ಮಂಗಳೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಮಂಗಳೂರು, ಆ. 14: ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪಿತಿಯ ಬೋಂದೆಲ್ ಕೃಷ್ಣನಗರ ಎಂಬಲ್ಲಿ ರವಿವಾರ ನಡೆದಿದೆ.
ಆತ್ಮಹತ್ಯೆಮ ಆಡಿಕೊಂಡ ಯುವಕನನ್ನು ಮೂಲತಃ ಹಾಸನದ ಚಂದ್ರಶೇಖರ್ ಎಂದು ಗುರುತಿಸಲಾಗಿದೆ.
ಕಳೆದ ಕೆಲವು ಸಮಯದಿಂದ ಪತ್ನಿ ಮತ್ತು ಮಗುವಿನೊಂದಿಗೆ ಬೋಂದೆಲ್‌ನ ಕೃಷ್ಣ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಚಂದ್ರಶೇಖರ್, ಇಂದು ಪತ್ನಿಯೊಂದಿಗೆ ಜಗಳವಾಡಿ ಆಕೆಯ ಮೇಲೆ ಹಲ್ಲೆ ನಡೆಸಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





