿಮಿಷದಲ್ಲಿ ಗೋಲು ಬಾರಿಸಿದ ರೂಪಿಂದರ್ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಐರ್ಲೆಂಡ್ ಎರಡು ಗೋಲು ಬಾರಿಸಿ ಭಾರತಕ್ಕೆ ಪ್ರತಿರೋಧ ಒಡ್ಡಿತು.
Next Story





