ಉಳ್ಳಾಲ: ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

ಉಳ್ಳಾಲ, ಆ.7: ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈಯನ್ಸ್‌ನ ಮಕ್ಕಳ ವಿಭಾಗದ ವತಿಯಿಂದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವು ಉಳ್ಳಾಲ ಮಾಸ್ತಿಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಸುಜಾತಾ ಕಣ್ಣಪ್ಪನ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲೆ ಸಬಿತಾ ನಾಯಕ್, ಅಂಗನವಾಡಿ ಶಿಕ್ಷಕಿ ವೇದಾವತಿ, ಸುಜಯಾ ಉಪಸ್ಥಿತರಿದ್ದರು. ಸಹಾಯಕ ಉಪನ್ಯಾಸಕಿ ಶಂಸೀನಾ ಎಂ. ಸ್ತನ್ಯಪಾನದ ಬಗ್ಗೆ ಮಾಹಿತಿ ನೀಡಿದರು. ಸುಮಾರು 35 ಮಹಿಳೆಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ನರ್ಸಿಂಗ್ ವಿದ್ಯಾರ್ಥಿನಿ ಅಲಿನಾ ಸನ್ನು ಕಾರ್ಯಕ್ರಮ ನಿರೂಪಿಸಿದರು.
Next Story





