Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ‘ವಾರದ ಸಂತೆ’ ಎಪಿಎಂಸಿಗೆ...

ಪುತ್ತೂರು ‘ವಾರದ ಸಂತೆ’ ಎಪಿಎಂಸಿಗೆ ಸ್ಥಳಾಂತರಿಸಲು ಎಸಿ ಆದೇಶ

ಸೋಮವಾರ ನಡೆಯದ ಸಂತೆ, ವ್ಯಾಪಾರಸ್ಥರಿಗೆ, ಗ್ರಾಹಕರಿಗೆ ಗೊಂದಲ

ವಾರ್ತಾಭಾರತಿವಾರ್ತಾಭಾರತಿ17 Aug 2016 12:47 PM IST
share
ಪುತ್ತೂರು ‘ವಾರದ ಸಂತೆ’ ಎಪಿಎಂಸಿಗೆ ಸ್ಥಳಾಂತರಿಸಲು ಎಸಿ ಆದೇಶ

ಪುತ್ತೂರು, ಆ.17: ಪುತ್ತೂರಿನ ಕಿಲ್ಲೆ ಮೈದಾನದ ಬಳಿಯಲ್ಲಿ ಸುಮಾರು 60 ವರ್ಷಗಳಿಂದ ನಡೆಯುತ್ತಿದ್ದ ಸೋಮವಾರದ ಸಂತೆಯನ್ನು ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸುವಂತೆ ಪುತ್ತೂರು ಉಪವಿಭಾಗಾಧಿಕಾರಿಗಳು ಪರತ್ತುಬದ್ಧ ಆದೇಶ ಹೊರಡಿಸಿದ್ದಾರೆ. ಈ ಆದೇಶದ ಹಿನ್ನಲೆಯಲ್ಲಿ ಸೋಮವಾರ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ಸಂತೆ ವ್ಯಾಪಾರ ರದ್ದಾಗಿದ್ದು, ಎಪಿಎಂಸಿ ಪ್ರಾಂಗಣಕ್ಕೆ ಸಂತೆ ವ್ಯಾಪಾರ ಸ್ಥಳಾಂತರಿಸುವ ವಿಚಾರದಲ್ಲಿ ಗೊಂದಲ ಉಂಟಾಗಿದೆ.

ಪುತ್ತೂರಿನ ಕಿಲ್ಲೆ ಮೈದಾನ, ಕೋರ್ಟು ರಸ್ತೆ, ನ್ಯಾಯಾಲಯ ಮತ್ತು ಮಿನಿ ವಿಧಾನ ಸೌಧದ ಸುತ್ತಮುತ್ತಲಿನ ರಸ್ತೆ ಬದಿಯಲ್ಲಿ ಪ್ರತೀ ಸೋಮವಾರ ನಡೆಯುವ ವಾರದ ಸಂತೆಯನ್ನು ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸುವಂತೆ ಪುತ್ತೂರು ಸಂಚಾರಿ ಪೊಲೀಸರು ಮನವಿ ಸಲ್ಲಿಸಿದ್ದರು. ಅಲ್ಲದೆ ವಾರದ ಸಂತೆಯನ್ನು ನಡೆಸುವ ಉದ್ದೇಶಕ್ಕಾಗಿಯೇ ನಿರ್ಮಿಸಿರುವ ಎಪಿಎಂಸಿ ಪ್ರಾಂಗಣಕ್ಕೆ ಸಂತೆ ವ್ಯಾಪಾರವನ್ನು ಸ್ಥಳಾಂತರ ಮಾಡುವಂತೆ ಸಾರ್ವಜನಿಕರು ಕೂಡ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪರಿಶೀಲಿಸಿ ಉಪವಿಭಾಗಾಧಿಕಾರಿ ಡಾ. ರಾಜೇಂದ್ರ ಕೆವಿ ಅವರು ಈ ಆದೇಶ ನೀಡಿದ್ದಾರೆ.

