ಶಿವಮೊಗ್ಗ: ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ
ಶಿವಮೊಗ್ಗ, ಆ. 14: ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರಂದು ಬೆಳಗ್ಗೆ 9ಕ್ಕೆ ನಗರದ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ 9ಗಂಟೆಗೆ ವಿಧಾನ ಪರಿಷತ್‌ನ ಸಭಾಪತಿಗಳಾದ ಶ್ರೀ ಡಿ.ಎಚ್. ಶಂಕರಮೂರ್ತಿಯವರ ಉಪಸ್ಥಿತಿಯಲ್ಲಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪನವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡುವರು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಲೋಕಸಭಾ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಪಂ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ವಿಧಾನಸಭಾ ಸದಸ್ಯ ಕಿಮ್ಮನೆ ರತ್ನಾಕರ, ವಿಧಾನ ಸಭಾ ಸದಸ್ಯ ಕೆ.ಬಿ. ಪ್ರಸನ್ನಕುಮಾರ್ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಸದಸ್ಯೆ ಶಾರದಾ ಪೂರ್ಯನಾಯ್ಕೆ, ಸೊರಬ ವಿಧಾನಸಭಾ ಸದಸ್ಯ ಮಧು ಬಂಗಾರಪ್ಪ, ಭದ್ರಾವತಿ ವಿಧಾನಸಭಾ ಸದಸ್ಯ ಎಂ.ಜೆ ಅಪ್ಪಾಜಿಗೌಡ, ಶಿಕಾರಿಪುರ ವಿಧಾನಸಭಾ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆರ್.ಪ್ರಸನ್ನಕುಮಾರ್, ಎಂ.ಬಿ.ಭಾನುಪ್ರಕಾಶ್, ಶಿವಮೊಗ್ಗ ಮಹಾನಗರ ಪಾಲಿಕೆ ಮಹಾಪೌರರಾದ ಎಸ್.ಕೆ. ಮರಿಯಪ್ಪ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಪಂ ಮತ್ತು ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಆಗಮಿಸಲಿದ್ದಾರೆ.
ಧ್ವಜಾರೋಹಣ ನಂತರ ರಾಷ್ಟ್ರಗೀತೆ, ನಾಡಗೀತೆ, ಪಥಸಂಚಲನ, ವಂದನೆ ಸ್ವೀಕಾರ, ಸ್ವಾತಂತ್ರ್ಯೋತ್ಸವದ ಸಂದೇಶ, ರೈತಗೀತೆ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಅಂದು ಸಂಜೆ 5 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಪೊಲೀಸ್ ಬ್ಯಾಂಡ್ ಪ್ರದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರಾಯೋಜಿತ ನೃತ್ಯ ರೂಪಕ ಹಾಗೂ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾನಗರಪಾಲಿಕೆ ಉಪ ಮಹಾಪೌರ ಮಂಗಳ ಅಣ್ಣಪ್ಪರ ವಹಿಸುವರು. ಜಿಪಂ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ತಾಪಂ ಅಧ್ಯಕ್ಷೆ ರೇಖಾ ಪ್ರವೀಣ್‌ಕುಮಾರ್ ಹಾಗೂ ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಜಗದೀಶಪ್ಪ ಬಣಕಾರ್ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ರಾಕೇಶ್‌ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ. ಚೆನ್ನಣ್ಣನವರ, ಮತ್ತು ಮಹಾನಗರ ಪಾಲಿಕೆ ಆಯುಕ್ತರಾದ ತುಷಾರಾಮಣಿ ಉಪಸ್ಥಿತರಿರುವರು.
ಶಿವಮೊಗ್ಗ ಜಿಲ್ಲೆಯ ಎಲ್ಲ್ಲ ಸರಕಾರಿ ಅಧಿಕಾರಿಗಳು, ನೌಕರರು ಹಾಗೂ ಸಾರ್ವಜನಿಕರು ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಬೇಕೆಂದು ಸಮಿತಿ ತಿಳಿಸಿದೆ.







