ಭಾರತ ತಂಡ ಪ್ರಕಟ, ಯುವಿಗೆ ಸ್ಥಾನವಿಲ್ಲ
ವೆಸ್ಟ್‌ಇಂಡೀಸ್ ವಿರುದ್ಧ ಟ್ವೆಂಟಿ-20 ಸರಣಿ
ಹೊಸದಿಲ್ಲಿ, ಆ.12: ಅಮೆರಿಕದ ಫ್ಲೊರಿಡಾದಲ್ಲಿ ಆ.16 ರಿಂದ 18ರ ತನಕ ನಡೆಯಲಿರುವ ವೆಸ್ಟ್‌ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟ್ವೆಂಟಿ-20 ಅಂತಾರಾಷ್ಟ್ರೀಯ ಸರಣಿಗೆ 14 ಸದಸ್ಯರನ್ನು ಒಳಗೊಂಡ ಭಾರತ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದೆ.
ಎಂಎಸ್ ಧೋನಿ ನಾಯಕನಾಗಿ, ವಿರಾಟ್ ಕೊಹ್ಲಿ ಉಪನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಭಾಗವಹಿಸಿದ್ದ ಯುವರಾಜ್ ಸಿಂಗ್, ಸುರೇಶ್ ರೈನಾ ಹಾಗೂ ಹರ್ಭಜನ್ ಸಿಂಗ್‌ರನ್ನು ಆಯ್ಕೆಗಾರರು ತಂಡದಿಂದ ಕೈಬಿಟ್ಟಿದ್ದಾರೆ. ಆಲ್‌ರೌಂಡರ್‌ಗಳಾದ ಪವನ್‌ನೇಗಿ ಹಾಗೂ ಹಾರ್ದಿಕ್ ಪಾಂಡ್ಯ ಬದಲಿಗೆ ಸ್ಟುವರ್ಟ್ ಬಿನ್ನಿ ಹಾಗೂ ಉಮೇಶ್ ಯಾದವ್‌ರನ್ನು ಆಯ್ಕೆ ಮಾಡಲಾಗಿದೆ.
ಐಪಿಎಲ್ ಹಾಗೂ ಝಿಂಬಾಬ್ವೆ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕೆ.ಎಲ್. ರಾಹುಲ್‌ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಟ್ವೆಂಟಿ-20 ತಂಡ: ಎಂ.ಎಸ್. ಧೋನಿ(ನಾಯಕ), ರೋಹಿತ್ ಶರ್ಮ, ಶಿಖರ್ ಧವನ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಲ್.ರಾಹುಲ್, ರವೀಂದ್ರ ಜಡೇಜ, ಆರ್.ಅಶ್ವಿನ್, ಜಸ್‌ಪ್ರೀತ್ ಬುಮ್ರಾ, ಮುಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಅಮಿತ್ ಮಿಶ್ರಾ, ಸ್ಟುವರ್ಟ್ ಬಿನ್ನಿ.





