Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜಕೀಯಕ್ಕೆ ಕಾರಣವಾದ ಅಂಗಡಿ ತೆರವು...

ರಾಜಕೀಯಕ್ಕೆ ಕಾರಣವಾದ ಅಂಗಡಿ ತೆರವು ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ9 Aug 2016 10:10 PM IST
share
ರಾಜಕೀಯಕ್ಕೆ ಕಾರಣವಾದ ಅಂಗಡಿ ತೆರವು ಕಾರ್ಯಾಚರಣೆ

 ಶಿವಮೊಗ್ಗ, ಆ.9: ಬೆಂಗಳೂರು ಮಹಾನಗರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿರುವ ಬೃಹದಾಕಾರದ ಕಟ್ಟಡಗಳನ್ನು ಅಲ್ಲಿನ ಮಹಾನಗರ ಪಾಲಿಕೆ ಆಡಳಿತ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುತ್ತಿದೆ. ಆದರೆ ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿದ್ದ ಪುಟ್ಟ ಪೆಟ್ಟಿಗೆ ಅಂಗಡಿ ತೆರವುಗೊಳಿಸಲು ಸ್ಥಳೀಯ ಮಹಾನಗರ ಪಾಲಿಕೆ ಆಡಳಿತ ಹರಸಾಹಸ ಪಡುವಂತಾಗಿದೆ.

 ಪುಟ್ಟ ಪೆಟ್ಟಿಗೆ ಅಂಗಡಿ ತೆರವು ಕಾರ್ಯಾ ಚರಣೆ ನಗರದಲ್ಲಿ ಭಾರೀ ದೊಡ್ಡ ರಾಜಕೀಯ ಹೈಡ್ರಾಮಾಕ್ಕೆ ಕಾರಣವಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪನವರು ಅಖಾಡಕ್ಕೆ ಧುಮುಕಿದ್ದಾರೆ. ಕಾಂಗ್ರೆಸ್‌ನ ಕೆಲ ನಾಯಕರು ಅಧಿಕಾರಿಗಳ ಮೂಲಕ ತಿರುಗೇಟು ನೀಡುವ ಕೆಲಸ ಮಾಡುತ್ತಿದ್ದಾರೆ. ಈ ನಡುವೆ ಎರಡೂ ಪಕ್ಷಗಳ ನಡುವೆ ಸಿಲುಕಿ ಪಾಲಿಕೆಯ ಅಧಿಕಾರಿಗಳು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಮಂಗಳವಾರ ತೆರವು ಕಾರ್ಯಾಚರಣೆಯು ಸಂಪೂರ್ಣವಾಗಿ ರಾಜಕೀಯ ಹೈಡ್ರಾಮಾಕ್ಕೆ ವೇದಿಕೆಯಾಯಿತು. ಬೆಳಗ್ಗೆ ಸುಮಾರು 10 ಗಂಟೆಗೆ ಆರಂಭವಾದ ರಾಜಕೀಯ ಮೇಲಾಟವು ಮಧ್ಯಾಹ್ನ 2:30 ರವರೆಗೆ ಮುಂದುವರಿದಿತ್ತು. ತದನಂತರ ಏಕಾಏಕಿ ಪಾಲಿಕೆ ಆಡಳಿತವು ತೆರವು ಕಾರ್ಯಾಚರಣೆಯನ್ನು ಅರ್ಧಕ್ಕೆ ಸ್ಥಗಿತಗೊಳಿಸಿ ಹಿಂದಿರುಗಿತು. ಪೆಟ್ಟಿಗೆ ಅಂಗಡಿ ಇಟ್ಟುಕೊಂಡಿರುವ ವ್ಯಕ್ತಿಯು ಬಿಜೆಪಿ ಪಕ್ಷದ ಕಾರ್ಯಕರ್ತನೆಂಬ ಕಾರಣಕ್ಕೆ, ಕಾಂಗ್ರೆಸ್ ಶಾಸಕ ಕೆ.ಬಿ.ಪ್ರಸನ್ನಕುಮಾರ್‌ರವರ ಒತ್ತಡಕ್ಕೆ ಮಣಿದು ಈ ಕಾರ್ಯಾಚರಣೆ ನಡೆಸುತ್ತಿದ್ದೀರಿ. ನಗರದ ಇತರ ಪ್ರದೇಶಗಳಲ್ಲಿಯೂ ಸಾರ್ವಜನಿಕ ಸ್ಥಳಗಳಲ್ಲಿ ಪೆಟ್ಟಿಗೆ ಅಂಗಡಿಗಳಿವೆ. ಮೊದಲು ಅವುಗಳನ್ನು ತೆರವುಗೊಳಿಸಿ. ತದನಂತರ ಈ ಅಂಗಡಿ ತೆರವುಗೊಳಿಸಿ ಎಂದು ಬಿಜೆಪಿ ಕಾರ್ಯಕರ್ತರು ಆಯುಕ್ತರಿಗೆ ಒತ್ತಾಯಿಸಿದರು. ಕಂಗಾಲು: ಕೆ.ಎಸ್.ಈಶ್ವರಪ್ಪನವರೇ ನೇರವಾಗಿ ಪ್ರತಿಭಟನೆಗಿಳಿದಿದ್ದು ಆಯುಕ್ತೆ ತುಷಾರಾಮಣಿ ನೇತೃತ್ವದ ಪಾಲಿಕೆ ತಂಡವನ್ನು ತಬ್ಬಿಬ್ಬುಗೊಳ್ಳುವಂತೆ ಮಾಡಿತು. ಇದರಿಂದ ಅವರೂ ಕೂಡ ಕೆಲ ಸಮಯ ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿಯ ಅವಲೋಕನ ನಡೆಸಿದರು. ಈ ವೇಳೆ ಅವರು ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿ ಕೂಡ ಹಿಂದಿರುಗಿದರು. ಈ ನಡುವೆ ಆಯುಕ್ತೆ ಇದ್ದ ಸ್ಥಳಕ್ಕೆ ಆಗಮಿಸಿದ ಕೆ.ಎಸ್.ಈಶ್ವರಪ್ಪನವರು, ಯಾವುದೇ ಕಾರಣಕ್ಕೂ ಅಂಗಡಿ ತೆರವುಗೊಳಿಸಲು ಬಿಡುವುದಿಲ್ಲ ಎಂದರು. ತಮ್ಮ ಸುತ್ತಲಿದ್ದ ಪೊಲೀಸರನ್ನುದ್ದೇಶಿಸಿ ಮಾತನಾಡಿದ ಅವರು, ಪೊಲೀಸರು ಹಾಗೂ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಂಘರ್ಷವೂ ಇಲ್ಲ. ನೀವು ನಮ್ಮ ಶಾಂತಿಯುತ ಹೋರಾಟಕ್ಕೆ ಅಡ್ಡಿಪಡಿಸಬೇಡಿ ಎಂದು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದರು.

