Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಹಾರಕ್ಕೆ ಕ್ರಮಕೈಗೊಳ್ಳುವರೇ ಕಂದಾಯ...

ಪರಿಹಾರಕ್ಕೆ ಕ್ರಮಕೈಗೊಳ್ಳುವರೇ ಕಂದಾಯ ಸಚಿವರು?

ಪಿ.ಆರ್.ಕಾರ್ಡ್ ಗೊಂದಲ

ವಾರ್ತಾಭಾರತಿವಾರ್ತಾಭಾರತಿ11 Aug 2016 10:45 PM IST
share

ಶಿವಮೊಗ್ಗ, ಆ.11: ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಶಿವಮೊಗ್ಗ ನಗರದಲ್ಲಿ ‘ಉಪಗ್ರಹ ಆಧಾರಿತ ನಗರ ಆಸ್ತಿ ಮಾಲಕತ್ವದ ಯೋಜನೆ’ (ಯುಪಿಒಆರ್) ಯನ್ನು ಕಂದಾಯ ಇಲಾಖೆ ಅನುಷ್ಠಾನಗೊಳಿಸಿದೆ. ಇದೀಗ ಶಿವಮೊಗ್ಗ ನಗರದಲ್ಲಿ ಯಾವುದೇ ಸ್ಥಿರಾಸ್ತಿಯ ನೋಂದಣೆ-ಪರಬಾರೆ ಮಾಡಲು ಪ್ರಾಪರ್ಟಿ ರೆಕಾರ್ಡ್ (ಪಿ.ಆರ್)ಕಾರ್ಡ್ ಹೊಂದುವುದು ಕಡ್ಡಾಯವಾಗಿದೆ. ಇದಕ್ಕಾಗಿಯೇ ಶಿವಮೊಗ್ಗ ನಗರದ ಉಪ ವಿಭಾಗಾಧಿಕಾರಿ ಕಚೇರಿ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಸುಸಜ್ಜಿತ ಯುಪಿಒಆರ್ ಕಚೇರಿಯನ್ನೂ ತೆರೆಯಲಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ಈ ಕಚೇರಿ ಕಾರ್ಯನಿರ್ವಹಣೆ ಮಾಡುತ್ತಿದ್ದು, ಸರ್ವೇ ಇಲಾಖೆ ಈ ಕಚೇರಿಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿದೆ. ಖಾಸಗಿ ಸಂಸ್ಥೆಯ ಹಲವು ಸಿಬ್ಬಂದಿ ಕಚೇರಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಆದರೆ, ಇತ್ತೀಚೆಗೆ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಕಾರ್ಯಗಳು ಸುಲಲಿತವಾಗಿ ನಡೆಯುತ್ತಿಲ್ಲ. ವಿಳಂಬಗತಿಯಲ್ಲಿ ಸಾಗುತ್ತಿದೆ. ಪಿ. ಆರ್. ಕಾರ್ಡ್ ಮಾಡಿಸಲು ನಾಗರಿಕರು ಕಚೇರಿಗೆ ಅಲೆದಾಡುವಂತಹ ಪರಿಸ್ಥಿತಿ ಇದೆ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿವೆ. ಅಲ್ಲದೆ, ಕೆಲ ಪಿ.ಆರ್. ಕಾರ್ಡ್‌ಗಳಲ್ಲಿ ಸ್ಥಿರಾಸ್ತಿಗೆ ಸಂಬಂಧಿಸಿದ ಮಾಹಿತಿಗಳಲ್ಲಿ ಸಾಕಷ್ಟು ಲೋಪದೋಷ ಕಂಡುಬರುತ್ತಿವೆ. ಇದರಿಂದ ಸ್ಥಿರಾಸ್ತಿ ಮಾಲಕರು ನಾನಾ ರೀತಿಯ ತೊಂದರೆ ಅನುಭವಿಸುವಂತಾಗಿದೆ. ಜೊತೆಗೆ ತಿದ್ದುಪಡಿ ಮಾಡಿಸಲು ಇನ್ನಿಲ್ಲದ ಹರಸಾಹಸ ನಡೆಸುವಂತಾಗಿದೆ. ಜನತೆ ಸಮರ್ಪಕ ಮಾಹಿತಿಯ ಕೊರತೆಯಿಂದ ಪರದಾಡುವಂತಾಗಿದೆ. ಈ ಹಿಂದೆ ಅರ್ಜಿದಾರರಿಗೆ ಕಾಲಮಿತಿಯಲ್ಲಿ ಪಿ.ಆರ್. ಕಾರ್ಡ್ ವಿತರಿಸುವ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಇದೀಗ ಇದು ಸಾಧ್ಯವಾಗುತ್ತಿಲ್ಲ. ವಿಳಂಬಗತಿಯಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ. ನಾಲ್ಕು ದಿನಗಳ ಹಿಂದೆ ಕಾಗದ ಪತ್ರಗಳ ಕೊರತೆಯಿಂದ ಅಂತಿಮ ಪಿ.ಆರ್. ಕಾರ್ಡ್ ವಿತರಿಸುವುದನ್ನೂ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಸ್ಥಿರಾಸ್ತಿ ಮಾಲಕರು ಇನ್ನಿಲ್ಲದ ತೊಂದರೆ ಅನುಭವಿಸುವಂತಾಗಿತ್ತು ಎಂದು ಸ್ಥಿರಾಸ್ತಿ ಮಾಲಕರೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಸ್ಥಿರಾಸ್ತಿಯ ಖಾತೆ ಪತ್ರದಲ್ಲಿರುವ ವಿಸ್ತೀರ್ಣದ ಮಾಹಿತಿ ಪಿ.ಆರ್. ಕಾರ್ಡ್‌ನಲ್ಲಿ ನಮೂದಾಗುತ್ತಿಲ್ಲ. ಕೆಲವೊಮ್ಮೆ ಮಾಲಕರ ಹೆಸರೇ ತಪ್ಪಾಗಿ ಮುದ್ರಿಸಲಾಗಿರುತ್ತದೆ. ಇದರಿಂದ ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ, ತಗಾದೆಗಳು ಹೆಚ್ಚಾಗುತ್ತಿವೆ. ಈ ರೀತಿಯ ಲೋಪದೋಷಗಳಿಗೆ ಕಚೇರಿಯ ಸಿಬ್ಬಂದಿ ಸಮರ್ಪಕ ಸ್ಪಷ್ಟನೆ ನೀಡುತ್ತಿಲ್ಲ ಎಂದು ನಾಗರಿಕರೊಬ್ಬರು ದೂರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X