Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳು ಭಾಷೆಯನ್ನು 8ನೆ ಪರಿಚ್ಛೇದಕ್ಕೆ...

ತುಳು ಭಾಷೆಯನ್ನು 8ನೆ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಪ್ರಧಾನಿಗೆ ಮನವಿ: ಡಾ. ಡಿ. ವೀರೇಂದ್ರ ಹೆಗ್ಗಡೆ

ವಾರ್ತಾಭಾರತಿವಾರ್ತಾಭಾರತಿ13 Aug 2016 8:54 PM IST
share
ತುಳು ಭಾಷೆಯನ್ನು 8ನೆ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಪ್ರಧಾನಿಗೆ ಮನವಿ: ಡಾ. ಡಿ. ವೀರೇಂದ್ರ ಹೆಗ್ಗಡೆ

ಮುಲ್ಕಿ, ಆ.13: ತುಳು ಭಾಷೆಯನ್ನು 8ನೆ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷೆ ಜಾನಕಿ ಬ್ರಹ್ಮಾವರ ನೇತೃತ್ವದಲ್ಲಿ ಪ್ರಧಾನ ಮಂತ್ರಿಯವರನ್ನು ಭೇಟಿಯಾಗಿ ಒತ್ತಾಯಿಸುವುದಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ತುಳು ಸಮ್ಮೇಳನ ಸಮಿತಿ ಮುಲ್ಕಿಯ ಆಶ್ರಯದಲ್ಲಿ ಟೈಮ್ಸ್ ಆಫ್ ಕುಡ್ಲ ಪತ್ರಿಕೆಯ ನಾಲ್ಕನೆ ವರ್ಷದ ನೆನಸಿಗಾಗಿ ಮುಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಆವರಣದಲ್ಲಿ ಎರಡು ದಿನಗಳ ಕಾಲ ಜರಗಲಿರುವ ‘ತುಳುವ ಐಸಿರಿದ ಐಸ್ರ’ ತುಳು ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

1994 ರಲ್ಲಿ ಮಂಗಳೂರಿನಲ್ಲಿ ನಡೆದ ಪ್ರಥಮ ತುಳು ಸಮ್ಮೇಳನದ ಬಳಿಕ ಜಿಲ್ಲೆಯಲ್ಲಿ ತುಳು ಭಾಷೆಯ ಬಗ್ಗೆ ಜಾಗೃತಿ ಮೂಡಿದ್ದು ಇತ್ತೀಚೆಗೆ ಉಜಿರೆಯಲ್ಲಿ ಜರಗಿದ ತುಳು ಸಮ್ಮೇಳನದಲ್ಲಿ. ಇತ್ತೀಚೆಗೆ ಹೆಚ್ಚಿನವರು ತುಳು ಭಾಷೆಗೆ ಆಕರ್ಷಿತರಾಗಿ ಅದನ್ನು ಕಲಿತು ಮಾತನಾಡುತ್ತಿದ್ದಾರೆ ಎಂದರು.

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಜಿಲ್ಲೆಯಲ್ಲಿ ದೊರೆಯುತ್ತಿವೆಯಾದರೂ ಯುವ ಸಮೂಹ ಕೃಷಿಯತ್ತ ವಾಲುತ್ತಿದೆ. ತುಳು ನಾಡಿನ ಮಣ್ಣಿನ ಮೇಲಿನ ಪ್ರೀತಿಯಿಂದ ಜನರಲ್ಲಿ ಬದಲಾವಣೆಯಾಗುತ್ತಿದೆ. ಜನರಲ್ಲಿ ಶೃದ್ಧೆಯ ಜೊತೆಗೆ ಭಕ್ತಿ ಭಾವ ಮೂಡುತ್ತಿದೆ ಎಂದರು

 ಎತ್ತಿನ ಹೊಳೆ ಯೋಜನೆಯ ಕಾಮಗಾರಿ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ಯಾರ ವಿರುದ್ಧ ಪ್ರತಿಭಟನೆ ನಡೆಸಬೇಕೆನ್ನುವ ಬಗ್ಗೆ ಹೆಚ್ಚಿನವರಲ್ಲಿ ಗೊಂದಲ ಮೂಡಿದೆ. ರಾಜಕಾರಣಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದರು.

ತುಳು ಭಾಷೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಬೇಕಾದರೆ ಪ್ರತಿ 2 ವರ್ಷಕ್ಕೊಮ್ಮೆ ಜಿಲ್ಲಾ ಮಟ್ಟದಲ್ಲಿ ತುಳು ಸಮ್ಮೇಳ ಆಯೋಜಿಸಬೇಕು ಎಂದ ಹೆಗ್ಗಡೆ ಅಭಿಪ್ರಾಯಿಸಿದರು.

ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಡಾ. ಸುನೀತಾ ಎಂ. ಶೆಟ್ಟಿ ಮಾತನಾಡಿ, ತುಳು ನಾಡಿನ ಮಣ್ಣಿನಲ್ಲಿ ದೈವಿಕ ಶಕ್ತಿಯಿದೆ. ತುಳು ಭಾಷೆಗೆ ಸಾಕಷ್ಟು ಪ್ರಾತಿನಿಧ್ಯ ದೊರೆಯುತ್ತಿಲ್ಲ. ತುಳು ಭಾಷೆಗೆ ಸ್ಥಾನ ಮಾನ ದೊರೆಯುವ ವರೆಗೆ ನಿರಂತರ ಹೋರಾಟದ ಅಗತ್ಯವಿದೆ ಎಂದು ಹೇಳಿದರು.

