Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಲ್ಪಸಂಖ್ಯಾತರ ಆಯೋಗಕ್ಕೆ ನ್ಯಾಯಾಂಗ...

ಅಲ್ಪಸಂಖ್ಯಾತರ ಆಯೋಗಕ್ಕೆ ನ್ಯಾಯಾಂಗ ಅಧಿಕಾರ: ಬಲ್ಕೀಸ್ ಬಾನು

ವಾರ್ತಾಭಾರತಿವಾರ್ತಾಭಾರತಿ17 Aug 2016 10:05 PM IST
share
ಅಲ್ಪಸಂಖ್ಯಾತರ ಆಯೋಗಕ್ಕೆ ನ್ಯಾಯಾಂಗ ಅಧಿಕಾರ: ಬಲ್ಕೀಸ್ ಬಾನು

ಮಂಗಳೂರು, ಆ.17: ಕರ್ನಾಟಕ ಅಲ್ಪಸಂಖ್ಯಾತರ ಆಯೋಗಕ್ಕೆ ರಾಜ್ಯ ಸರಕಾರವು ನ್ಯಾಯಾಂಗ ಅಧಿಕಾರವನ್ನು ನೀಡಿದೆ ಎಂದು ಆಯೋಗದ ಅಧ್ಯಕ್ಷೆ ಬಲ್ಕೀಸ್ ಬಾನು ತಿಳಿಸಿದ್ದಾರೆ.

ಅವರು ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದುವರೆಗೆ ಇತರ ಆಯೋಗಗಳಿಗೆ ಈ ಅಧಿಕಾರವಿದ್ದರೂ, ಅಲ್ಪಸಂಖ್ಯಾತರ ಆಯೋಗಕ್ಕೆ ಇರಲಿಲ್ಲ. ಈ ಬಗ್ಗೆ ಇತ್ತೀಚೆಗೆ ಸರಕಾರವು ಆಯೋಗಕ್ಕೆ ನ್ಯಾಯಾಂಗ ಅಧಿಕಾರ ನೀಡಿ ಆದೇಶ ಹೊರಡಿಸಿದೆ. ಇದರಿಂದ ಅಗತ್ಯಬಿದ್ದವರಿಗೆ ಸಮನ್ಸ್ ಸೇರಿದಂತೆ ಸಿವಿಲ್ ಅಧಿಕಾರವನ್ನು ಆಯೋಗವು ಹೊಂದಲಿದೆ ಎಂದು ಅವರು ಹೇಳಿದರು.

ತಾನು ಅಧಿಕಾರಕ್ಕೆ ಬಂದ ಬಳಿಕ ಇದುವರೆಗೂ 400ಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ನೊಂದವರಿಗೆ ನ್ಯಾಯವನ್ನು ಒದಗಿಸುವುದು ಆಯೋಗದ ಮೊದಲ ಆದ್ಯತೆ. ಅಲ್ಪಸಂಖ್ಯಾತರು ನ್ಯಾಯಕ್ಕಾಗಿ ಆಯೋಗವನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.
 ಅಲ್ಪಸಂಖ್ಯಾತರ ಶಾಲೆಗಳ ಪ್ರಮಾಣಪತ್ರ ನೀಡುವಲ್ಲಿ ಸಮಸ್ಯೆಗಳುಂಟಾಗಿರುವುದು ತನ್ನ ಗಮನಕ್ಕೆ ಬಂದಿದೆ. ಅಲ್ಪಸಂಖ್ಯಾತರ ಶಾಲೆಗಳಲ್ಲಿ ಕನಿಷ್ಠ ಶೇ.25ರಷ್ಟಾದರೂ ಮಕ್ಕಳು ಇದ್ದರೆ, ಅಂತಹ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲಾಗುತ್ತದೆ. ಅಲ್ಪಸಂಖ್ಯಾತರಿಗೆ ಶೈಕ್ಷಣಿಕವಾಗಿ ಮುಂದೆ ಬರುವ ಉದ್ದೇಶದಿಂದ ಈ ನಿಯಮ ಜಾರಿಗೆ ತರಲಾಗಿದೆ. ಈ ಕುರಿತು ಆಯೋಗವು ಸೂಕ್ತವಾಗಿ ಸ್ಪಂದಿಸಲಿದೆ ಎಂದು ಬಲ್ಕೀಸ್ ಬಾನು ಹೇಳಿದರು.

