Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉ.ಕ. ಪ್ರವಾಸೋದ್ಯಮ ಅಭಿವೃದ್ಧಿಗೆ 116...

ಉ.ಕ. ಪ್ರವಾಸೋದ್ಯಮ ಅಭಿವೃದ್ಧಿಗೆ 116 ಕೋಟಿ ರೂ. ಬಿಡುಗಡೆ

ಜಿಲ್ಲಾದ್ಯಂತ 134 ಕಾಮಗಾರಿಗಳ ಅನುಷ್ಠಾನ

ವಾರ್ತಾಭಾರತಿವಾರ್ತಾಭಾರತಿ12 Aug 2016 10:00 PM IST
share
ಉ.ಕ. ಪ್ರವಾಸೋದ್ಯಮ ಅಭಿವೃದ್ಧಿಗೆ 116 ಕೋಟಿ ರೂ. ಬಿಡುಗಡೆ

ಕಾರವಾರ, ಆ.12: ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ವಿವಿಧ ಪ್ರವಾಸಿ ತಾಣಗಳ ಅಭಿವೃದ್ಧಿಗೆ 190 ಕೋಟಿ ರೂ. ಮಂಜೂರಾತಿ ನೀಡಲಾಗಿದ್ದು, ಈವರೆಗೆ 116 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆ ತಿಳಿಸಿದರು.

   ಅವರು ಪ್ರವಾಸೋದ್ಯಮ ಅಭಿವೃದ್ಧಿಗೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಿದರು.

  

ಜಿಲ್ಲೆಯಲ್ಲಿ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಒಟ್ಟು 134 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಇದು ವರೆಗೆ 57 ಕಾಮಗಾರಿಗಳು ಪೂರ್ಣಗೊಂಡಿವೆ. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್ ಮತ್ತು ನಿರ್ಮಿತ ಕೇಂದ್ರಗಳ ಮೂಲಕ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲಾಗುತ್ತಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಮೆಗಾ ಕೋಸ್ಟಲ್ ವೃತ್ತ ಯೋಜನೆಯಡಿ ಮುರ್ಡೇಶ್ವರ ಬಾಲಿ ಬೀಚ್, ಅಪ್ಸರ ಕೊಂಡ ಬೀಚ್, ಕಾಸರಕೋಡು ಬೀಚ್, ಪಾವಿನಕುರ್ವೆ ಬೀಚ್, ಓಂ ಬೀಚ್, ಕುಡ್ಲೆ ಬೀಚ್, ಗೋಕರ್ಣ ಬೀಚ್, ಕುಮಟಾ ಬೀಚ್, ಬೇಲೆಕೇರಿ ಬೀಚ್, ಟಾಗೋರ್ ಬೀಚ್, ಮಾಜಾಳಿ ಬೀಚ್ ಮತ್ತು ತೀಳಮಾತಿ ಬೀಚ್‌ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಜೀವ ರಕ್ಷಕರ ನಿರೀಕ್ಷಣಾ ಗೋಪುರ, ಘನತ್ಯಾಜ್ಯ ನಿರ್ವಹಣೆ, ಹೈಮಾಸ್ಟ್ ದೀಪ ಅಳವಡಿಕೆ, ಕೂಡು ರಸ್ತೆ ನಿರ್ಮಾಣ, ಪ್ಯಾರಾಗೋಲ, ರೆಸ್ಕ್ಯೂ ಬೋಟ್‌ಗಳ ಖರೀದಿ, ಪಾರ್ಕಿಂಗ್ ವ್ಯವಸ್ಥೆ ಇತ್ಯಾದಿಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಕಾರವಾರದ ಠಾಗೋರ್ ಬೀಚ್‌ನಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿಧಾನ ಗತಿಯಲ್ಲಿ ನಡೆಯುತ್ತಿದ್ದು, ಅದನ್ನು ಚುರುಕು ಗೊಳಿಸುವಂತೆ ಅವರು ಸೂಚಿಸಿದರು.

