Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರೋಗ್ಯದ ಸಮಸ್ಯೆಗೆ ಮನೋಜ್ಞಾನ ಅಗತ್ಯ:...

ಆರೋಗ್ಯದ ಸಮಸ್ಯೆಗೆ ಮನೋಜ್ಞಾನ ಅಗತ್ಯ: ಶಾಸಕ ಬಿ.ಬಿ.ನಿಂಗಯ್ಯ

ಉಚಿತ ಆರೋಗ್ಯ ತಪಾಸಣೆ

ವಾರ್ತಾಭಾರತಿವಾರ್ತಾಭಾರತಿ9 Aug 2016 10:04 PM IST
share
ಆರೋಗ್ಯದ ಸಮಸ್ಯೆಗೆ ಮನೋಜ್ಞಾನ ಅಗತ್ಯ: ಶಾಸಕ ಬಿ.ಬಿ.ನಿಂಗಯ್ಯ

ಮೂಡಿಗೆರೆ, ಆ.9: ಆರೋಗ್ಯ ಸಮಸ್ಯೆಯಿಂದ ಮುಕ್ತರಾಗಲು ದಿನನಿತ್ಯದ ಚಟುವಟಿಕೆಗಳಲ್ಲಿ ಆರೋಗ್ಯವನ್ನು ವೃದ್ಧಿಸಿಕೊಳ್ಳುವ ಮನೋಜ್ಞಾನ ಬೆಳೆಸಿಕೊಳ್ಳುವುದು ಅಗತ್ಯ ಎಂದು ಶಾಸಕ ಬಿ.ಬಿ.ನಿಂಗಯ್ಯ ಹೇಳಿದ್ದಾರೆ.

 ಇತ್ತೀಚೆಗೆ ಪಟ್ಟಣದ ಲಯನ್ಸ್ ವೃತ್ತದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸುವರ್ಣ ಆರೋಗ್ಯಸುರಕ್ಷಾ ಟ್ರಸ್ಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ಸಹಯೋಗದಲ್ಲಿ ಆ.2ರಿಂದ 7ರವರೆಗೆ ಮೂಡಿಗೆರೆ ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಯೋಜನೆ ಕುರಿತು ಅರಿವು ಅಭಿಯಾನ ಹಾಗೂ ಬೀದಿ ನಾಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಿರುವ ಈ ದಿನಗಳಲ್ಲಿ ಅವರ ಆರೋಗ್ಯದ ಕಡೆ ಕಾಳಜಿ ವಹಿಸುವುದು ಅತಿ ಮುಖ್ಯವಾಗಿದೆ ಎಂದರು.

ತಾಲೂಕಿನಲ್ಲಿ ಅತೀ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿದ್ದು, ಇಂತಹ ಕಾರ್ಯಕ್ರಮಗಳಿಂದ ಪ್ರಯೋಜನ ಪಡೆದುಕೊಳ್ಳುವ ಅಗತ್ಯವಿದೆ ಎಂದ ಅವರು, ಆರೋಗ್ಯಕ್ಕೆ ಸಂಬಂಧಿಸಿದ ಬೀದಿ ನಾಟಕಗಳಿಂದ ಜನರಲ್ಲಿ ಅರಿವು ಮೂಡಿಸುವುದರಿಂದ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಸಾಧ್ಯವಿದೆ ಎಂದು ತಿಳಿಸಿದರು.

ವಾರ್ತಾ ಇಲಾಖೆಯ ಮೂರು ವಾಹನಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಕಲಾಜಾಥಾ ಹಾಗೂ ನಾಟಕ ಪ್ರದರ್ಶನಗಳು ನಡೆದವು. ವಾಜಪೇಯಿ ಆರೋಗ್ಯ ಶ್ರೀ, ರಾಜೀವ್ ಆರೋಗ್ಯ ಶ್ರೀ, ರಾಷ್ಟ್ರೀಯ ಸ್ವಾಸ್ಥ ಬಿಮಾ ಯೋಜನೆ, ಇಂದಿರಾ ಸುರಕ್ಷಾ ಯೋಜನೆ, ಜ್ಯೋತಿ ಸಂಜೀವಿನಿ ಯೋಜನೆ ಸಹಿತ ಸರಕಾರದಿಂದ ಉಚಿತ ಆರೋಗ್ಯ ಯೋಜನೆಗಳ ಬಗ್ಗೆ ಸಾರ್ವಜನಿಕ ಮಾಹಿತಿ ನೀಡಲಾಯಿತು. ಕಲಾ ತಂಡಗಳಿಂದ ಆರೋಗ್ಯಕ್ಕೆ ಸಂಬಂಧಿಸಿದ ಜಾನಪದ ಹಾಡು, ಲಾವಣಿ ಪದ, ಗೀಗೀಪದ ಸಹಿತ ಗ್ರಾಮೀಣ ಶೈಲಿಯ ಹಾಡುಗಳು ಸಾರ್ವಜನಿಕರನ್ನು ರಂಜಿಸಿದವು. ಈ ಸಂದರ್ಭ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾರಾಯಣ ಸ್ವಾಮಿ, ಎಂ.ಕೆ.ಪ್ರಾಣೇಶ್, ಕೆ.ಸಿ.ರತನ್, ಜಿ.ಎಚ್.ಹಾಲಪ್ಪಗೌಡ ಪಾರ್ವತಮ್ಮ, ಅಮಿತಾ ಮುತ್ತಪ್ಪ, ಶಾಮಣ್ಣ, ಟಿ.ಎ.ಮದೀಶ್, ವಿನೋದ್ ಚಂದ್ರ, ಮಂಜುನಾಥ, ಸುವರ್ಣ ಕುಮಾರ, ಡಾ.ಯೋಗೀಶ್, ಡಾ.ಸುಂದರೇಶ್, ಜೆ.ಡಿ.ಮೂರ್ತಿ, ಚಂದ್ರೇಶ್, ಶಬೀರ್ ಅಹ್ಮದ್, ನೂರುಲ್ಲ, ಯು.ಬಿ.ಮಂಜಯ್ಯ, ಬಿ.ಎನ್.ಮುತ್ತಪ್ಪ, ಛಲವಾದಿ ಯು.ಆರ್.ರುದ್ರಯ್ಯ ಮತ್ತಿತತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X