Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಹಿಳಾ ಕುಸ್ತಿ: ಐತಿಹಾಸಿಕ ಕಂಚಿನ...

ಮಹಿಳಾ ಕುಸ್ತಿ: ಐತಿಹಾಸಿಕ ಕಂಚಿನ ಸಾಧನೆಗೆ ’ಸಾಕ್ಷಿ’

ಸಾಂಬಾ ನಾಡಿನಲ್ಲಿ ಕೊನೆಗೂ ಮೊಳಗಿದ ಜನ ಗಣ ಮನ

ವಾರ್ತಾಭಾರತಿವಾರ್ತಾಭಾರತಿ18 Aug 2016 6:11 AM IST
share
ಮಹಿಳಾ ಕುಸ್ತಿ: ಐತಿಹಾಸಿಕ ಕಂಚಿನ ಸಾಧನೆಗೆ ’ಸಾಕ್ಷಿ’

ರಿಯೊ ಡಿ ಜನೈರೊ,ಆ.18: ಸಾಂಬಾ ನಾಡಿನ ಒಲಿಂಪಿಕ್ಸ್ ಗ್ರಾಮದ ಪೋಡಿಯಂನಲ್ಲಿ ಕೊನೆಗೂ ಜನ ಗಣ ಮನ ಮೊಳಗಿತು. ಭಾರತದ ಮಹಿಳಾ ಕುಸ್ತಿ ಪಟು ಸಾಕ್ಷಿ ಮಲಿಕ್ ದೇಶಕ್ಕೆ ಪ್ರಸಕ್ತ ಒಲಿಂಪಿಕ್ಸ್‌ನಲ್ಲಿ ಮೊಟ್ಟಮೊದಲ ಪದಕ ಗೆದ್ದುಕೊಟ್ಟರು. 58 ಕೆ.ಜಿ. ವಿಭಾಗದ ಸ್ಪರ್ಧೆಯಲ್ಲಿ ಸಾಕ್ಷಿ ಕಿರ್ಗಿಸ್ತಾನ್‌ನ ಐಸುಲೂ ಟಿನಿಬೆಕೋವ್ ವಿರುದ್ಧ 8-5 ಅಂತರದ ಜಯ ಸಾಧಿಸಿ ಕಂಚಿನ ಪದಕಕ್ಕೆ ಮುತ್ತಿಟ್ಟರು.

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ 0-5 ಹಿನ್ನೆಡೆಯಿಂದ ಚೇತರಿಸಿಕೊಂಡು ಅಮೋಘ ಪ್ರದರ್ಶನ ನೀಡಿದ ಉಕ್ಕಿನ ಮಹಿಳೆ ಪಂದ್ಯದ ಜತೆಗೆ ಭಾರತದ ಕೋಟ್ಯಂತರ ಕ್ರೀಡಾಭಿಮಾನಿಗಳ ಹೃದಯ ಗೆದ್ದರು. ಈ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಸಾಧನೆ ಮಾಡಿದ ಭಾರತದ ನಾಲ್ಕನೇ ಮಹಿಳೆ ಎಂಬ ಗೌರವಕ್ಕೆ ಪಾತ್ರರಾದರು. 2000ನೇ ಇಸ್ವಿ ಸಿಡ್ನಿ ಒಲಿಂಪಿಕ್ಸ್‌ನ ವೈಟ್ ಲಿಫ್ಟಿಂಗ್‌ನಲ್ಲಿ ಕರ್ಣಂ ಮಲ್ಲೇಶ್ವರಿ, 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಮೇರಿ ಕೋಮ್ ಹಾಗೂ ಸೈನಾ ನೆಹ್ವಾಲ್ ಈ ಮುನ್ನ ಭಾರತದ ಪರ ಪದಕ ಸಾಧನೆ ಮಾಡಿದ ಮಹಿಳಾ ಅಥ್ಲೀಟ್‌ಗಳು.

