ಕಾಸರಗೋಡು ಜಿಲ್ಲಾ ಮಟ್ಟದ ಸ್ವಾತಂತ್ರೋತ್ಸವ
ಕಾಸರಗೋಡು, ಆ.15: ಕಾಸರಗೋಡು ನಗರಸಭಾ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಕಂದಾಯ ಸಚಿವ ಇ.ಚಂದ್ರಶೇಖರನ್ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿದರು.
ಜಿಲ್ಲಾಧಿಕಾರಿ ಇ.ದೇವದಾಸನ್, ಜಿಲ್ಲಾ ಪೊಲೀಸ್ ಅಧಿಕಾರಿ ಥೋಮ್ಸನ್ ಜೋಸ್, ಜಿಲ್ಲೆಯ ಜನಪ್ರತಿನಿಧಿಗಳು, ರಾಜಕೀಯ ಪಕ್ಷದ ಮುಖಂಡರು, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ನಾಗರಿಕರು ಉಪಸ್ಥಿತರಿದ್ದರು.
ಬಳಿಕ ಪಥಸಂಚಲನ, ಕವಾಯತು, ಆಕರ್ಷಕ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಸ್ವಾತಂತ್ರೋತ್ಸವದ ಹಿನ್ನೆಲೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
Next Story