Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ...

ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ10 Aug 2016 10:05 PM IST
share
ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ

ಸಾಗರ, ಆ.10: ಇಲ್ಲಿನ ತಾಲೂಕು ಆಡಳಿತದ ವತಿಯಿಂದ ನಗರಕ್ಕೆ ಹೊಂದಿಕೊಂಡಿದ್ದ ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡವರನ್ನು ತೆರವುಗೊಳಿಸುವ ಕೆಲಸಕ್ಕೆ ಬುಧವಾರ ತಹಶೀಲ್ದಾರ್ ಎನ್.ಟಿ.ಧರ್ಮೋಜಿರಾವ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಕಲ್ಮನೆ ಗ್ರಾಮಪಂಚಾಯತ್ ಅರಳಿಕೊಪ್ಪಗ್ರಾಮದಲ್ಲಿ ತೆರವು ಕಾರ್ಯಾಚರಣೆಗೆ ಹೋಗಿದ್ದ ತಹಶೀಲ್ದಾರ್ ಮತ್ತು ತಂಡದವರನ್ನು ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡು, ದೊಡ್ಡದೊಡ್ಡ ಶ್ರೀಮಂತರು ನೂರಾರು ಎಕರೆ ಸರಕಾರಿ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ. ನಾವು ಸೂರಿಲ್ಲದೆ ಮನೆ ಕಟ್ಟಿಕೊಂಡಿದ್ದು, ಅದನ್ನು ತೆರವುಗೊಳಿಸಲು ಮುಂದಾಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪತ್ರಕರ್ತರೊಂದಿಗೆ ಮಾತನಾಡಿದ ತಹಶೀಲ್ದಾರ್ ಎನ್.ಟಿ.ಧರ್ಮೋಜಿರಾವ್, ಸರಕಾರದ ಅಧಿಸೂಚನೆಯಂತೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಜನವರಿ 1/2012ರೊಳಗೆ ಮನೆ ನಿರ್ಮಿಸಿಕೊಂಡವರನ್ನು ಹೊರತು ಪಡಿಸಿ, ಈಚೆಗೆ ಸರಕಾರಿ ಜಮೀನನ್ನು ಒತ್ತುವರಿ ಮಾಡುವ ಉದ್ದೇಶದಿಂದಲೇ ಮನೆ ನಿರ್ಮಿಸಿಕೊಂಡವರನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುತ್ತಿದೆ ಎಂದರು. ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಳ್ಳುವುದು ಅಪರಾಧ. ಬಡವರಿಗೆ ರಾಜೀವ್‌ಗಾಂಧಿ ವಸತಿ ಯೋಜನೆಯಡಿ ಜಾಗ ನೀಡಿ ಮನೆ ನೀಡಲಾಗುತ್ತದೆ. ಇದನ್ನು ಗ್ರಾಮಸ್ಥರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಆಡಳಿತ ಒತ್ತುವರಿ ತೆರವುಗೊಳಿಸುವ ಬದಲು ನೀವೇ ತೆರವು ಮಾಡುವುದು ಒಳ್ಳೆಯದು ಎಂದು ತಿಳಿಸಿದರು. ಗ್ರಾಮಾಂತರ ಪ್ರದೇಶದ 94 ಸಿ ಅಡಿ ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಹಾಗೂ ನಗರ ಪ್ರದೇಶದಲ್ಲಿ 94ಸಿಸಿ ಅಡಿ ಅರ್ಜಿ ಸಲ್ಲಿಸಲು ಅಕ್ಟೋಬರ್27, 2016 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸದೆ ಇರುವವರು 65 ರೂ. ಪಾವತಿಸಿ, ತಹಶೀಲ್ದಾರ್ ಕಚೇರಿಯ ಅಟಲ್‌ಜೀ ಕೇಂದ್ರದಲ್ಲಿ ಸಲ್ಲಿಸಬಹುದು ಎಂದರು. ಮಂಕೋಡು ಸಮೀಪದ ಜೈಲ್‌ಗೆ ಮೀಸಲಿಟ್ಟ ಜಾಗ, ಬಸವನಹೊಳೆಯ ಸಮೀಪದ ಜಂಬಗಾರು, ಆವಿನಹಳ್ಳಿ ಸ.ನಂ. 46, ಕಲ್ಮನೆ ಗ್ರಾಪಂ ಅರಳಿಕೊಪ್ಪ ಸೇರಿದಂತೆ ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ಹಂತಹಂತವಾಗಿ ತೆರವುಗೊಳಿಸಲಾಗುತ್ತಿದೆ. ಯಾರಾದರೂ ಸರಕಾರಿ ಜಮೀನು ಒತ್ತುವರಿ ಮಾಡಿದ್ದರೆ ಅಂತಹವರ ವಿವರ ನೀಡಿದರೆ, ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇರಿಸುವ ಜೊತೆಗೆ ಅತಿಕ್ರಮಣದಾರರ ವಿರುದ್ದ ಕ್ರಮ ಜರಗಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ರೇಣುಕಪ್ಪ, ಜಗದೀಶ್, ಕೃಷ್ಣಮೂರ್ತಿ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X