ಮುಲ್ಕಿಯ ಬಸ್ಸು ನಿಲ್ದಾಣದ ಬಳಿಯಿಂದ ಸಮ್ಮೇಳನದ ಸಭಾಂಗಣದವರೆಗೆ ಅತಿಥಿಗಳನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು. ಬಾಳೇಕೋಡಿ ಶೀಲಾಂಜನ ಕ್ಷೇತ್ರದ ಸದ್ಗುರು ಶಶಿಕಾಂತ ಮಣಿಸ್ವಾಮಿ ಮೆರವಣಿಗೆಗೆ ಚಾಲನೆ ನೀಡಿದರು.

 ಶಾಲೆ ಕಾಲೇಜುಗಳ ತುಳು ಸಂಘದ ಉದ್ಘಾಟನೆಯನ್ನು ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ನೆರವೇರಿಸಿದರು. ಸ್ಟಾಲ್‌ಗಳ ಉದ್ಘಾಟನೆಯನ್ನು ಮುಂಬೈ ಸೇವಾ ಭಾರತಿಯ ಅಧ್ಯಕ್ಷ ಜಯ ಶೆಟ್ಟಿ ನೆರವೆರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಯುಎಇ ತುಳುವೆರ್ ಸಂಘಟನೆಯ ಮುಖ್ಯ ಸಂಚಾಲಕ ಸರ್ವೋತ್ತಮ ಶೆಟ್ಟಿ ನೆರವೇರಿಸಿದರು. ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆಯನ್ನು ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ ಯು. ದೇವಾಡಿಗ ನೆರವೇರಿಸಿದರು. ಅಟಿಲ್ ದ ಅರಗಣೆಯನ್ನು ಕಟೀಲು ದೇವಳದ ಅನುವಂಶಿಕ ಮೊಕ್ತೇಸರ ಡಾ.ಕೆ. ರವೀಂದ್ರನಾಥ ಪೂಂಜ ನೆರವೇರಿಸಿದರು. ಸುದ್ದಿ ಜಾಲವನ್ನು ಮುಂಬೈನ ಉದ್ಯಮಿ ಐಕಳ ಹರೀಶ್ ಶೆಟ್ಟಿ ಉದ್ಘಾಟಿಸಿದರು.

ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಜಾನಕಿ ಬ್ರಹ್ಮಾವರ, ಮಾಜಿ ಅಧ್ಯಕ್ಷ ಉಮಾನಾಥ ಕೋಟ್ಯಾನ್, ಅಖಿಲ ಭಾರತ ಬಿಲ್ಲವರ ಯೂನಿಯನ್‌ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ,ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಎಕ್ಕಾರು, ಮುಲ್ಕಿಯ ಚರ್ಚ್‌ನ ಧರ್ಮಗುರು ವಂದನೀಯ ಫ್ರಾನ್ಸಿಸ್ ಝೇವಿಯರ್ ಗೋಮ್ಸ್, ಮುಲ್ಕಿಯ ಕೇಂದ್ರ ಶಾಫಿ ಜುಮ್ಮಾ ಮಸೀದಿಯ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹ್ಮದ್, ಬಾರ್ಕೂರು ಕಚ್ಚೂರ್ದ ಮಾಲ್ದಿ ದೇವಸ್ಥಾನದ ಗೌರವಾಧ್ಯಕ್ಷ ಚೆನ್ನಪ್ಪ, ಆಶ್ರಯ ಚಾರಿಟೇಬಲ್ ಟ್ರಸ್ಟ್ ಕುಡ್ಲದ ಅಧ್ಯಕ್ಷೆ ಡಾ. ಆಶಾಜ್ಯೋತಿ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮುಲ್ಕಿಯ ಬಪ್ಪನಾಡು ದೇವಳದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಎನ್. ಎಸ್. ಮನೋಹರ್ ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ಜಯಮ್ಮ, ಪದ್ಮರಾಜ್ ಎಕ್ಕಾರು, ಸಮ್ಮೇಳನ ಸಮಿತಿಯ ಮುಂಬೈ ಸಮಿತಿಯ ಪ್ರಭಾಕರ ಎಲ್ ಶೆಟ್ಟಿ, ಜಿ.ಟಿ. ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಸಮ್ಮೇಳನ ಸಮಿತಿಯ ಪ್ರಧಾನ ಸಂಚಾಲಕ ಎಸ್.ಆರ್. ಬಂಡಿಮಾರ್ ಸ್ವಾಗತಿಸಿದರು. ಅಧ್ಯಕ್ಷ ಡಾ. ವೈ.ಎನ್. ಶೆಟ್ಟಿ ಪ್ರಸ್ತಾವನೆಗೈದರು.ಕಾರ್ಯಾಧ್ಯಕ್ಷ ಚಂದ್ರಶೇಖರ ಸುವರ್ಣ ವಂದಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್ ಮತ್ತು ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X