ಪುತ್ತೂರಿನ ಕಿಲ್ಲೆ ಮೈದಾನದ ಸುತ್ತಮುತ್ತ ರಸ್ತೆ ಬದಿಯಲ್ಲಿ ಪ್ರತೀ ಸೋಮವಾರ ವಾರದ ಸಂತೆ ನಡೆಯುತ್ತಿದ್ದು, ಈ ಪ್ರದೇಶದಲ್ಲಿ ಸಾರ್ವಜನಿಕ ಸರಕಾರಿ ಆಸ್ಪತ್ರೆ, ನ್ಯಾಯಾಲಯ ಸಂಕೀರ್ಣ, ಮಿನಿ ವಿಧಾನಸೌಧ, ಪುರಸಭೆ, ಬ್ಯಾಂಕ್ ಮೊದಲಾದ ಸಾರ್ವಜನಿಕ ಕಚೇರಿ ಕಟ್ಟಡಗಳು ಕಾರ್ಯ ನಿರ್ವಹಿಸುತ್ತಿದ್ದು, ದಿನಂಪ್ರತಿ ಈ ವಠಾರದಲ್ಲಿ ಸಾವಿರಾರು ಮಂದಿ ವಿವಿಧ ಕೆಲಸ ಕಾರ್ಯಗಳಿಗಾಗಿ ಓಡಾಡುತ್ತಿರುತ್ತಾರೆ. ಕಿಲ್ಲೆ ಮೈದಾನದ ಸುತ್ತ ಮುತ್ತಲಿನ ರಸ್ತೆಗಳ ಅಗಲ ಕಿರಿದಾಗಿರುವುದರಿಂದ ವಾಹನ ಸಂಚಾರ, ಪಾರ್ಕಿಂಗ್ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಸಂತೆಯ ದಿನ ನೂರಾರು ವ್ಯಾಪಾರಸ್ಥರು ತರಕಾರಿ, ಜಿನಸು ,ಇನ್ನಿತರ ಸಾಮಾಗ್ರಿಗಳನ್ನು ಕೊಳಚೆಯಲ್ಲಿಯೇ ಕುಳಿತು ವ್ಯಾಪಾರ ಮಾಡುತ್ತಿದ್ದಾರೆ. ಸಂತೆ ನಡೆದ ಬಳಿಕ ತರಕಾರಿ ಇನ್ನಿತರ ಅನಾವಶ್ಯಕ ವಸ್ತುಗಳನ್ನು ತೆಗೆಯದೆ ಇರುವುದರಿಂದ ಈ ವಸ್ತುಗಳು ಕೊಳೆತು ಸಾರ್ವಜನಿಕ ಪ್ರದೇಶದಲ್ಲಿ ದುರ್ವಾಸನೆ ಉಂಟಾಗುತ್ತಿದೆ, ಇದರಿಂದಾಗಿ ಸಾರ್ವಜನಿಕರಿಗೆ ಆರೋಗ್ಯದ ತೊಂದರೆಯಾಗುತ್ತಿದೆ. ಅಲ್ಲದೆ ಕಿಲ್ಲೆ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳು ,ಧಾರ್ಮಿಕ ಕಾರ್ಯಕ್ರಮಗಳು, ರಾಜಕೀಯ ಹಾಗೂ ಇನ್ನಿತರ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಲು ತೊಂದರೆಯುಂಟಾಗುತ್ತಿದೆ. ಪುತ್ತೂರು ನಗರವು ವೇಗವಾಗಿ ಬೆಳೆಯುತ್ತಿದ್ದು, ನಗರದ ಮಧ್ಯೆ ಇರುವ ಕಿಲ್ಲೆ ಮೈದಾನದಲ್ಲಿ ಸಂತೆಯ ದಿನ ವಾಹನಗಳು ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡುತ್ತಿರುವುದರಿಂದ ವಾಹನ ದಟ್ಟಣೆ, ವಾಹನ ಚಾಲನೆ , ಜನ ಸಂಚಾರ, ಅಂಬುಲೆನ್ಸ್ ಸೇವೆಗೆ ಅಡ್ಡಿ ಮೊದಲಾದ ಸಮಸ್ಯೆಗಳು ಎದುರಾಗುತ್ತಿವೆ ಎಂಬ ಅಂಶವನ್ನು ಇಲ್ಲಿ ಉಲ್ಲೇಖಿಸಲಾಗಿದೆ.