ಕಂಗ್ಗಟ್ಟು: ಮತ್ತೊಂದೆಡೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿನ್ಸೆಂಟ್ ಶಾಂತಕುಮಾರ್‌ರವರು ಭೇಟಿ ನೀಡಿ ಕೆ.ಎಸ್.ಈಶ್ವರಪ್ಪ ಹಾಗೂ ಆಯುಕ್ತರ ನಡುವೆ ಸಮಾಲೋಚನೆ ನಡೆಸಿ ಹಿಂದಿರುಗಿದರು. ಈಶ್ವರಪ್ಪ ಮತ್ತವರ ತಂಡವು ಅಂಗಡಿಯೊಳಗೆ ಕುಳಿತುಕೊಂಡಿತ್ತು. ಈ ನಡುವೆ ಡಿ.ಸಿ.ಯವರು ಆಯುಕ್ತೆ ತುಷಾರಾಮಣಿಯವರೊಂದಿಗೆ ಡಿ.ಸಿ. ಕಚೇರಿಯಲ್ಲಿ ಸಮಾಲೋಚನೆ ನಡೆಸಿದರು. ತದನಂತರ ಅರ್ಧಕ್ಕೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು. ಬಡವರಿಗೆ ತೊಂದರೆ ಕೊಟ್ಟರೆ ಸುಮ್ಮನಿರುವುದಿಲ್ಲ ರಸ್ತೆ ಬದಿ ಪೆಟ್ಟಿಗೆ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿರುವ ಬಡವರನ್ನು, ರಾಜಕೀಯ ಒತ್ತಡಕ್ಕೆ ಮಣಿದು ಬೀದಿಗೆ ತಳ್ಳುವ ಕೆಲಸವನ್ನು ಪಾಲಿಕೆ ಆಡಳಿತ ಮಾಡುತ್ತಿದೆ. ಇದಕ್ಕೆ ತಾವು ಅವಕಾಶ ನೀಡುವುದಿಲ್ಲ. ಯಾವುದೇ ಕಾರಣಕ್ಕೂ ಪೆಟ್ಟಿಗೆ ಅಂಗಡಿ ತೆರವುಗೊಳಿಸಲು ಬಿಡುವುದಿಲ್ಲ. ಈ ಹಿಂದಿನ ನಗರಸಭೆೆ ತೀರ್ಮಾನದಂತೆ ಫುಟ್‌ಪಾತ್ ವ್ಯಾಪಾರಿಗಳಿಗೆ ಪುನರ್ವಸತಿ ಸೌಲಭ್ಯ ಕಲ್ಪಿಸಿದ ನಂತರವಷ್ಟೆ ಮುಂದಿನ ನಿರ್ಧಾರ ಕೈಗೊಳ್ಳಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X