‘ಸ್ವಾತಂತ್ರ್ಯದ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ’

ಕಾರ್ಕಳ, ಆ.15: ನಮ್ಮ ಹಿರಿಯರ ಅಮೂಲ್ಯ ಬಲಿದಾನದಿಂದ ದೊರಕಿದ ಸ್ವಾತಂತ್ರ್ಯದ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮಾಜಿ ಶಾಸಕ ಎಚ್.ಗೋಪಾಲ್ ಭಂಡಾರಿ ಹೇಳಿದ್ದಾರೆ.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 70ನೆ ಸ್ವಾತಂತ್ರೋತ್ಸವ ದಿನದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಕೊಟ್ಯಾನ್, ಜಿಲ್ಲಾ ಉಪಾಧ್ಯಕ್ಷ ಆವೆಲಿನ್ ಆರ್ ಲೂಯಿಸ್, ರಾಜ್ಯ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಇಮ್ತಿಯಾಜ್ ಅಹ್ಮದ್, ವಿವಿಧ ಗ್ರಾಮೀಣ ಹಾಗೂ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಯುವ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಸ್ವಾಗತಿಸಿದರು. ವಕ್ತಾರ ಬಿಪಿನ್ ಚಂದ್ರಪಾಲ್ ಕಾರ್ಯಕ್ರಮ ನಿರೂಪಿಸಿದರು.
Next Story