ಪುತ್ತೂರಿನ ಸಾಲ್ಮರ ಎಪಿಎಂಸಿ ವತಿಯಿಂದ ಮಾರುಕಟ್ಟೆ ಪ್ರಾಂಗಣ ವಾರದ ಸಂತೆಗಾಗಿಯೇ ನಿರ್ಮಾಣವಾಗಿರುವುದರಿಂದ ವ್ಯಾಪಾರಿಗಳಿಗೆ ಸ್ಟಾಲ್, ವಾಹನ ನಿಲುಗಡೆಗೆ ಪಾರ್ಕಿಂಗ್ ,ಇನ್ನಿತರ ಮೂಲೂತ ವ್ಯವಸ್ಥೆಗಳನ್ನು ಮಾಡಲಾಗಿದೆ. ವಾರದ ಸಂತೆ ಕಿಲ್ಲೆ ಮೈದಾನದಲ್ಲಿಯೇ ನಡೆಯುತ್ತಿರುವುದರಿಂದ ಎಪಿಎಂಸಿ ಪ್ರಾಂಗಣದ ಕಟ್ಟಡ ಹಾಗೂ ಇನ್ನಿತರ ವ್ಯವಸ್ಥೆಗಳು ಪಾಳುಬಿದ್ದು, ಸರಕಾರದ ಯೋಜನೆ ಸದುಪಯೋಗವಾಗದೆ ಹಾಳಾಗುತ್ತಿದೆ ಎಂಬ ಅಂಶವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸುವ ಕುರಿತು ಉಪವಿಭಾಗಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕ್ರಮಕ್ಕಾಗಿ ಸೂಚನೆ

ಕಿಲ್ಲೆ ಮೈದಾನದ ವಠಾರದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ಪ್ರತಿಬಂಧಿಸಿ ಆದೇಶ ಹೊರಡಿಸಿರುವ ಉಪವಿಭಾಗಾಧಿಕಾರಿಗಳು ವಾರದ ಸಂತೆಯನ್ನು ಸ್ಥಳಾಂರಿಸಲು ಬೇಕಾದ ಸೂಕ್ತ ಕ್ರಮಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರು ಹಾಗೂ ನಗರಸಭೆಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ರಿಗೆ ಸೂಚಿಸಿದ್ದಾರೆ. ತಪ್ಪಿದಲ್ಲಿ ಆ.20ರಂದು ಸಂಜೆ 5ಗಂಟೆಗೆ ಹಾಜರಾಗಿ ಪರತ್ತುಬದ್ಧ ಆದೇಶವನ್ನು ಪೂರ್ಣ ಆದೇಶವಾಗಿ ಯಾಕೆ ಪರಿವರ್ತಿಸಬಾರದು ಎಂಬ ಕುರಿತು ವಿವರಣೆ ನೀಡತಕ್ಕದ್ದೆಂದು ಆದೇಶದಲ್ಲಿ ತಿಳಿಸಿದ್ದಾರೆ.

ಸಂತೆ ರದ್ದು-ಗೊಂದಲ

ಉಪವಿಭಾಗಾಧಿಕಾರಿಗಳ ಆದೇಶದ ಹಿನ್ನಲೆಯಲ್ಲಿ ಕಿಲ್ಲೆ ಮೈದಾನದ ವಠಾರದಲ್ಲಿ ನಡೆಯುತ್ತಿದ್ದ ಸೋಮವಾರದ ಸಂತೆ ಈ ಬಾರಿ ರದ್ದಾಗಿದೆ. ಸಂತೆ ವ್ಯಾಪಾರಿಗಳು ಕಿಲ್ಲೆ ಮೈದಾನದಲ್ಲಿ ವ್ಯಾಪಾರವನ್ನು ನಗರದಿಂದ ಸುಮಾರು 1 ಕಿ.ಮೀ. ದೂರದಲ್ಲಿರುವ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸುವ ಕುರಿತು ಹಿಂದೇಟು ಹಾಕುತ್ತಿದ್ದಾರೆ. ಪುತ್ತೂರು ನಗರಸಭಾ ಸದಸ್ಯರಲ್ಲಿಯೂ ಸಂತೆ ಸ್ಥಳಾಂತರ ವಿಚಾರದಲ್ಲಿ ಪರವಿರೋಧ ಅಭಿಪ್ರಾಯಗಳಿರುವುದರಿಂದ ಗೊಂದಲವುಂಟಾಗಿದೆ. ಉಪವಿಭಾಗಾಧಿಕಾರಿಗಳ ಆದೇಶದ ಹಿನ್ನಲೆಯಲ್ಲಿ ಕೂಡಲೇ ನಗರಸಭೆಯ ವಿಶೇಷ ಸಾಮಾನ್ಯ ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕೆಂದು ಸದಸ್ಯರು ನಗರಸಭೆಯ ಅಧ್ಯಕ್ಷರಿಗೆ ವಿಪಕ್ಷ ಸದಸ್ಯರು ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಎಪಿಎಂಸಿ ಪ್ರಾಂಗಣ ಪರಿಶೀಲನೆ

