ಚಿಕಿತ್ಸೆಗೆ ಬಂದ ಮಹಿಳೆ ಆಸ್ಪತ್ರೆಯಲ್ಲಿ ಆತ್ಮಹತ್ಯೆ

ಮಂಗಳೂರು, ಆ.12: ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿಂದು ಬೆಳಗ್ಗೆ ನಡೆದಿದೆ.
ನಗರದ ಬಲ್ಲಾಲ್ ಬಾಗ್ ನಿವಾಸಿ ಸುಶೀಲಾ(67) ಆತ್ಮಹತ್ಯೆ ಮಾಡಿಕೊಂಡವರು. ಇವರು ಚಿಕಿತ್ಸೆಗಾಗಿ ನಗರದ ವಿಶ್ವಭವನದ ಬಳಿಯಿರುವ ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಘಟನೆಯ ಬಗ್ಗೆ ಬಂದರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Next Story





