Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಟ್ಟ...

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಟ್ಟ ಹೆಜ್ಜೆ: ಸಚಿವ ದೇಶಪಾಂಡೆ

ಸ್ವಾತಂತ್ರ್ಯೋತ್ಸವ

ವಾರ್ತಾಭಾರತಿವಾರ್ತಾಭಾರತಿ15 Aug 2016 10:34 PM IST
share
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ  ದಿಟ್ಟ ಹೆಜ್ಜೆ: ಸಚಿವ ದೇಶಪಾಂಡೆ

ಕಾರವಾರ, ಆ.15: ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ಮೂಲಸೌಲಭ್ಯ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾ ನಗೊಳಿಸಲಾಗುತ್ತಿದ್ದು, ಪ್ರಗತಿ ಕಡೆಗೆ ದೃಢ ಹೆಜ್ಜೆ ಇರಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಸಹಮತ ವ್ಯಕ್ತಪಡಿಸಿದ್ದಾರೆ.

ಅವರು ಸೋಮವಾರ ಕಾರವಾರ ಪೊಲೀಸ್ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು.

ಪ್ರವಾಸೋದ್ಯಮ ಅಭಿವೃದ್ಧಿ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಒತ್ತು ನೀಡಲಾಗಿದೆ. ‘ಕೋಸ್ಟಲ್ ಸರ್ಕಿಟ್’ ಯೋಜನೆಯಡಿ ಈಗಾಗಲೇ 30 ಕೋಟಿ ರೂ. ವೆಚ್ಚದಲ್ಲಿ 12 ಬೀಚ್‌ಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಸ್ವದೇಶ್ ದರ್ಶನ್ ಯೋಜನೆಯಡಿ ಕರಾವಳಿಯ ಆಯ್ದ ಬೀಚ್‌ಗಳ ಅಭಿವೃದ್ಧಿಗೆ 92.5ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದರು.

ನೇತ್ರಾಣಿ ನಡುಗಡ್ಡೆ ಈ ವರ್ಷ ಅಂತಾರಾಷ್ಟ್ರೀಯ ಮಟ್ಟದ ಸ್ಕೂಬಾ ಡೈವಿಂಗ್ ಉತ್ಸವವನ್ನು ಆಯೋಜಿಸಲಾಗುವುದು. ಕಾರವಾರ ಹಾಗೂ ಓಂ ಬೀಚ್‌ಗಳಲ್ಲಿ ಜಲಸಾಹಸ ಕ್ರೀಡೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ನಗರಗಳಲ್ಲಿ ರಸ್ತೆ, ಒಳಚರಂಡಿ, ವಸತಿ ನಿರ್ಮಾಣ ಸೇರಿದಂತೆ ಮೂಲಸೌಲಭ್ಯಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾರವಾರ ನಗರ ಅಭಿವೃದ್ಧಿಗೆ ಇನ್ನೂ 30ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಕುಮಟಾದ ಮಣಕಿಯಲ್ಲಿ ಮಿನಿ ರನ್‌ವೇ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ಕಾಮಗಾರಿ ಶೀಘ್ರ ಆರಂಭಿಸಲಾಗುವುದು. ತದಡಿಯಲ್ಲಿ ಸುಸಜ್ಜಿತ ಬಂದರು ನಿರ್ಮಾಣಕ್ಕಾಗಿ ಹೆಜ್ಜೆ ಇರಿಸಲಾಗಿದ್ದು, ಕೇಂದ್ರ ಸರಕಾರದ ಅನುಮತಿಯನ್ನು ಕಾಯಲಾಗುತ್ತಿದೆ. ಇದೇ ರೀತಿ ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣ ಕಾರ್ಯ ಆರಂಭಿಸಲು ರಾಜ್ಯ ಸರಕಾರ ಎಲ್ಲಾ ನೆರವು ಒದಗಿಸಿದೆ ಎಂದು ಹೇಳಿದರು.

  ಸಮಾರಂಭದಲ್ಲಿ ಶಾಸಕ ಸತೀಶ್ ಸೈಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ, ಉಪಾಧ್ಯಕ್ಷ ಸಂತೋಷ ರೇಣಕೆ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಉಪಸ್ಥಿತರಿದ್ದರು.

‘ಕಾರವಾರಕ್ಕೆ ನೂತನ ಕಾರಾಗೃಹ’

ಕಾರವಾರ: ಇಲ್ಲಿನ ಕಣಸಗೇರಿಯಲ್ಲಿ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಅವರು ತಿಳಿಸಿದರು.

ಅವರು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೂತನ ಕಾರಾಗೃಹ ನಿರ್ಮಾಣಕ್ಕಾಗಿ ಈಗಾಗಲೇ ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಣಸಗೇರಿಯಲ್ಲಿ ಕಾರಾಗೃಹ ನಿರ್ಮಿಸುವ ಕುರಿತಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೊಸ ಕಾರಾಗೃಹ ನಿರ್ಮಾಣಕ್ಕಾಗಿ ಬಜೆಟ್‌ನಲ್ಲಿ ಅನುದಾನ ಒದಗಿಸಲಾಗಿದೆ ಎಂದು ಹೇಳಿದರು. ಕಾರವಾರ-ಕೋಡಿಭಾಗ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಳ್ಳಲು ಸಾರ್ವಜನಿಕರು ಸಹಕರಿಸಬೇಕು ಎಂದು ಸಚಿವರು ವಿನಂತಿಸಿದರು.

<ಮಳೆ ಕೊರತೆಯಿಂದ ಬೆಳೆ ಹಾನಿ ಅನುಭವಿಸಿದ ರೈತರಿಗೆ ಒಟ್ಟು 40ಕೋಟಿ ರೂ. ಬೆಳೆ ವಿಮೆ ಬಿಡುಗಡೆ ಮಾಡಲಾಗಿದೆ. ಬರಪೀಡಿತ ತಾಲೂಕುಗಳಲ್ಲಿ ಒಟ್ಟು 24, 542 ರೈತರಿಗೆ 11ಕೋಟಿ ರೂ. ಇನ್‌ಪುಟ್ ಸಬ್ಸಿಡಿಯನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮುಂದಿನ ಒಂದುವರೆ ವರ್ಷಗಳ ಒಳಗಾಗಿ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ. ಸಚಿವ ದೇಶಪಾಂಡೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X