Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಜಿಲ್ಲಾಮಟ್ಟದ ದಲಿತ...

ಬೆಳ್ತಂಗಡಿ: ಜಿಲ್ಲಾಮಟ್ಟದ ದಲಿತ ಕುಂದುಕೊರತೆಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ17 Aug 2016 8:24 PM IST
share
ಬೆಳ್ತಂಗಡಿ: ಜಿಲ್ಲಾಮಟ್ಟದ ದಲಿತ ಕುಂದುಕೊರತೆಗಳ ಸಭೆ

ಬೆಳ್ತಂಗಡಿ, ಆ.17: ಜಿಲ್ಲಾಮಟ್ಟದ ದಲಿತ ಕುಂದುಕೊರತೆಗಳ ಸಭೆಯು ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯ ಅಂಬೇಡ್ಕರ್ ಭವನದಲ್ಲಿ ಬುಧವಾರ ದ.ಕ. ಜಿಲ್ಲಾ ಎಸ್ಪಿ ಗುಲಾಬ್ ರಾವ್ ಬೊರಸೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ದಲಿತ ಮುಖಂಡ ಶೇಖರ್ ಎಲ್. ಮಾತನಾಡಿ ಸ್ವಾತಂತ್ರ ಸಿಕ್ಕಿ 70 ವರ್ಷಗಳಾದರೂ ಕೊರಗ ಕುಟುಂಬಗಳು ಹಾಗೂ ಮೂಲನಿವಾಸಿಗಳ ಕುಟುಂಬಗಳು ಕಾಡಿನ ಮದ್ಯೆ ಗುಡಿಸಲಿನಲ್ಲಿ ವಾಸಿಸುವ ಪರಿಸ್ಥಿತಿ ಇಂದಿಗೂ ಇದೆ. ಇದಕ್ಕಾಗಿ ಸರಕಾರ ಕೋಟ್ಯಾಂತರ ರೂ. ಅನುದಾನ ಬಿಡುಗಡೆಗೊಳಿಸುತ್ತಿದೆ. ನೆರಿಯ, ಬಾಂಜಾರು ಮಲೆ ಮತ್ತು ಕಾಟಾಜೆ, ಪರ್ಪಳ ಪ್ರದೇಶಗಳಿಗೆ ಮೂಲನಿವಾಸಿಗಳು ಹೋಗಬೇಕಾದರೆ ಭೂಮಾಲಕರ ಅನುಮತಿ ಪಡೆಯಬೇಕಾದ ಸ್ಥಿತಿ ಇನ್ನೂ ಇದೆ. ಇದಕ್ಕೆ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಯು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಇವರ ಅಭಿವೃದ್ಧಿಗಾಗಿ ಅಧಿಕಾರಿಗಳಿಗೆ ಎಲ್ಲಾ ಸೌಕರ್ಯಗಳನ್ನು ಒದಗಿಸಿದರೂ ಯಾವುದೆ ಕೆಲಸವಾಗುತ್ತಿಲ್ಲ, ಕಕ್ಕಿಂಜೆ ಕೊರಗ ಕಾಲನಿಯ ಕುಂಡಕೊರಗನ ದಯನೀಯ ಬದುಕು, ಸುಲ್ಕೇರಿ ನಾವರ ಅಟ್ರಿಂಜೆಯಲ್ಲಿ ಕಾಡಿನ ಮಧ್ಯೆ 5 ಕುಟುಂಬಗಳು ವಾಸಿಸುತ್ತಿದ್ದು ಇದು ಅಧಿಕಾರಿಗಳಿಗೆ ಕಾಣುತ್ತಿಲ್ಲ. ಇವರ ಬದುಕಿನ ವ್ಯಥೆಯನ್ನು ಮಾಧ್ಯಮಗಳು ಬೆಳಕಿಗೆ ಚೆಲ್ಲಿದ ನಂತರ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿದ್ದಾರೆ. ಇದುವರೆಗೆ ಕೊರಗ ಕುಟುಂಬಗಳ ಅನುದಾನ ಎಲ್ಲಿ ಹೋಗಿದೆ. ಇದರ ದುರ್ಬಳಕೆಯಾಗಿದ್ದರೆ ಅಂತಹ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಿ ಜೈಲಿಗಟ್ಟಬೇಕು. ಬೆಳ್ತಂಗಡಿ ತಾಲೂಕಿನ ಸಮಾಜ ಕಲ್ಯಾಣ ಅಧಿಕಾರಿಯನ್ನು ತಕ್ಷಣ ವರ್ಗಾಯಿಸಿ ಉತ್ತಮ ಅಧಿಕಾರಿಯನ್ನು ಇಲ್ಲಿಗೆ ನಿಯೋಜಿಸಬೇಕು ಎಂದು ಒತ್ತಾಯಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಮುಖಂಡ ಚಂದು ಎಲ್. ಮಾತನಾಡಿ, ದೇಶದಲ್ಲಿ ಗೋವಿನ ಹೆಸರಿನಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಇದನ್ನು ತಕ್ಷಣ ನಿಯಂತ್ರಿಸಬೇಕು. ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ತಾಲೂಕಿನಲ್ಲಿ ಪ.ಜಾತಿ ಪಂಗಡಗಳ ಹಾಸ್ಟೆಲ್‌ನಲ್ಲಿ ಸರಿಯಾದ ಸ್ವಚ್ಛತೆಯಿಲ್ಲ. ಹಿಂದುಳಿದ ವರ್ಗಗಳ ಹಾಸ್ಟೆಲ್‌ಗೆ ನೀಡುವ ಆಹಾರ ಮತ್ತು ಮ.ಜಾತಿ ಮತ್ತು ಪಂಗಡ ಹಾಸ್ಟೆಲ್‌ಗೆ ನೀಡುವ ಆಹಾರಕ್ಕೆ ವ್ಯತ್ಯಾಸವಿದೆ. ಇಲ್ಲಿ ತಾರತಮ್ಯ ನಡೆಯುತ್ತಿದೆ ಇದನ್ನು ಕೂಡಲೇ ನಿಲ್ಲಿಸಬೇಕು ಎಂದರು.

