Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ ವೈದ್ಯರನ್ನು ಸಭೆ, ತರಬೇತಿಗಳಿಗೆ...

ಸರಕಾರಿ ವೈದ್ಯರನ್ನು ಸಭೆ, ತರಬೇತಿಗಳಿಗೆ ನಿಯೋಜಿಸದಂತೆ ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ18 Aug 2016 6:48 PM IST
share
ಸರಕಾರಿ ವೈದ್ಯರನ್ನು ಸಭೆ, ತರಬೇತಿಗಳಿಗೆ ನಿಯೋಜಿಸದಂತೆ ಡಿಸಿ ಸೂಚನೆ

 ಮಂಗಳೂರು, ಆ. 18: ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಇಲ್ಲದಿದ್ದರೆ ಸಾರ್ವಜನಿಕರಿಗೆ, ರೋಗಿಗಳಿಗೆ ತೀವ್ರ ಸಮಸ್ಯೆಗಳಾಗುವುದರಿಂದ ಇನ್ನು ಮುಂದೆ ಸರಕಾರಿ ಆಸ್ಪತ್ರೆಗಳ ವೈದ್ಯರನ್ನು ವಿವಿಧ ಸಭೆಗಳಿಗೆ ಕರೆಯುವುದನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಮಿಷನ್ ಸಭೆಯಲ್ಲಿ ಮಾತನಾಡುತ್ತಿದ್ದರು.

ಸರಕಾರಿ ಆಸ್ಪತ್ರೆಗಳ ವೈದ್ಯರುಗಲು ವಿವಿಧ ಸರಕಾರಿ ಸಭೆಗಳಿಗೆ ಭಾಗವಹಿಸಿದರೆ, ಆಸ್ಪತ್ರೆಗಳಲ್ಲಿ ರೋಗಿಗಳು ಕಾಯಬೇಕಾದ ಪರಿಸ್ಥಿತಿ ಇದೆ. ಈ ನಿಟ್ಟಿನಲ್ಲಿ ತೀರಾ ಅಗತ್ಯವಿರುವ ತರಬೇತಿಗಳಿಗೆ ಮಾತ್ರ ಅವರನ್ನು ನಿಯೋಜಿಸಲು ಅವರು ಸೂಚಿಸಿದರು. ಸರಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ಔಷಧಿಗಳನ್ನು ಸಂಗ್ರಹಿಸಿಡಬೇಕು. ಸಾರ್ವಜನಿಕರು ಹೊರಗಡೆ ದುಡ್ಡು ಕೊಟ್ಟು ಔಷಧಿ ಖರೀದಿಸುವುದಕ್ಕೆ ಅವಕಾಶ ಮಾಡಬಾರದು ಎಂದು ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸರಕಾರಿ ಆಸ್ಪತ್ರೆಗಳ ಕಟ್ಟಡ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿಯಲ್ಲಿ ವಿಳಂಬವನ್ನು ