ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ ದಿನಾಚರಣೆ

ಮಂಗಳೂರು, ಆ.15: ಮಂಗಳೂರಿನ ಕೊಡಿಯಾಲ್ ಬೈಲ್‌ನಲ್ಲಿರುವ ಭಾರತೀಯ ಜನತಾ ಪಕ್ಷಯ ಕಚೇರಿಯಲ್ಲಿ 70ನೆ ಸ್ವಾತಂತ್ಯ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪಭಂಡಾರಿ ಧ್ವಜಾರೋಹಣ ನೇರವೇರಿಸಿದರು. ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರ್, ನಗರ ದಕ್ಷಿಣದ ಅಧ್ಯಕ್ಷ ವೇದವ್ಯಾಸ ಕಾಮತ್, ಉಮನಾಥ, ಗುರುಚರಣ್ ಮೊದಲಾದವರು ಉಪಸ್ಥಿತರಿದ್ದರು.
Next Story





