Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜಧಾನಿಯಲ್ಲಿ ಪೊಲೀಸ್ ಭದ್ರತೆಯಲ್ಲಿ...

ರಾಜಧಾನಿಯಲ್ಲಿ ಪೊಲೀಸ್ ಭದ್ರತೆಯಲ್ಲಿ ಜೆಸಿಬಿಗಳ ಘರ್ಜನೆ

ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ6 Aug 2016 11:40 PM IST
share
ರಾಜಧಾನಿಯಲ್ಲಿ ಪೊಲೀಸ್ ಭದ್ರತೆಯಲ್ಲಿ ಜೆಸಿಬಿಗಳ ಘರ್ಜನೆ

ಬೆಂಗಳೂರು, ಆ.6: ರಾಜ್ಯ ಸರಕಾರದ ನಿರ್ದೇಶನದ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೊಮ್ಮನಹಳ್ಳಿ, ಯಲಹಂಕ ಹಾಗೂ ಮಹದೇವಪುರ ವಲಯಗಳಲ್ಲಿ ಒತ್ತುವರಿಯಾಗಿರುವ ರಾಜಕಾಲುವೆಗಳನ್ನು ಬಿಗಿ ಪೊಲೀಸ್ ಭದ್ರತೆಯ ನಡುವೆ ತೆರವುಗೊಳಿಸುವ ಕಾರ್ಯಾಚರಣೆಯನ್ನು ರವಿವಾರ ಬೆಳಗ್ಗೆ ಕೈಗೊಳ್ಳಲಾಗಿತ್ತು.

ನಗರದಲ್ಲಿ ಇತ್ತೀಚೆಗೆ ಬಿದ್ದಂತಹ ಧಾರಾಕಾರ ಮಳೆಯಿಂದಾಗಿ ಕೋಡಿಚಿಕ್ಕನಹಳ್ಳಿ, ಸಾರಕ್ಕಿ ಕೆರೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು ಜಲಾವೃತಗೊಂಡು ಜನ ಸಾಮಾನ್ಯರು ಸಂಕಷ್ಟ ಅನುಭವಿಸಿದ್ದರು. ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನು ನಿರ್ಮಿಸಿಕೊಂಡ ಪರಿಣಾಮ ಮಳೆ ನೀರು ಸರಾಗವಾಗಿ ಹರಿಯದೆ ತಗ್ಗುಪ್ರದೇಶದ ಮನೆಗಳು, ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗ್ಗಿ ರಸ್ತೆಯೆಲ್ಲ ಕೆರೆಯಂತಾಗಿತ್ತು.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಬಿಬಿಎಂಪಿ, ಬಿಡಿಎ, ಬೆಂಗಳೂರು ಜಲಮಂಡಳಿ ಹಾಗೂ ಬಿಎಂಟಿಎಫ್ ಅಧಿಕಾರಿಗಳ ಸಭೆ ನಡೆಸಿ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸಿ ಎಂದು ಕಟ್ಟುನಿಟ್ಟಿನ ಆದೇಶ ನೀಡಿದ್ದರು. ಇದರಿಂದಾಗಿ, ಕಾರ್ಯಪ್ರವೃತ್ತರಾದ ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದರು.
 ಬೊಮ್ಮನಹಳ್ಳಿ ವಲಯದ ಅವನಿಶೃಂಗೇರಿನಗರದಲ್ಲಿ ರಾಜಕಾಲುವೆ ಮೇಲೆ ನಿರ್ಮಿಸಿದ್ದ 9 ಕಟ್ಟಡಗಳನ್ನು ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತ ಮುನಿವೀರಪ್ಪ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯರು ಹಾಗೂ ಬಿಬಿಎಂಪಿ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು.
ಮಹದೇವಪುರ ವಲಯದ ಕಸವನಹಳ್ಳಿ ಹಾಗೂ ಕೈಕೊಂಡ್ರಹಳ್ಳಿ ಕೆರೆಗಳ ನಡುವೆ ಹಾದುಹೋಗಿರುವ ಸುಮಾರು 1 ಎಕರೆ ಪ್ರದೇಶದ ರಾಜಕಾಲುವೆ ತೆರವುಗೊಳಿಸಿ ಸರಕಾರದ ವಶಕ್ಕೆ ಪಡೆಯಲಾಗಿದೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಿಸಿಕೊಂಡಿದ್ದ ಕಟ್ಟಡಗಳು, ಕಾಂಪೌಂಡ್ ಹಾಕಿದ್ದ ನಿವೇಶನಗಳು, ಪಾರ್ಕಿಂಗ್ ಶೆಡ್‌ಗಳು, ಉದ್ಯಾನವನಗಳನ್ನು ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವುಗೊಳಿಸಲಾಯಿತು.
 ಯಲಹಂಕ ವಲಯದ ಸಹಕಾರನಗರ, ಕೊಡಿಗೆಹಳ್ಳಿ, ವಿದ್ಯಾರಣ್ಯಪುರ, ಪುಟ್ಟೇನಹಳ್ಳಿ, ಹೆಣ್ಣೂರು, ಅಗ್ರಹಾರ ಲೇಔಟ್ ಹಾಗೂ ಜಕ್ಕೂರಿನಲ್ಲಿ ಕಾರ್ಯಾಚರಣೆ ನಡೆಸಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಲಾಯಿತು. ಜಕ್ಕೂರಿನಲ್ಲಿ ರೇಡಿಯಂಟ್ ಜಾಸ್ಮಿನ್ ಗಾರ್ಡನ್, ಸುರಭಿಲೇಔಟ್‌ನಲ್ಲಿ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್, ಅಗ್ರಹಾರ ಲೇಔಟ್‌ನಲ್ಲಿ ಆದಿತ್ಯ ಕಾಲೇಜು ಹಾಗೂ ಹೆಣ್ಣೂರಿನಲ್ಲಿ ಎರಡು ಖಾಸಗಿ ಕಟ್ಟಡಗಳಿಂದ ಆಗಿದ್ದ ಒತ್ತುವರಿಯನ್ನು ತೆರವುಗೊಳಿಸಿದರು.