ದಲಿತ ಮುಖಂಡ ವಿಶ್ವನಾಥ ಬಂಟ್ವಾಳ ಮಾತನಾಡಿ, ಬಿ.ಸಿ.ರೋಡ್ ಜಂಕ್ಷನ್‌ನಲ್ಲಿ ಟ್ರಾಫಿಕ್ ನಿಯಂತ್ರಣದ ಬಗ್ಗೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು. ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ನೇಮಕಾತಿಯಲ್ಲಿ ದಲಿತರಿಗೆ ಅನ್ಯಾಯವಾಗಿದೆ. ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಸುಂದರ ಕಳೆಂಜ ಮಾತನಾಡಿ, ಕಳೆಂಜ ಸುತ್ತಮುತ್ತ ಪ್ರದೇಶದ ಕೆಲವು ರಸ್ತೆಗಳು ತೀವ್ರ ಹದಗೆಟ್ಟಿದ್ದು ಇದರಿಂದ ವಾಹನ ಸವಾರರಿಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಅರಸಿನಮಕ್ಕಿ, ಕಾಯರ್ತಡ್ಕ ಮುಂತಾದೆಡೆ ಕಳ್ಳಭಟ್ಟಿ ದಂಧೆ ವ್ಯಾಪಕವಾಗಿ ನಡೆಯುತ್ತಿದೆ ಎಂದರು.

ಪ್ರಭಾಕರ ನಾಯ್ಕ ಕನ್ಯಾಡಿ ಮಾತನಾಡಿ, ಕನ್ಯಾಡಿಯಲ್ಲಿ ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸೇಡು ತೀರಿಸಲು ಅಕ್ರಮ ಮರ ಸಾಗಾಟ ಮಾಡುತ್ತಿರುವವರ ಬಗ್ಗೆ ನನ್ನ ನಕಲಿ ಸಹಿ ಬಳಸಿ ಸಂತೋಷ ಎಂಬಾತ ಅರಣ್ಯ ಇಲಾಖೆಗೆ ದೂರು ನೀಡಿದ್ದಾನೆ. ಇದರಿಂದ ನನಗೆ ಬೆದರಿಕೆಗಳು ಬರುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಯಿತು.

ಕೇಶವ ಮಲೆಕುಡಿಯ ನೆರಿಯ ಮಾತನಾಡಿ, ನೆರಿಯಾ, ಕಾಟಾಜೆ ಎಂಬಲ್ಲಿ ಮಲೆಕುಡಿಯ ಕುಟುಂಬಗಳು ದಶಕಗಳಿಂದ ಬದುಕುತ್ತಿದ್ದಾರೆ. ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಿದರೂ ಹಕ್ಕು ಪತ್ರ ಸಿಕ್ಕಿಲ್ಲ. ಅರಣ್ಯ ಹಕ್ಕಿನಲ್ಲಿಯೂ ಹಕ್ಕುಪತ್ರ ಸಿಗಲಿಲ್ಲ. ಸುಂದರ ಮಲೆಕುಡಿಯರ ಮೇಲೆ ಹಲ್ಲೆ ನಡೆದಾಗ ತಿಂಗಳಲ್ಲಿಯೇ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇನ್ನೂ ನೀಡಿಲ್ಲ ಎಂದು ವಿವರಿಸಿದರು. ಈ ಬಗ್ಗೆ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಯಿತು.

ದಲಿತ ಮುಖಂಡರುಗಳಾದ ಬೇಬಿ ಸುವರ್ಣ, ಸಿ. ಕೆ. ಚಂದ್ರಕಲಾ, ರಮೇಶ್ ಬೆಳ್ತಂಗಡಿ, ರಾಘವ ಕಲ್ಮಂಜ, ಕೇಶವ ಪಿಲ್ಯ, ಶ್ರೀಧರ ಕಳೆಂಜ, ಚೆನ್ನಪ್ಪ ಬಂಟ್ವಾಳ, ಸದಾಶಿವ, ನೇಮಿರಾಜ್, ವಿಶ್ವನಾಧ ಅಲೆಕಾಡಿ ಮುಂತಾದವರು ಮಾತನಾಡಿದರು.