ಸಂತೆ ವ್ಯಾಪಾರವನ್ನು ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸುವ ವಿಚಾರದಲ್ಲಿ ಮಂಗಳವಾರ ನಗರಸಭೆ ಅಧ್ಯಕ್ಷೆ ವಸಂತಿ ಬಲ್ನಾಡು, ನಗರಸಭಾ ಆಯುಕ್ತೆ ರೇಖಾ ಶೆಟ್ಟಿ , ಎಪಿಎಂಸಿ ಪ್ರಭಾರ ಕಾರ್ಯದರ್ಶಿ ಕೃಷ್ಣಮೂರ್ತಿ, ಸದಸ್ಯರಾದ ಮುಹಮ್ಮದ್ ಆಲಿ, ಶಕ್ತಿಸಿನ್ಹ, ರಾಜೇಶ್ ಬನ್ನೂರು, ರಾಮಣ್ಣ ಗೌಡ, ವಿಶ್ವನಾಥ ಗೌಡ, ವಿನಯ ಭಂಡಾರಿ ಮೊದಲಾದವರು ಎಪಿಎಂಸಿ ಪ್ರಾಂಗಣಕ್ಕೆ ಭೇಟಿ ನೀಡಿ ವ್ಯವಸ್ಥೆಗಳ ಕುರಿತು ಪರಿಶೀಲಿಸಿದರು.

ಅಡಿಕೆಯ ಬಳಿಕ ಇದೀಗ ಸಂತೆ ಸ್ಥಳಾಂತರ

ಪುತ್ತೂರು ಪೇಟೆಯಲ್ಲಿ ಈ ಹಿಂದೆ ನಡೆಯುತ್ತಿದ್ದ ಅಡಿಕೆ ವ್ಯಾಪಾರವನ್ನು ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸುವ ವಿಚಾರದಲ್ಲಿ ಬಹಳಷ್ಟು ಗೊಂದಲ ನಡೆದಿತ್ತು. ಸ್ಥಳಾಂತರವನ್ನು ವಿರೋಧಿಸಿ ವರ್ತಕರ ಹೋರಾಟ - ಪ್ರತಿಭಟನೆಗಳು ನಡೆದಿದ್ದವು. ಕಾನೂನು ಹೋರಾಟವೂ ನಡೆದಿತ್ತು. ಯಾವುದೇ ಕಾರಣಕ್ಕೂ ಅಡಿಕೆ ವ್ಯಾಪಾರವನ್ನು ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದ ವ್ಯಾಪಾರಸ್ಥರು ಅಂತಿಮವಾಗಿ ಅಡಿಕೆ ವ್ಯಾಪಾರವನ್ನು ಸ್ಥಳಾಂತರಿಸಿದ್ದರು. ಇದೀಗ ಮತ್ತೆ ಸಂತೆ ವ್ಯಾಪಾರದ ಸ್ಥಳಾಂತರ ವಿಚಾರ ಎದುರಾಗಿದೆ. 

