Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲೆಯಲ್ಲಿ ಪ್ರತಿ ತಿಂಗಳು ತಾಲೂಕು...

ಜಿಲ್ಲೆಯಲ್ಲಿ ಪ್ರತಿ ತಿಂಗಳು ತಾಲೂಕು ಮಟ್ಟದ ಜನಸಂಪರ್ಕ ಸಭೆ: ಸಚಿವ ರೈ

ವಾರ್ತಾಭಾರತಿವಾರ್ತಾಭಾರತಿ11 Aug 2016 5:58 PM IST
share
ಜಿಲ್ಲೆಯಲ್ಲಿ ಪ್ರತಿ ತಿಂಗಳು ತಾಲೂಕು ಮಟ್ಟದ ಜನಸಂಪರ್ಕ ಸಭೆ: ಸಚಿವ ರೈ

ಬಂಟ್ವಾಳ, ಆ. 11: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿ ತಾಲೂಕು ಮಟ್ಟದಲ್ಲಿ ಪ್ರತಿ ತಿಂಗಳಲ್ಲಿ ನಿರ್ದಿಷ್ಟ ದಿನಾಂಕವನ್ನು ಗೊತ್ತುಪಡಿಸಿ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.

ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಗುರುವಾರ ನಡೆದ ಬಂಟ್ವಾಳ ತಾಲೂಕು ಮಟ್ಟದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಸಾಮಾನ್ಯರು ತಮ್ಮ ಕುಂದುಕೊರತೆಯನ್ನು ಪರಿಹರಿಸಲು ಸರಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಅಧಿಕಾರಿಗಳೇ ಜನರ ಬಳಿಗೆ ತೆರಳಿ ತ್ವರಿತವಾಗಿ ನ್ಯಾಯ ಒದಗಿಸುವ ಉದ್ದೇಶದಿಂದ ಸರಕಾರ ಜನಸಂಪರ್ಕ ಸಭೆಯನ್ನು ಅನುಷ್ಠಾನಕ್ಕೆ ತಂದಿದೆ. ತಾಲೂಕು ಮಟ್ಟದ ಜನಸಂಪರ್ಕ ಸಭೆಯ ಬಳಿಕ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಇಂತಹ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಜನ ಸಾಮಾನ್ಯರಿಗೆ ಅನುಕೂಲವಾಗುವ ದೆಸೆಯಲ್ಲಿ ಬಾಪೂಜಿ ಸೇವಾ ಕೇಂದ್ರವನ್ನು ತೆರೆಯಲಾಗುವುದು. ಈ ಕೇಂದ್ರದಲ್ಲಿ ಕಂದಾಯ ಇಲಾಖೆಗೆ ಸೇರಿದ ನೂರು ಸೇವೆಗಳು ಲಭ್ಯವಾಗಲಿದೆ. ಈ ಹಿಂದೆ ಪಿಂಚಣಿ, ಕಂದಾಯ ಅದಾಲತನ್ನು ತಾಲೂಕಿನಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಮೂಲಕ ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗಿದೆ ಎಂದ ಸಚಿವರು 94ಸಿ ಯೋಜನೆಯಡಿಯಲ್ಲಿ ರಾಜ್ಯದಲ್ಲೇ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಹಕ್ಕು ಪತ್ರ ನೀಡಲಾಗಿದೆ. ಪ್ರಸ್ತುತ 94ಸಿಯಡಿ ಅಕ್ಟೋಬರ್ ಅಂತ್ಯದವರೆಗೂ ಹಾಗೂ 94ಸಿಸಿ ಯೋಜನೆಯಡಿ ಆಗಸ್ಟ್ 28ರವರೆಗೆ ಅರ್ಜಿ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಪ್ರಮುಖವಾಗಿ ಕಂದಾಯ ಸೇರಿದಂತೆ ಕೆಲವು ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಮಧ್ಯಮ, ಬಡ ಕುಟುಂಬದಿಂದ ಬಂದ ಅಧಿಕಾರಿಗಳು, ಸಿಬ್ಬಂದಿ ತಮ್ಮಂತೆಯೇ ಬಡ ಹಾಗೂ ಮಧ್ಯಮ ವರ್ಗದ ಜನರು ತಮ್ಮ ಬಳಿಗೆ ಕುಂದು ಕೊರತೆಗಳನ್ನು ಹೇಳಿಕೊಳ್ಳಲು ಬಂದಾಗ ಅವರೊಂದಿಗೆ ಸೌಜನ್ಯದಿಂದ ವರ್ತಿಸಿ ಕಾನೂನಿನ ಚೌಕಟ್ಟಿನಲ್ಲಿ ಪರಿಹರಿಸುವ ಮೂಲಕ ಮಾನವೀಯತೆಯನ್ನು ಮೆರೆಯಬೇಕು ಎಂದು ಹೇಳಿದ ಸಚಿವರು ಇದರಿಂದಾಗಿ ಅಧಿಕಾರಿಗಳಿಗೆ ಯಾವುದೇ ತೊಂದರೆಯಿಲ್ಲ ಎಂದರು.

ವಿಧಾನ ಪರಿಷತಿನ ಮುಖ್ಯ ಸಚೇತಕ ಐವನ್ ಡಿಸೋಜ ಮಾತನಾಡಿ, ಜನರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಹತ್ತು ಹಲವು ಕಾನೂನುಗಳಿಗೆ ತಿದ್ದುಪಡಿ ಮಾಡಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ್ ಮಾತನಾಡಿ, ಜನ ಪಂಪರ್ಕ ಸಬೆಯ ಉದ್ದೇಶವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಇಲ್ಲಿ ಸ್ವೀಕಾರವಾಗುವ ಅರ್ಜಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಶೀಘ್ರವೇ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್.ಮುಹಮ್ಮದ್, ಮಮತಾಗಟ್ಟಿ, ಶಾಹುಲ್ ಹಮೀದ್, ಮಂಜುಳಾ ಮಾವೆ, ರವೀಂದ್ರ ಕಂಬಳಿ, ಪದ್ಮಶೇಖರ್ ಜೈನ್, ಪುರಸಬಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರ, ಬೂಡಾ ಅಧ್ಯಕ್ಷ ಪಿಯೂಸ್ ರೋಡ್ರಿಗಸ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಶ್ರೀವಿದ್ಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಹೆಚ್ಚುವರಿ ಎಸ್ಪಿ ಡಾ. ವೇದಮೂರ್ತಿ, ಬಂಟ್ವಾಳ ಉಪ ವಿಬಾಗದ ಡಿವೈಎಸ್ಪಿ ರವೀಶ್ ಸಿ.ಆರ್., ಭೂ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಉಪಾಧ್ಯಕ್ಷ ಸಂಜೀಪ ಪೂಜಾರಿ, ತಾಲೂಕು ಪಂಚಾಯತ್, ಬಂಟ್ವಾಳ ಪುರಸಭೆ, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ತಹಶೀಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿದರು. ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ ವಂದಿಸಿದರು. ಉದ್ಯೋಗ ಖಾತರಿ ಯೋಜನೆಯ ಸಂಯೋಜಕ ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಇದೇ ವೇಳೆ 94ಸಿ ಯೋಜನೆಯಡಿ ಫಲಾನುವಿಗಳಿಗೆ ಹಕ್ಕು ಪತ್ರ ಸಹಿತ ವಿವಿಧ ಯೋಜನೆಯಡಿ ಮಂಜೂರಾದ ಸವಲತ್ತುಗಳನ್ನು ಸಚಿವರು ವಿತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X