ಭಿವಂಡಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿತ; 2 ಸಾವು

ಮುಂಬೈ, ಆ.7: ಇಲ್ಲಿನ ಹನುಮಾನ್ ಟೆಕ್ರಿ ಪ್ರದೇಶದಲ್ಲಿರುವ ಎರಡು ಅಂತಸ್ತಿನ ಕಟ್ಟಡವೊಂದು ರವಿವಾರ ಬೆಳಗ್ಗೆ ಕುಸಿದು ಬಿದ್ದಿದ್ದು,ಕಟ್ಟಡದ ಆವಶೇಷಗಳಡಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ.
ಓರ್ವನನ್ನು ರಕ್ಷಿಸಲಾಗಿದ್ದು, ಕಟ್ಟಡದ ಆವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಾರ್ಯಾಚರಣೆಗೆ ಸ್ಥಳೀಯರು ಕೈ ಜೋಡಿಸಿದ್ದಾರೆ.
Next Story





