Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರ ಸರಕಾರದ ವಿರುದ್ಧ ಕಾರ್ಮಿಕರ...

ಕೇಂದ್ರ ಸರಕಾರದ ವಿರುದ್ಧ ಕಾರ್ಮಿಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ9 Aug 2016 10:08 PM IST
share
ಕೇಂದ್ರ ಸರಕಾರದ ವಿರುದ್ಧ ಕಾರ್ಮಿಕರ ಆಕ್ರೋಶ

ಶಿವಮೊಗ್ಗ

ಶಿವಮೊಗ್ಗ, ಆ.9: ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ, ಉದ್ಯೋಗ ಸೃಷ್ಟಿಗೆ ಕ್ರಮ ಹಾಗೂ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರಕಾರದ ವಿರುದ್ಧ ಮಂಗಳವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ನಗರದ ಮುಖ್ಯ ಅಂಚೆ ಕಚೇರಿ ಎದುರು ಧರಣಿ ನಡೆಸಿತು. ಅಚ್ಛೇದಿನ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಕೇಂದ್ರ ಎನ್‌ಡಿಎ ಸರಕಾರವು ದುಬಾರಿ ದಿನಗಳನ್ನು ನೀಡುವ ಮೂಲಕ ಜನಸಾಮಾನ್ಯರ ಬದುಕಿಗೆ ಬರೆ ಹಾಕುವ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಟೀಕಾ ಪ್ರಹಾರ ನಡೆಸಿದ್ದಾರೆ. ದೇಶವಾಸಿಗಳಿಗೆ ಅಗತ್ಯವಾದ ಮೂಲಸೌಕರ್ಯ ಕಲ್ಪಿಸುವಲ್ಲಿ, ಆಹಾರ ಉತ್ಪನ್ನಗಳ ಮೇಲಿನ ಬೆಲೆ ಏರಿಕೆ ತಡೆಯುವಲ್ಲಿ, ನಿರುದ್ಯೋಗ ನಿರ್ಮೂಲನೆ ಮಾಡಿ ಉದ್ಯೋಗ ಸೃಷ್ಟಿಯಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಕನಿಷ್ಠ ವೇತನವನ್ನು 18 ಸಾವಿರ ರೂ.ಗೆ ಏರಿಸಬೇಕೆಂಬ ಕೂಗು ಇನ್ನೂ ಜಾರಿಯಾಗಿಲ್ಲ. ಈ ಸಂಬಂಧ ಬರೀ ಹುಸಿ ಭರವಸೆಗಳನ್ನು ನೀಡಲಾಗುತ್ತಿದೆ. ದಿವ್ಯ ನಿರ್ಲಕ್ಷ್ಯ ವಹಿಸಿಕೊಂಡು ಬರಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದ್ದಾರೆ. ಸೆ. 2 ರಂದು ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಅಖಿಲ ಭಾರತ ಮುಷ್ಕರಕ್ಕೆ ಕರೆಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಷ್ಕರದ ಭಾಗವಾಗಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಮುಖಂಡರು ಇದೇ ಸಂದರ್ಭದಲ್ಲಿ ಹೇಳಿದರು.

ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಸಿಐಟಿಯು ಉಪಾಧ್ಯಕ್ಷ ಎಸ್.ಬಿ. ಶಿವಶಂಕರ್ ವಹಿಸಿದ್ದರು. ಮುಖಂಡರಾದ ಎಂ. ನಾರಾಯಣ, ಹನುಮ್ಮ ಮೊದಲಾದವರು ಉಪಸ್ಥಿತರಿದ್ದರು.

 ದಾವಣಗೆರೆ

  

ದಾವಣಗೆರೆ: ಕೇಂದ್ರ ಸರಕಾರ ಜನವಿರೋಧಿ ಮತ್ತು ಕಾರ್ಮಿಕರ ವಿರೋಧಿ ನೀತಿಗಳನ್ನು ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಸಹಿ ಸಂಗ್ರಹಿಸುವ ಮೂಲಕ ಕೇಂದ್ರ ಸರಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು. ಇದೇ ವೇಳೆ ಕಾರ್ಮಿಕ ಮುಖಂಡ ಎಚ್.ಕೆ.ರಾಮಚಂದ್ರಪ್ಪ ಮಾತನಾಡಿ, ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಸಾರ್ವತ್ರಿಕ ವಿತರಣಾ ವ್ಯವಸ್ಥೆ ಜಾರಿ ಮಾಡಬೇಕು ಮತ್ತು ನಿರುದ್ಯೋಗವನ್ನು ತಡೆಗಟ್ಟಿ, ಉದ್ಯೋಗಗಳನ್ನು ಸೃಷ್ಟಿಸಲು ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮೂಲ ಕಾರ್ಮಿಕರ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕಾರ್ಮಿಕ ಕಾನಾನೂನುಗಳ ಉಲ್ಲಂಘನೆಗೆ ಶಿಕ್ಷಾರ್ಹ ಕ್ರಮಗಳನ್ನು ಬಲಗೊಳಿಸಿ. ಸಾರ್ವತ್ರಿಕವಾದ ಸಾಮಾಜಿಕ ಭದ್ರತೆಯ ರಕ್ಷಣೆ ಎಲ್ಲ ಕಾರ್ಮಿಕರಿಗೂ ಸಿಗಬೇಕು. ರಾಷ್ಟ್ರವ್ಯಾಪಿ 18 ಸಾವಿರ ರೂ. ಸಮಾನ ವೇತನ ನಿಗದಿಯಾಗಬೇಕು ಎಂದರು. ಬೋನಸ್ ಭವಿಷ್ಯ, ನಿಧಿ, ಉಪಾಧನ ಕಾಯ್ದೆ ಗಳಲ್ಲಿನ ಮಿತಿ ಹೆಚ್ಚಳ ಮಾಡಬೇಕು. ಕಾರ್ಮಿಕರ ಕಾನೂನುಗಳಿಗೆ ಕಾರ್ಮಿಕರ ವಿರೋಧಿ ತಿದ್ದುಪಡಿಗಳನ್ನು ಮಾಡಬಾರದು. ರೈಲ್ವೆ ವಿಮಾ ಮತ್ತು ರಕ್ಷಣಾ ವಲಯಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ವಿರೋಧಿಸಿ, ಇಂಡಿಯನ್ ಕಾರ್ಮಿಕರ ಸಮ್ಮೇಳನ ರೀತಿಯಲ್ಲಿ ಕರ್ನಾಟಕ ಕಾರ್ಮಿಕರ ಸಮ್ಮೇಳನವನ್ನು ರಚಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಚಂದ್ರು, ಆವರಗೆರೆ ವಾಸು ಮತ್ತಿತರರಿದ್ದರು. ಮಡಿಕೇರಿ