ಇತ್ತೀಚೆಗೆ ಅರೇಬಿಕ್ ಭಾಷೆ ಕಲಿಸುತ್ತಿದ್ದಾರೆಂಬ ಕಾರಣಕ್ಕೆ ದುಷ್ಕರ್ಮಿಗಳು ದಾಳಿ ನಡೆಸಿದ ಮಂಗಳೂರಿನ ಬೊಂಡಂತಿಲ ಸೈಂಟ್ ಥಾಮಸ್ ಶಾಲೆಗೆ ಇಂದು ತಾನು ಭೇಟಿ ನೀಡಿ ಪರಿಶೀಲಿಸಿದ್ದೇನೆ. ವಿದ್ಯಾರ್ಥಿಗಳಿಗೆ ನೂತನ ಕಲಿಕೆಯ ದೃಷ್ಟಿಯಿಂದ ಶಾಲೆಯಲ್ಲಿ ಅರೇಬಿಕ್ ಮತ್ತು ಜರ್ಮನ್ ಭಾಷೆ ಕಲಿಸಲಾಗುತ್ತಿತ್ತು. ಕರಾವಳಿಯಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿನವರು ಉದ್ಯೋಗದಲ್ಲಿರುವುದರಿಂದ, ಭವಿಷ್ಯದಲ್ಲಿ ಉದ್ಯೋಗಕ್ಕಾಗಿ ಗಲ್ಫ್ ರಾಷ್ಟ್ರಗಳಿಗೆ ತೆರಳುವ ಅಗತ್ಯ ಬಿದ್ದಲ್ಲಿ ಅರೇಬಿಕ್ ಭಾಷೆ ಕಲಿತರೆ ಸಹಕಾರಿಯಾಗಬಲ್ಲದು ಎಂಬ ದೃಷ್ಟಿಯಿಂದ ಶಾಲೆಯ ಆಡಳಿತ ಮಂಡಳಿಯು, ಪಾಲಕರೊಂದಿಗೆ ಚರ್ಚಿಸಿ, ವಿದೇಶಿ ಭಾಷೆಗಳ ತರಗತಿ ನಡೆಸುತ್ತಿತ್ತು ಎಂದು ಅವರು ಹೇಳಿದರು.

ಶಾಲೆಯ ಮೇಲೆ ಆಗಿರುವ ದಾಳಿಯ ಬಗ್ಗೆ ಶಾಲೆಯ ಆಡಳಿತ ಮಂಡಳಿ, ಅಧ್ಯಾಪಕರು ಮತ್ತು ಪಾಲಕರಿಂದ ಇಂದು ಮಾಹಿತಿ ಪಡೆದಿದ್ದು, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಂದ ವರದಿ ಪಡೆದು, ಅಲ್ಪಸಂಖ್ಯಾತರ ಆಯೋಗವು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಬಲ್ಕೀಸ್ ಬಾನು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಆಯೋಗದ ಸದಸ್ಯ ಮಾರ್ಸೆಲ್ ಮೊಂತೆರೋ, ಕಾರ್ಯದರ್ಶಿ ಸಲ್ಮಾ ಸಾದಿಕ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಉಸ್ಮಾನ್, ಕೆಎಂಡಿಸಿ ವ್ಯವಸ್ಥಾಪಕ ಸಫ್ವಾನ್, ವಕ್ಫ್ ಅಧಿಕಾರಿ ಅಬೂಬಕರ್ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಆಯೋಗದ ಅಧ್ಯಕ್ಷರು, ಮಂಗಳೂರು ಬಿಷಪ್ ಅಲೋಸಿಯಸ್ ಪಾವ್ಲ್ ಡಿಸೋಜಾ ಅವರನ್ನು ಬಿಷಪ್ ಹೌಸ್‌ನಲ್ಲಿ ಭೇಟಿಯಾಗಿ ಚರ್ಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X