ಪುತ್ತೂರು: ಗಾಂಜಾ ಮಾರಾಟ ಪ್ರಕರಣದ ಆರೋಪಿಗಳಿಗೆ ಜಾಮೀನು

ಪುತ್ತೂರು, ಆ.13: ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿ ಬಿದ್ದು ಬಂಧನಕ್ಕೊಳಗಾಗಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ಜಾಮೀನು ನೀಡಿದೆ.
ಪುತ್ತೂರು ತಾಲೂಕಿನ ಸವಣೂರು ಗ್ರಾಮದ ಚಾಪಳ್ಳ ನಿವಾಸಿ ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಶಾಕೀರ್ ಮತ್ತು ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ನಿವಾಸಿಯಾಗಿದ್ದ ಅಣ್ಣು ಸಾಲಿಯಾನ್ ಎಂಬವರ ಪುತ್ರ ತಾರಾನಾಥ ಬಂಧಿತ ಆರೋಪಿಗಳು.
ಆರೋಪಿಗಳು ಕಳೆದ ಬುಧವಾರ ಮುಕ್ರಂಪಾಡಿ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು. ಆರೋಪಿಗಳಿಂದ 17 ಗ್ರಾಂ ಗಾಂಜಾ , ಎರಡು ಮೊಬೈಲ್ ಸೆಟ್ ಮತ್ತು 2,290 ರೂ. ನಗದು ವಶಪಡಿಸಿಕೊಂಡಿದ್ದರು. ಆರೋಪಿಗಳನ್ನು ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.
Next Story





