ಪುತ್ತೂರು: ಗಾಂಧಿ ಕಟ್ಟೆ ಸಮಿತಿ
ಪುತ್ತೂರು, ಆ.17: ಇಲ್ಲಿನ ಬಸ್ ನಿಲ್ದಾಣ ಸಮೀಪದ ಗಾಂಧಿ ಮಂಟಪದಲ್ಲಿ ಗಾಂಧಿ ಕಟ್ಟೆ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಉಪವಿಭಾಗಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂದೇಶ ನೀಡಿದರು. ಶಾಸಕಿ ಶಕುಂತಳಾ ಶೆಟ್ಟಿ, ತಾಪಂ ಅಧ್ಯಕ್ಷೆ ಭವಾನಿ ಚಿದಾನಂದ, ನಗರಸಭಾ ಅಧ್ಯಕ್ಷೆ ಜಯಂತಿ, ಪುಡಾದ ಅಧ್ಯಕ್ಷ ಬೆಟ್ಟ ಈಶ್ವರ ಭಟ್, ನಗರಸಭಾ ಪೌರಾಯುಕ್ತೆ ರೇಖಾ ಜೆ. ಶೆಟ್ಟಿ, ತಹಶೀಲ್ದಾರ್ ಪುಟ್ಟ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಗಾಂಧಿ ಕಟ್ಟೆ ಸಮಿತಿಯ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಆಳ್ವ ಸ್ವಾಗತಿಸಿ, ವಂದಿಸಿದರು.
Next Story