  ಜಿಲ್ಲೆಯ ವಿವಿಧ ಜಲಪಾತಗಳನ್ನು ಸಂಪರ್ಕಿಸುವ ರಸ್ತೆಗಳ ಸುಧಾರಣೆ, ವೀಕ್ಷಣಾ ಗೋಪುರಗಳ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ ಇತ್ಯಾದಿ ಮೂಲಸೌಲಭ್ಯಗಳ ಅಭಿವೃದ್ಧಿ, ಇಕೋ ಬೀಚ್ ಮತ್ತು ನೇಚರ್ ಕ್ಯಾಂಪ್ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ಇದೇ ವೇಳೆ ನುಡಿದರು. ಸಭೆಯಲ್ಲಿ ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ಶಾಸಕ ಸತೀಶ್ ಸೈಲ್, ಉಪಾಧ್ಯಕ್ಷ ಸಂತೋಷ ರೇಣಕೆ, ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ, ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು.

36 ಕೋಟಿ ರೂ. ವೆಚ್ಚದಲ್ಲಿ 7 ಮಿನಿ ವಿಧಾನಸೌಧ ನಿರ್ಮಾಣ ಕಾರವಾರ: ಜಿಲ್ಲೆಯ ಏಳು ತಾಲೂಕುಗಳಲ್ಲಿ 36 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆ ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಬಳಿಕ ಮಾತನಾಡುತ್ತಿದ್ದರು.

ಮುಂದಿನ ಒಂದು ವರ್ಷದ ಒಳಗಾಗಿ ಎಲ್ಲಾ ತಾಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.

ಕಾರವಾರ, ಸಿದ್ದಾಪುರ, ಜೊಯಿಡಾ ಮತ್ತು ಹೊನ್ನಾವರಗಳಲ್ಲಿ ತಲಾ 5 ಕೋಟಿ ರೂ. ವೆಚ್ಚದ ಮಿನಿವಿಧಾನ ಸೌಧಗಳು ನಿರ್ಮಾಣವಾಗಲಿವೆೆ. ಭಟ್ಕಳ ತಾಲೂಕಿನಲ್ಲಿ 10 ಕೋಟಿ ರೂ. ಹಾಗೂ ಯಲ್ಲಾಪುರ, ಹಳಿಯಾಳಗಳಲ್ಲಿ ತಲಾ 3 ಕೋಟಿ ರೂ. ವೆಚ್ಚದಲ್ಲಿ ಮಿನಿ ವಿಧಾನಸೌಧ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದರು.

 ಈಗಾಗಲೇ ಬಹುತೇಕ ಮಿನಿ ವಿಧಾನ ಸೌಧಗಳ ಕಾಮಗಾರಿಗಳು ಆರಂಭವಾಗಿವೆ. ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಅಲ್ಲದೆ, ಸಂಬಂಧಪಟ್ಟ ಉಪವಿಭಾಗಾಧಿಕಾರಿಗಳು ಕಾಮಗಾರಿಗಳ ತಪಾಸಣೆ ನಡೆಸುತ್ತಿರಬೇಕು ಎಂದು ಸೂಚಿಸಿದರು. ಕಾರವಾರದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಜಿಲ್ಲಾ ಸಂಕೀರ್ಣ ನಿರ್ಮಾಣಕ್ಕಾಗಿ ಅಂದಾಜು ಪತ್ರಿಕೆ ಹಾಗೂ ನಕ್ಷೆಗಳನ್ನು ಅನುಮೋದನೆಗಾಗಿ ಸರಕಾರಕ್ಕೆ ಸಲ್ಲಿಸಲಾಗಿದೆ. ಇದಕ್ಕೆ ಅನುಮೋದನೆ ದೊರೆತ ಬಳಿಕ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಎಲ್ಲಾ ತಾಲೂಕುಗಳಲ್ಲಿ ಲಭ್ಯವಿರುವ ಕಂದಾಯ ಭೂಮಿಗಳನ್ನು ಗುರುತಿಸಿ ಅದರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X