ದೇರಳಕಟ್ಟೆ: ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಸ್ವಾತಂತ್ರೋತ್ಸವ

ಉಳ್ಳಾಲ, ಆ.15: ದೇಶ ಪ್ರೇಮ ಎಂಬುವುದು ಮುಸ್ಲಿಮರ ಒಂದು ಅಂಶ. ನೈಜ ಮುಸ್ಲಿಮನು ಅತ ಹುಟ್ಟಿ ಬೆಳೆದ ದೇಶಕ್ಕೆ ಅಪಪ್ರಚಾರ ಮಾಡಲು ಸಾಧ್ಯವೇ ಇಲ್ಲ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್ ಅಭಿಪ್ರಾಯಪಟ್ಟರು.
ಅವರು ಎಸ್ಕೆಎಸ್ಸೆಸ್ಸೆಫ್ ಮಂಗಳೂರು ವಲಯ ದೇರಳಕಟ್ಟೆಯಲ್ಲಿ 70ನೆ ಸ್ವಾತಂತ್ರೋತ್ಸವದ ಪ್ರಯುಕ್ತ ಅಯೋಜಿಸಿದ ಫ್ರೀಡಂ ಸ್ಕ್ವೇರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಶಂಶುಲ್ ಉಲಮಾ ದಾರುಸ್ಸಲಾಂ ಅರಬಿಕ್ ಕಾಲೇಜಿನ ಅಧ್ಯಕ್ಷ ಸೈಯದ್ ಹಮೀರ್ ತಂಙಳ್ ಕಿನ್ಯಾ ದುಆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ದೇರಳಕಟ್ಟೆ ಕೇಂದ್ರ ಜುಮಾ ಮಸೀದಿ ಖತೀಬ್ ಅಶ್ರಫ್ ರಹ್ಮಾನಿ ಚೌಕಿ ಮತ್ತು ಶಂಶುಲ್ ಉಲಮಾ ಕಾಲೇಜ್ ವಿದ್ಯಾರ್ಥಿ ಅಹ್ಮದ್ ನಹೀಂ ತೋಡಾರ್ ಸ್ವಾತಂತ್ರ್ಯೊತ್ಸವದ ಸಂದೇಶ ಬಾಷಣ ಮಾಡಿದರು.
ದೇರಳಕಟ್ಟೆ ರೇಂಜ್ ಮದರಸ ಮ್ಯಾನೇಜ್‌ಮೆಂಟ್ ಅಧ್ಯಕ್ಷ ಹಾಜಿ ಮೊದಿನ್ ಕುಂಞ ಮಾರಾಠಿಮೂಲೆ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಎಂ.ಟಿ ಮುಹಮ್ಮದ್ ಮೋನು, ಮುಲ್ಕಿ ಜುಮಾ ಮಸೀದಿ ಅಧ್ಯಕ್ಷ ಇಕ್ಬಾಲ್ ಅಹ್ಮದ್ ಮುಲ್ಕಿ, ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಪದ್ಮನಾಭ ನರಿಂಗಾನ, ವಿದ್ಯಾರತ್ನ ವಿದ್ಯಾಸಂಸ್ಥೆಯ ನಿರ್ದೇಶಕ ಕೆ.ರವಿಂದ್ರ ಶೆಟ್ಟಿ ಉಳಿದೊಟ್ಟು, ದೇರಳಕಟ್ಟೆ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಅಬೂಬಕರ್ ಹಾಜಿ ನಾಟೆಕಲ್, ಉಪಾಧ್ಯಕ್ಷ ಇಲ್ಯಾಸ್ ಹಾಜಿ, ದ.ಕ ಜಿಲ್ಲಾ ಕೆಡಿಪಿ ಸದಸ್ಯ ಆಲ್ವಿನ್ ಡಿಸೋಜ, ಇಬ್ರಾಹೀಂ ಬಾಖವಿ ಕೆ.ಸಿರೋಡ್, ಎಸ್ಕೆಎಸ್ಸೆಸ್ಸೆಫ್ ದ.ಕ ಜಿಲ್ಲಾ ಉಪಾಧ್ಯಕ್ಷ ಕಾಸಿಂ ದಾರಿಮಿ ಕಿನ್ಯಾ, ಜಂಇಯ್ಯತುಲ್ ಮುಅಲ್ಲಿಮೀನ್ ದ.ಕ ಜಿಲ್ಲಾ ಪ್ರ.ಕಾರ್ಯದರ್ಶಿ ಅಬ್ದುಲ್ಲತೀಫ್ ದಾರಿಮಿ ರೆಂಜಾಡಿ, ಎಸ್ಕೆಎಸ್ಸೆಸ್ಸೆಫ್ ದ.ಕ ಜಿಲ್ಲಾ ಪ್ರ.ಕಾರ್ಯದರ್ಶಿ ಇಸ್ಮಾಯೀಲ್ ಯಮಾನಿ, ಬೆಳ್ಮ ಗ್ರಾ.ಪಂ ಉಪಾಧ್ಯಕ್ಷ ಬಿ.ಎಂ ಸತ್ತಾರ್, ಎಸ್ಕೆಎಸ್ಸೆಸ್ಸೆಫ್ ನಾಯಕರಾದ ಅಬೂಬಕರ್ ಹಾಜಿ ಸ್ವಾಗತ್, ಎಂ.ಎ ಅಬ್ದುಲ್ಲಾ, ಸಿತಾರ್ ಮಜೀದ್ ಹಾಜಿ, ಸೈಯದ್ ಅಲಿ ದೇರಳಕಟ್ಟೆ, ನಝೀರ್ ಉಳ್ಳಾಲ್, ಇಬ್ರಾಹೀಂ ಬದ್ಯಾರ್, ಎಸ್ಕೆಎಸ್ಸೆಸ್ಸೆಫ್ ದೇರಳಕಟ್ಟೆ ಘಟಕಾಧ್ಯಕ್ಷ ನೌಫಲ್ ಮುಂತಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಎಸ್ಕೆಎಸ್ಸೆಸ್ಸೆಫ್ ಮಂಗಳೂರು ವಲಯಾಧ್ಯಕ್ಷ ಇಬ್ರಾಹೀಂ ಕೊಣಾಜೆ ಸ್ವಾಗತಿಸಿದರು. ಎಸ್ಕೆಎಸ್ಸೆಸ್ಸೆಫ್ ಪ್ರ.ಕಾರ್ಯದರ್ಶಿ ಮುಸ್ತಪ ಪೈಝಿ ಕಿನ್ಯಾ ವಂದಿಸಿದರು.







