ನೇಣುಬಿಗಿದು ಯುವಕನ ಮೃತ್ಯು
ಉಪ್ಪಿನಂಗಡಿ, ಆ.6: ಕರಾಯ ಗ್ರಾಮದ ಕಲ್ಲಾಪು ಎಂಬಲ್ಲಿ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಇಲ್ಲಿನ ಪಿಜಿನ ಎಂಬವರ ಮಗ ದಿನೇಶ ಕೆ.(30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