ಹರ್ಯಾಣದ ರೋಹ್ಟಕ್ ಮೂಲದ 23 ವರ್ಷದ ಸಾಕ್ಷಿ ಮಲಿಕ್, ಇತರ ನಾಲ್ಕು ಪಂದ್ಯಗಳಂತೆ ಈ ಪಂದ್ಯದಲ್ಲೂ ಆರಂಭಿಕ ಹಿನ್ನಡೆಯಿಂದ ಚೇತರಿಸಿಕೊಂಡು ನಾಟಕೀಯ ಜಯ ಸಾಧಿಸಿ ಪದಕ ಸಾಧನೆ ಮಾಡಿದರು. ಕ್ವಾರ್ಟರ್ ಫೈನಲ್‌ನಲ್ಲಿ 2-0ರಿಂದ ರಷ್ಯಾದ ವಲೇರಿಯಾ ಕೊಬ್ಲೋವ್ ವಿರುದ್ಧ ಸೋಲು ಅನುಭವಿಸಿದರು. ಆದರೆ ವಲೇರಿಯಾ ಚಿನ್ನದ ಪದಕ ಗೆದ್ದ ಹಿನ್ನೆಲೆಯಲ್ಲಿ ಭಾರತದ ಕುಸ್ತಿಪಟುವಿಗೆ ಕಂಚಿನ ಪದಕಕ್ಕೆ ಹೋರಾಡುವ ಅವಕಾಶ ದೊರೆಯಿತು

ಕಿರ್ಗಿಸ್ತಾನದ ಕುಸ್ತಿಪಟು ಪಂದ್ಯದುದ್ದಕ್ಕೂ ಹಿಡಿತ ಸಾಧಿಸಿದ್ದರೂ, ಬೌಟ್‌ನ ಪ್ರಮುಖ ಘಟ್ಟಗಳಲ್ಲಿ ಅಮೋಘ ನಿರ್ವಹಣೆ ತೋರಿದ ಸಾಕ್ಷಿ ಕೊನೆಗೂ ಜಯ ಒಲಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಮೊದಲ ಅವಧಿ ಮುಗಿದಾಗ 0-5 ಹಿನ್ನಡೆಯಲ್ಲಿದ್ದ ಸಾಕ್ಷಿ, ದ್ವಿತೀಯಾರ್ಧದಲ್ಲಿ ಎದುರಾಳಿಯನ್ನು ಮ್ಯಾಟ್ ಮೇಲೆ ಕೆಡವುವ ಮೂಲಕ ಮೊದಲ ಅಂಕ ಸಂಪಾದಿಸಿದರು. ಮತ್ತೆ ಮೂರು ಅಂಕ ಸಂಪಾದಿಸಿ ಹಿನ್ನಡೆಯನ್ನು 4-5ಕ್ಕೆ ಇಳಿಸಿಕೊಳ್ಳುವಲ್ಲಿ ಯಶಸ್ವಿಯಾದರು.

5-5 ಸಮಬಲ ಸಾಧಿಸಿದ ಬಳಿಕ ಸಾಕ್ಷಿ ಹಿಂದಿರುಗಿ ನೋಡಲೇ ಇಲ್ಲ. ಅಂತಿಮ ಕ್ಷಣದಲ್ಲಿ ಕಿರ್ಗಿಸ್ತಾನದ ಕುಸ್ತಿಪಟುವನ್ನು ಕೆಡವಿದ ಸಾಕ್ಷಿ ಪ್ರಮುಖ ಮೂರು ಅಂಕ ಸಂಪಾದಿಸಿದರು. ಇದಕ್ಕೂ ಮುನ್ನ ಕಂಚಿನ ಪದಕದ ಪ್ಲೇ ಆಫ್ ಸುತ್ತಿನಲ್ಲಿ ಮಂಗೋಲಿಯಾದ ಪುರೆವೊಡೊರ್ಜಿನ್ ಒರ್ಕಾನ್ ವಿರುದ್ಧ 12-3 ಭಾರಿ ಅಂತರದ ಜಯ ಸಾಧಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X