ಪುತ್ತೂರು: ಆ.20ರಂದು ರಾಜ್ಯಮಟ್ಟದ ಮಾಧ್ಯಮಗೋಷ್ಠಿ
ಪುತ್ತೂರು, ಆ.18: ವಿವೇಕಾನಂದ ಕಾಲೇಜ್‌ನ ಪತ್ರಿಕೋದ್ಯಮ ವಿಭಾಗದ ದಶಮಾನೋತ್ಸವ ಆಚರಣೆ ಹಾಗೂ ರಾಜ್ಯ ಮಟ್ಟದ ವಿಚಾರಗೋಷ್ಠಿ ಆ.20ರಂದು ಕಾಲೇಜ್‌ನ ಗೋಲ್ಡನ್ ಜ್ಯುಬಿಲಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜ್‌ನ ಆಡಳಿತ ಮಂಡಳಿ ಅಧ್ಯಕ್ಷ ಪಿ.ಶ್ರೀನಿವಾಸ ಪೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತೆ ಭಾರತಿ ಹೆಗಡೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಲೇಜ್‌ನ ಸ್ಥಾಪಕ ಸಂಚಾಲಕ ಕೆ. ರಾಮಭಟ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ್ ರೈ ಕುತ್ಯಾಳ ದಶಮಾನೋತ್ಸವದ ಲೋಗೊ ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ 3 ಗೋಷ್ಠಿಗಳು ನಡೆಯಲಿದ್ದು, ‘ಪತ್ರಕರ್ತನ ಸಾಮಾಜಿಕ ಜವಾಬ್ದಾರಿಗಳು’ ಎಂಬ ವಿಷಯದ ಬಗ್ಗೆ ಪತ್ರಕರ್ತ ವಿನಾಯಕ ಭಟ್ ಮೂರೂರು, ‘ವರದಿಗಾರನ ಪ್ರಸ್ತುತ ಸವಾಲುಗಳು’ ಎಂಬ ವಿಷಯದ ಬಗ್ಗೆ ಪತ್ರಕರ್ತರಾದ ಪಿ.ಬಿ. ಹರೀಶ್ ರೈ ಹಾಗೂ ಸುಧಾಕರ ಸುವರ್ಣ ತಿಂಗಳಾಡಿ, ‘ತನಿಖಾ ವರದಿಗಾರಿಕೆ’ ವಿಷಯದ ಬಗ್ಗೆ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಉಪನ್ಯಾಸ ನೀಡಲಿದ್ದಾರೆ.
ಗೋಷ್ಠಿಯ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್ ಕೊಂಕೋಡಿ ವಹಿಸಲಿದ್ದಾರೆ. ಪತ್ರಕರ್ತ ಪ್ರಕಾಶ್ ಇಳಂತಿಲ ಸಮಾರೋಪ ಭಾಷಣ ಮಾಡಲಿದ್ದಾರೆ. ಪತ್ರಕರ್ತೆ ಧನ್ಯಾ ಬಾಳೆಕಜೆ ಹಾಗೂ ಕಾಲೇಜ್‌ನ ಆಡಳಿತ ಮಂಡಳಿ ಸಂಚಾಲಕ ಎಂ.ಟಿ. ಜಯರಾಮ್ ಭಟ್ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಲೇಜ್‌ನ ಪ್ರಾಂಶುಪಾಲ ಪೀಟರ್ ವಿಲ್ಸನ್ ಪ್ರಭಾಕರ್, ಜಯರಾಮ್ ಭಟ್, ಡಾ. ಎಚ್.ಜಿ. ಶ್ರೀಧರ್ ಮತ್ತು ರಾಕೇಶ್ ಕಮ್ಮಜೆ ಉಪಸ್ಥಿತರಿದ್ದರು.