ನಂತರ ಎಸ್ಪಿ ಬೋರಸೆ ಮಾತನಾಡಿ, ಬೆಳ್ತಂಗಡಿಯಲ್ಲಿ ನಡೆದ ಕುಂದುಕೊರತೆ ಸಭೆಯಲ್ಲಿ ಅತೀ ಹೆಚ್ಚು ಜನ ಭಾಗವಹಿಸಿದ್ದು ಉತ್ತಮ ಬೆಳವಣಿಗೆ. ಇಲ್ಲಿ ವೈಯಕ್ತಿಕ ಹಾಗೂ ಸಮುದಾಯ, ಸಾರ್ವಜನಿಕ ಸಮಸ್ಯೆಯ ಬಗ್ಗೆ ದೂರುಗಳು ಬಂದಿದ್ದು ಇದರಲ್ಲಿ ಆದ್ಯತೆ ಹಾಗೂ ಅವಶ್ಯಕತೆಗಳ ಬಗ್ಗೆ ಗಮನ ಹರಿಸಲಾಗುವುದು ಎಂದರು.

ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ರವೀಶ್, ಪುತ್ತೂರು ವಿಭಾಗದ ಎಎಸ್ಪಿ ರಿಷ್ಯಂತ್, ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ನೇಮಿರಾಜ್, ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಬೆಳ್ತಂಗಡಿ ತಾ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಿ.ಆರ್. ನರೇಂದ್ರ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಂತೋಷ್ ಉಪಸ್ಥಿತರಿದ್ದರು.

ಗೋವಿನ ರಕ್ಷಣೆಯ ಹೆಸರಿನಲ್ಲಿ ಸಂಘ ಪರಿವಾರದವರು ದಲಿತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ತಲವಾರು, ತ್ರಿಶೂಲ ಹಿಡಿದು ಹೋರಾಟಕ್ಕೆ ಸಿದ್ಧ ಎಂದು ಬಹಿರಂಗವಾಗಿ ಹೇಳುತ್ತಿದ್ದು, ಇಂತಹ ಸಂಘಟನೆಯನ್ನು ನಿಷೇಧಿಸಬೇಕು. ಗೋವಿನ ಹೆಸರಿನಲ್ಲಿ ನಡೆಯುತ್ತಿರುವ ದಾಳಿಗಳನ್ನು ಖಂಡಿಸುವ ನಿರ್ಣಯ ತೆಗೆದುಕೊಳ್ಳಬೇಕು ಈಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಪತ್ರ ಬರೆಯಬೇಕು.

ಬಿ.ಕೆ. ವಸಂತ, ದಲಿತ ಮುಖಂಡ ಬೆಳ್ತಂಗಡಿ.

ತಾಲೂಕಿನಲ್ಲಿ 5 ಶಾಲೆಗಳು ಪ್ರಿಸ್ಟೇಜ್ ಶಿಕ್ಷಣ ಸೌಲಭ್ಯಕ್ಕೆ ಅರ್ಹವಾಗಿದ್ದು, ಇದರಲ್ಲಿ ಪ.ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅವಕಾಶವಿದೆ. ಆದರೆ ಸಮಾಜ ಕಲ್ಯಾಣ ಇಲಾಖಾ ಅಧಿಕಾರಿಗಳ ನಿರ್ಲಕ್ಷದಿಂದ ಹಲವಾರು ವರ್ಷಗಳಿಂದ ಈ ಅವಕಾಶ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ. ಇದರ ಬಗ್ಗೆ ಸರಕಾರದ ಮಟ್ಟದಲ್ಲಿ ಪರಿಶೀಲನೆ ನಡೆಸಿದಾಗ ಇಲ್ಲಿನ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ವರದಿ ನೀಡದೇ ಇರುವುದರಿಂದ ಅನುದಾನ ಸಿಗುತ್ತಿಲ್ಲ ಎಂದಿದ್ದಾರೆ. ಮಕ್ಕಳಿಗೆ ಆದ ಅನ್ಯಾಯದ ಕಾರಣದಿಂದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು.

ಚಂದು ಎಲ್.


ದಲಿತ ವಿದ್ಯಾರ್ಥಿಗಳನ್ನು ಶಾಲಾ ಕಾಲೇಜುಗಳಲ್ಲಿ ಧರ್ಮದ ಆಧಾರದಲ್ಲಿ ದಾರಿ ತಪ್ಪಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದ್ದು, ಕೆಲ ಸಂಘಟನೆಗಳು ದಲಿತ ವಿದ್ಯಾರ್ಥಿಗಳನ್ನು ಉಪಯೋಗಿಸಿ ವಿದ್ವಂಸಕ ಕೃತ್ಯಗಳಿಗೆ ಮುಂದಾಗುತ್ತಿದ್ದಾರೆ. ಇದಕ್ಕೆ ಬಲಿಯಾಗಿ ಎಷ್ಟೋ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆ ಗಮನಹರಿಸುವ ಅಗತ್ಯವಿದೆ.

ಸಂಜೀವ ಆರ್., ದ.ಸಂ.ಸ ಮುಖಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X