ಸಂತೆ ವ್ಯಾಪಾರದಲ್ಲಿ ಸೋಮವಾರ ಲಕ್ಷಾಂತರ ರೂ. ವ್ಯವಹಾರ ನಡೆಯುತ್ತಿದ್ದು, ಗ್ರಾಮೀಣ ಪ್ರದೇಶದ ಜನರು ವಾರಕ್ಕೆ ಬೇಕಾದ ತರಕಾರಿ ಇನ್ನಿತರ ಸಾಮಾಗ್ರಿಗಳನ್ನು ಸಂತೆಯಿಂದಲೇ ಖರೀದಿಸುತ್ತಾರೆ. ನಗರದಿಂದ ಸಾಕಷ್ಟು ದೂರವಿರುವ ಎಪಿಎಂಸಿ ಪ್ರಾಂಗಣಕ್ಕೆ ವಾರದ ಸಂತೆ ಸ್ಥಳಾಂತರಗೊಂಡಲ್ಲಿ ತರಕಾರಿ ಮೊದಲಾದ ಸಣ್ಣ ಮಟ್ಟಿನ ವಸ್ತುಗಳ ಖರೀದಿದಾರ ಗ್ರಾಹಕರಿಗೆ ಸಮಸ್ಯೆಯಾಗುತ್ತದೆ ಎಂಬ ಅಭಿಪ್ರಾಯ ಗ್ರಾಹಕರಿಂದ ವ್ಯಕ್ತವಾಗಿದೆ. ಪುತ್ತೂರು ನಗರಸಭೆ ಮುಂದೆ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬ ನಿರೀಕ್ಷೆ ಪುತ್ತೂರಿನ ಜನತೆಯಲ್ಲಿದೆ.

ಎಪಿಎಂಸಿ ಪ್ರಾಂಗಣಕ್ಕೆ ಹೋಗದಿರಲು ವ್ಯಾಪಾರಸ್ಥರ ತೀರ್ಮಾನ:

ಈ ನಡುವೆ ವಾರದ ಸಂತೆಯನ್ನು ಕಿಲ್ಲೆ ಮೈದಾನದಿಂದ ಎಪಿಎಂಸಿಗೆ ಸ್ಥಳಾಂತರಿಸಲು ಸಹಾಯಕ ಆಯಕ್ತರು ನೀಡಿರುವ ಆದೇಶದಿಂದ ಗೊಂದಲಕ್ಕೆ ಒಳಗಾಗಿರುವ ವ್ಯಾಪಾರಸ್ಥರು ಎಪಿಎಂಸಿ ಪ್ರಾಂಗಣಕ್ಕೆ ಹೋಗದಿರಲು ಒಮ್ಮತದ ತೀರ್ಮಾನ ಕೈಗೊಂಡಿದ್ದಾರೆ.

ವಾರದ ಸಂತೆಯನ್ನು ಕಿಲ್ಲೆ ಮೈದಾನದಿಂದ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರ ಮಾಡಿರುವ ಸಹಾಯಕ ಆಯುಕ್ತರ ದಿಢೀರ್ ಆದೇಶ ಸರಿಯಲ್ಲ. ಎಪಿಎಂಸಿ ಪ್ರಾಂಗಣದಲ್ಲಿ ಸಂತೆ ನಡೆಸಲು ಪೂರಕವಾದ ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸದೆ ಇರುವುದರಿಂದ ಬೇರೆ ಊರಿನಿಂದ ವ್ಯಾಪಾರ ಮಾಡಲು ಆಗಮಿಸುವ ರೈತರಿಗೆ ನಷ್ಟ ಉಂಟಾಗುತ್ತದೆ. ರೈತರು ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಲಿದೆ. ಅಲ್ಲದೆ ಪುತ್ತೂರು ಪೇಟೆಯಿಂದ ಸುಮಾರು 2 ಕಿಲೋ ಮೀಟರ್ ದೂರದಲ್ಲಿದೆ. ಅಲ್ಲಿಗೆ ಗ್ರಾಹಕರು ಬರುವುದು ಕಷ್ಟ ಸಾಧ್ಯ. 30 ರೂ.ನ ತರಕಾರಿಗೆ 50 ರೂ.ಖರ್ಚು ಮಾಡಬೇಕಾದ ಪರಿಸ್ಥಿತಿಯಿದೆ. ಇಲ್ಲಿ ತರಕಾರಿ ಹಾಕಿದಲ್ಲಿ ನಮಗೆ ನಷ್ಟವಾಗುವುದು ಖಂಡಿತ ಎಂದು ಹೇಳುತ್ತಿರುವ ವ್ಯಾಪಾರಸ್ಥರು ಈ ಬಗ್ಗೆ ಸಮಿತಿ ರಚಿಸಿಕೊಂಡು ಅಧಿಕಾರಿಗಳಿಗೆ ಪರಿಸ್ಥಿತಿಯನ್ನು ಮನದಟ್ಟು ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X