ರಿಯೋ ಒಲಿಂಪಿಕ್ಸ್: ಕ್ವಾರ್ಟರ್‌ಫೈನಲ್‌ನಲ್ಲಿ ಶ್ರೀಕಾಂತ್‌ಗೆ ಸೋಲು

ರಿಯೋ ಡಿ ಜನೈರೊ, ಆ.17: ರಿಯೋ ಒಲಿಂಪಿಕ್ಸ್‌ನಲ್ಲಿ ಪುರುಷರ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಏಕೈಕ ಶಟ್ಲರ್ ಕೆ.ಶ್ರೀಕಾಂತ್ ಕ್ವಾರ್ಟರ್‌ಫೈನಲ್‌ನಲ್ಲಿ ಸೋಲುವ ಮೂಲಕ ಭಾರೀ ನಿರಾಶೆಗೊಳಿಸಿದ್ದಾರೆ.
ಇಲ್ಲಿ ಬುಧವಾರ ನಡೆದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಶ್ರೀಕಾಂತ್ ಅವರು ಚೀನಾದ ಎದುರಾಳಿ ಲಿನ್ ಡಾನ್ ವಿರುದ್ಧ 6-21, 21-11 ಹಾಗೂ 18-21 ಗೇಮ್‌ಗಳ ಅಂತರದಿಂದ ಸೋಲುವುದರೊಂದಿಗೆ ಒಲಿಂಪಿಕ್ಸ್‌ನಲ್ಲಿ ತನ್ನ ಹೋರಾಟ ಕೊನೆಗೊಳಿಸಿದರು. ಮಹಿಳೆಯರ ಸಿಂಗಲ್ಸ್‌ನಲ್ಲಿ ಪಿ.ವಿ. ಸಿಂಧು ಸೆಮಿಫೈನಲ್‌ಗೆ ತಲುಪಿರುವ ಕಾರಣ ಶ್ರೀಕಾಂತ್ ಮೇಲೆ ಹೆಚ್ಚಿನ ನಿರೀಕ್ಷೆ ಇಡಲಾಗಿತ್ತು. ಆದರೆ, ನಿರೀಕ್ಷೆ ಹುಸಿಯಾಗಿದೆ.
Next Story





