Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನ ಜಾಮೀನು ರದ್ದು ಮಾಡಿ, ನಾನು...

ನನ್ನ ಜಾಮೀನು ರದ್ದು ಮಾಡಿ, ನಾನು ಜೈಲಲ್ಲೇ ಇರುತ್ತೇನೆ ಎಂದ ಮಾಜಿ ಕಲ್ಲಿದ್ದಲು ಕಾರ್ಯದರ್ಶಿ!

ವಾರ್ತಾಭಾರತಿವಾರ್ತಾಭಾರತಿ17 Aug 2016 11:14 PM IST
share

ಹೊಸದಿಲ್ಲಿ, ಆ.17: ನಾನು ಜೈಲಲ್ಲಿದ್ದು ಕೊಂಡೇ ವಿಚಾರಣೆ ಎದುರಿಸುತ್ತೇನೆ. ದಯವಿಟ್ಟು ನನ್ನ ಜಾಮೀನು ರದ್ದು ಮಾಡಿ ಎಂಬ ವಿಚಿತ್ರ ಮನವಿಯೊಂದು ವಿಶೇಷ ಕೋರ್ಟ್‌ಗೆ ಸಲ್ಲಿಕೆಯಾಗಿದೆ. ಹಲವು ಕಲ್ಲಿದ್ದಲು ಹಗರಣಗಳಲ್ಲಿ ಆರೋಪಿಯಾಗಿರುವ ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್.ಸಿ.ಗುಪ್ತಾ ಇಂಥದ್ದೊಂದು ಮನವಿ ಸಲ್ಲಿಸಿದ್ದಾರೆ.

ಹಗರಣದ ವಿಚಾರಣೆ ವೇಳೆ ತೀರಾ ಭಾವಪರಶವಾಗಿದ್ದ ಗುಪ್ತಾ, ಜಾಮೀನಿನ ಮೇಲೆ ಬಿಡುಗಡೆ ಮಾಡುವ ಮುನ್ನ ಸಲ್ಲಿಸಿದ್ದ ವೈಯಕ್ತಿಕ ಬಾಂಡ್ ವಾಪಸು ಪಡೆಯುವ ಸಂಬಂಧ ಅರ್ಜಿ ಸಲ್ಲಿಸಿದರು. ಈ ಪ್ರಕರಣದ ಹಣಕಾಸು ಹೊರೆಯನ್ನು ತಡೆದುಕೊಳ್ಳಲು ನನಗೆ ಸಾಧ್ಯವಿಲ್ಲ ಎಂದು ಹೇಳಿ ತಮ್ಮ ವಕೀಲರಿಗೆ ನೀಡಿದ್ದ ಆದೇಶ ಪತ್ರವನ್ನು ವಾಪಸು ಪಡೆಯುವ ಇಂಗಿತ ವ್ಯಕ್ತಪಡಿಸಿದರು. ತಮಗೆ ಪರವಾದ ಯಾವ ಸಾಕ್ಷಿಯ ವಿಚಾರಣೆಯನ್ನೂ ನಡೆಸಬೇಕಿಲ್ಲ ಎಂದು ಹೇಳಿದರು.

ವಿಶೇಷ ನ್ಯಾಯಾಧೀಶ ಭರತ್ ಪರಾಶರ್ ಅವರು, ಈ ಮನವಿಯ ಬಗ್ಗೆ ಮರುಚಿಂತನೆ ನಡೆಸಲು ಗುಪ್ತಾಗೆ ಕಾಲಾವಕಾಶ ನೀಡಿದರು. ಈ ಮನವಿಯ ಬಗ್ಗೆ ಬುಧವಾರದ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸಿಬಿಐಗೆ ಸೂಚನೆ ನೀಡಿದರು. ಗುಪ್ತಾ ಈ ಮನವಿ ಸಲ್ಲಿಸಲು ಏನು ಕಾರಣ ಎಂಬ ಬಗ್ಗೆ ನ್ಯಾಯಾಲಯ ವಿಸ್ತೃತ ವಿಚಾರಣೆ ನಡೆಸಿತು. ತಮ್ಮ ಪರ ವಕೀಲರನ್ನು ನೇಮಿಸಿಕೊಳ್ಳಲೂ ಸಾಧ್ಯವಾಗದಷ್ಟು ಆರ್ಥಿಕ ಮುಗ್ಗಟ್ಟಿನ ಸ್ಥಿತಿ ಇದೆ ಎಂದು ಗುಪ್ತಾ ಹೇಳಿದರು. ಈ ಸಂದರ್ಭದಲ್ಲಿ ನ್ಯಾಯಾಲಯ, ದಿಲ್ಲಿ ಕಾನೂನು ಸೇವಾ ವಿಭಾಗದಿಂದ ವಕೀಲರನ್ನು ನಿಯೋಜಿಸುವ ಭರವಸೆ ನೀಡಿತು ಅಥವಾ ಇವರ ಪರವಾಗಿ ಎಮಿಕಸ್ ಕ್ಯೂರಿ ಅವರನ್ನು ನೇಮಕ ಮಾಡಬಹುದು ಎಂಬ ಅವಕಾಶ ನೀಡಿತು.
ಆದರೆ ಇವೆರಡೂ ಪ್ರಸ್ತಾವಗಳನ್ನು ಗುಪ್ತಾ ತಿರಸ್ಕರಿಸಿದರು. ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X