ಕಳೆದ ವರ್ಷ ಮಳೆ ಬಂದ ಸಂದರ್ಭದಲ್ಲಿ ರಾಜಕಾಲುವೆ ಒತ್ತುವರಿಯಿಂದಾಗಿ ಸುರಭಿಲೇಔಟ್ ಜಲಾವೃತಗೊಂಡು ಸಾಕಷ್ಟು ಸಮಸ್ಯೆಗಳು ಸೃಷ್ಟಿಯಾಗಿತ್ತು. ಈ ಬಾರಿ ಸಾರಕ್ಕಿ ಬಡಾವಣೆಯಲ್ಲಿ ಆದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಭವಿಷ್ಯದಲ್ಲಿ ಇಂತಹ ಸಮಸ್ಯೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಬಿಬಿಬಿಂಪಿ ವಲಯ ಆಯುಕ್ತ ಸರ್ಫ್ರಾಝ್‌ಖಾನ್ ತಿಳಿಸಿದರು.
ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು. ಇಂದಿನ ಕಾರ್ಯಾಚರಣೆಯಲ್ಲಿ ಸುಮಾರು 280 ಕೋಟಿ ರೂ.ವೌಲ್ಯದ ಆಸ್ತಿಯನ್ನು ತೆರವುಗೊಳಿಸಲಾಗಿದೆ ಎಂದು ಅವರು ಹೇಳಿದರು.
ಆಯುಕ್ತರಿಗೆ ೇರಾವ್: ಬೊಮ್ಮನಹಳ್ಳಿಯ ಅವನೀಶೃಂಗೇರಿ ನಗರದಲ್ಲಿ ಮನೆಗಳು ಹಾಗೂ ಕಟ್ಟಡಗಳನ್ನು ಕಳೆದುಕೊಂಡವರು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ಗೆ ೇರಾವ್ ಹಾಕಿ, ಮನೆಗಳನ್ನು ಒಡೆಯದಂತೆ ದುಂಬಾಲು ಬಿದ್ದರು. ರಾಜಕಾಲುವೆಯನ್ನು ಒತ್ತುವರಿ ಮಾಡಿ ನಿವೇಶನ ರಚನೆ ಮಾಡಿರುವ ವಿಷಯ ನಮಗೆ ಗೊತ್ತಿರಲಿಲ್ಲ. ಮುಂಚಿತವಾಗಿಯೆ ಈ ವಿಷಯ ನಮಗೆ ಗೊತ್ತಿದ್ದರೆ ನಾವು ಮನೆಗಳನ್ನೆ ಕಟ್ಟುತ್ತಿರಲಿಲ್ಲ ಎಂದು ಸಂತ್ರಸ್ತರು ಮನವಿ ಮಾಡಿದರು.