ಮಡಿಕೇರಿ: ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಾರ್ಮಿಕ ವಿರೋಧಿ ಹಾಗೂ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಜಿಲ್ಲಾ ಘಟಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣ ನೀತಿಗಳನ್ನು ಕೈಬಿಟ್ಟು ಜನಪರವಾದ ನಿಲುವುಗಳನ್ನು ಸರಕಾರ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸೆ.2 ರಂದು ದೇಶ ವ್ಯಾಪಿ ನಡೆಯುತ್ತಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಪೂರಕವಾಗಿ ಈ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ಪ್ರತಿಭಟನಾಕಾರರು ಇದೇ ಸಂದಭರ್ ತಿಳಿಸಿದರು.

ಇತ್ತೀಚೆಗೆ ನಡೆದ ಗಾರ್ಮೆಂಟ್ ನೌಕರರ ಮುಷ್ಕರ ಹಾಗೂ ಸಾರಿಗೆ ನೌಕರರ ಮುಷ್ಕರ ಕಾರ್ಮಿಕ ವರ್ಗದ ಹೋರಾಟದ ಮನೋಪ್ರವೃತ್ತಿಯನ್ನು ಪ್ರತಿಬಿಂಬಿಸಿದೆ ಮತ್ತು ಸರಕಾರಗಳ ವೈಫಲ್ಯಗಳಿಗೆ ಸಾಕ್ಷಿಯಾಗಿದೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾರ್ಮಿಕ ಸಂಘಟನೆಗಳ ಮುಖಂಡ ಡಾ.ದುರ್ಗಾಪ್ರಸಾದ್ ಆರೋಪಿಸಿದರು. ಕಾರ್ಮಿಕ ಕಾನೂನುಗಳ ತಿದ್ದುಪಡಿಯ ಪ್ರಸ್ತಾಪ, ಕಾರ್ಮಿಕರ ಭವಿಷ್ಯ ನಿಧಿ ಹಣಕ್ಕೆ ಸಂಬಂಧಿಸಿದ ಕೇಂದ್ರ ಸರಕಾರದ ಧೋರಣೆಯನ್ನು ವಿರೋಧಿಸುವ ಸಮಯ ಎದುರಾಗಿದೆ. ನಿತ್ಯ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ ಮತ್ತು ನಿರುದ್ಯೋಗ ತಾಂಡವವಾಡುತ್ತಿದೆ. ಸಾಮಾನ್ಯ ಜನರಿಗೆ ಉನ್ನತ ಶಿಕ್ಷಣ ಕನಸಿನ ಮಾತಾಗಿದ್ದು, ಯುವ ಜನತೆ ದಿಕ್ಕುತಪ್ಪಿದಂತಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದ್ದು, ಯಾರಿಗೂ ರಕ್ಷಣೆ ಇಲ್ಲದ ಪರಿಸ್ಥಿತಿ ಉದ್ಭವವಾಗಿದೆ.

ಅಸಂಘಟಿತ ವಲಯದಲ್ಲಿ ಕನಿಷ್ಠ ವೇತನವನ್ನು ಜಾರಿಗೊಳಿಸುವುದು ರಾಜ್ಯ ಸರಕಾರಕ್ಕೆ ಈವರೆಗೂ ಸಾಧ್ಯವಾಗಿಲ್ಲ ಮತ್ತು ಕಾರ್ಮಿಕರಿಗೆ ಯಾವುದೇ ಸಾಮಾಜಿಕ ಭದ್ರತೆಗಳಿಲ್ಲ ಎಂದು ದುರ್ಗಾಪ್ರಸಾದ್ ಆರೋಪಿಸಿದರು. ಎಐಟಿಯುಸಿ, ಸಿಐಟಿಯು, ಐಎನ್‌ಟಿಯುಸಿ, ಎಲ್‌ಐಸಿ ಹಾಗೂ ಬಿಎಸ್ಸೆನ್ನೆಲ್ ನೌಕರರ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದವು. ಜಿಲ್ಲಾಡಳಿತಕ್ಕೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X