Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಶಿಷ್ಟ ಜಾತಿ, ವರ್ಗಗಳ ರಕ್ಷಣೆಗೆ...

ಪರಿಶಿಷ್ಟ ಜಾತಿ, ವರ್ಗಗಳ ರಕ್ಷಣೆಗೆ ತಾಲೂಕು ಆಡಳಿತ ಬದ್ಧ

ಪರಿಶಿಷ್ಟ ವರ್ಗದ ರಕ್ಷಣೆ, ಯೋಗ ಕ್ಷೇಮ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ11 Aug 2016 10:41 PM IST
share

ಕಡೂರು, ಆ.11: ಪರಿಶಿಷ್ಟ ಜಾತಿ ಮತ್ತು ವರ್ಗಗಳ ರಕ್ಷಣೆ ಹಾಗೂ ಅವರ ಕುಂದು ಕೊರತೆಗಳನ್ನು ಪರಿಹರಿಸಲು ತಾಲೂಕು ಆಡಳಿತ ಬದ್ಧ್ದವಾಗಿದೆ ಎಂದು ತಹಶೀಲ್ದಾರ್ ಎಂ. ಭಾಗ್ಯಾ ಹೇಳಿದರು.

ಅವರು ಗುರುವಾರ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ರಕ್ಷಣೆ ಹಾಗೂ ಯೋಗ ಕ್ಷೇಮ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

  ತಾಲೂಕಿನಲ್ಲಿರುವ ಪರಿಶಿಷ್ಟ ಜಾತಿ ಮತ್ತು ವರ್ಗದವರ ರಕ್ಷಣೆ, ಯೋಗಕ್ಷೇಮ ಸರಕಾರದ ಸೌಲಭ್ಯಗಳ ವಿತರಣೆಯನ್ನು ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ನೀಡಲಾಗುತ್ತಿದೆ, ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ತಾವು ಬದ್ಧ್ದವಾಗಿರುವುದಾಗಿ ತಿಳಿಸಿದರು.

   ಸಭೆಯಲ್ಲಿ ಪಾಲ್ಗೊಂಡಿದ್ದ ದಲಿತ ಮುಖಂಡರು, ಕಳೆದ ಒಂದು ವರ್ಷದಿಂದ ಸಭೆಯನ್ನು ನಡೆಸಿಲ್ಲ, ದಲಿತರೆಂದರೆ ಅಧಿಕಾರಿಗಳಿಗೆ ಕೇವಲವಾಗಿದ್ದಾರೆ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ರುದ್ರಪ್ಪ ಇನ್ನು ಮುಂದೆ ಪ್ರತೀ ಮೂರು ತಿಂಗಳಿಗೊಮ್ಮೆ ಈ ಸಭೆಯನ್ನು ನಡೆಸಲಾಗುವುದು ಎಂದು ತಿಳಿಸಿದರು.

   ಮಲ್ಲೇಶ್ವರ ಗ್ರಾಮದಲ್ಲಿ ಸ್ಮಶಾನದ ಆವಶ್ಯಕತೆ ಇದ್ದು, ಸರ್ವೇ ಸಂ.188 ರಲ್ಲಿ ಇದಕ್ಕೆ ಅವಕಾಶ ಮಾಡಿಕೊಡುವಂತೆ ಕಳೆದ ಸಭೆಯಲ್ಲಿ ಚರ್ಚಿಸಲಾಗಿತ್ತು, ಆದರೂ ಇದು ಕಾರ್ಯಗತವಾಗಿಲ್ಲ, ಕೂಡಲೇ ಸಮಸ್ಯೆಯನ್ನು ಬಗೆಹರಿಸುವಂತೆ ಮಲ್ಲೇಶ್ವರ ಗ್ರಾಮ ಪಂಚಾಯತ್ ಸದಸ್ಯ ಶೂದ್ರ ಶ್ರೀನಿವಾಸ್ ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ತಹಶೀಲ್ದಾರ್ ಭಾಗ್ಯಾ, ಕಂದಾಯ ಇಲಾಖೆಯು ನಿಮ್ಮ ಮನವಿಯನ್ನು ಪರಿಶೀಲಿಸಿದ್ದು, ಅದರಂತೆ ಮಲ್ಲೇಶ್ವರ ಗ್ರಾಮದಲ್ಲಿರುವ ಗೋಮಾಳ ಜಮೀನಿನ ಲಭ್ಯತೆಯನ್ನು ಆಧರಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

 ರಾಜ್ಯದಲ್ಲಿರುವ ಬೋವಿ ಜನಾಂಗದವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಆದರೆ ನೆರೆಯ ಆಂಧ್ರ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಇವರನ್ನು ಪರಿಶಿಷ್ಟ ಜಾತಿಗೆ ಸೇರಿಸಿಲ್ಲ, ಆದರೆ ಅಲ್ಲಿಂದ ವಲಸೆ ಬಂದ ಬೋವಿ ಜನಾಂಗದವರು ಇಲ್ಲಿ ಪರಿಶಿಷ್ಟ ಜಾತಿಯ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದು, ಇವರ ಸಂಖ್ಯೆ ಹೆಚ್ಚಾಗುತ್ತಿದೆ, ಇದರಿಂದ ನಿಜವಾದ ಪರಿಶಿಷ್ಟರಿಗೆ ಅನ್ಯಾಯವಾಗುತ್ತಿದೆ. ಇಂತಹ ನಕಲಿ ಜಾತಿ ಪತ್ರ ಪಡೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಲಿತ ಮುಖಂಡರಾದ ಟಿ.ಮೂರ್ತಿ, ಮಂಜಪ್ಪ ಒತ್ತಾಯಿಸಿದರು.

 ಬಳಿಕ ಸರಕಾರದ ವಿವಿಧ ಇಲಾಖೆಗಳಿಂದ ಪರಿಶಿಷ್ಟ ಜಾತಿ ವರ್ಗದವರ ಅಭಿವೃದ್ಧಿಗಾಗಿ ಜಾರಿಯಾಗಿರುವ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು.

ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ, ಸಮಾಜ ಕಲ್ಯಾಣಾಧಿಕಾರಿ ರುದ್ರಪ್ಪ, ಕಡೂರು ಆರಕ್ಷಕ ಉಪನಿರೀಕ್ಷಕ ರಾಕೇಶ್, ಕಾರ್ಮಿಕ ಕಲ್ಯಾಣಾಧಿಕಾರಿ ಶಶಿಕಲಾ ಹಾಗೂ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X