ಒತ್ತುವರಿ ತೆರವು ಕಾರ್ಯಾ ಚರಣೆಯನ್ನು ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ. ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿದಂತೆ ನಡೆದಿರುವ ಸರ್ವೇಯನ್ನು ಆಧಾರವಾಗಿಟ್ಟುಕೊಂಡು, ತೆರವುಗೊಳಿಸಲಾಗುತ್ತಿದೆ. ಇತ್ತೀಚೆಗಷ್ಟೇ ಮಳೆಯಿಂದ ಆದಂತಹ ಅವಾಂತರವನ್ನು ನಾವೆಲ್ಲ ನೋಡಿದ್ದೇವೆ. ಕೆಲವರು ಮಾಡಿರುವ ತಪ್ಪಿಗೆ ಸಾವಿರಾರು ಜನ ಸಂಕಷ್ಟಪಡುವಂತಾಗಿದೆ.
-ಬಿ.ಎನ್.ಮಂಜುನಾಥ ರೆಡ್ಡಿ, ಮೇಯರ್

ಬ್ಯಾಂಕ್‌ನಲ್ಲಿ ಸಾಲ ಪಡೆದು 15 ವರ್ಷಗಳ ಹಿಂದೆ ಮನೆಯನ್ನು ಕಟ್ಟಲಾಗಿದೆ. ಕಂದಾಯವನ್ನು ಪ್ರತಿವರ್ಷ ಕಟ್ಟುತ್ತಿದ್ದೇವೆ. ಮನೆಯು ‘ಎ’ ಖಾತೆಯನ್ನು ಹೊಂದಿದೆ. ನನ್ನ ಪತ್ನಿ ಗರ್ಭಿಣಿಯಾಗಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ತೆಗೆದುಕೊಳ್ಳಲು ಅವಕಾಶ ನೀಡಿಲ್ಲ. ಇದೀಗ ನಮಗೆ ದಿಕ್ಕು ತೋಚದಂತಾಗಿದೆ.
-ದಿಲೀಪ್, ಅವನೀಶೃಂಗೇರಿ ನಗರ ನಿವಾಸಿ

ರಾಜಕಾಲುವೆ ಒತ್ತುವರಿ ಮಾಡಿಕೊಂಡವರು ಅಮಾಯಕರಿಗೆ ನಿವೇಶನಗಳನ್ನು ಮಾರಾಟ ಮಾಡಿ ಹೋಗಿದ್ದಾರೆ. ಯಾರೋ ಮಾಡಿದ ತಪ್ಪಿಗೆ ಅಮಾಯಕರು ಬಲಿಯಾಗಿದ್ದಾರೆ. ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು.
-ಸತೀಶ್‌ರೆಡ್ಡಿ, ಬೊಮ್ಮನಹಳ್ಳಿ ಶಾಸಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X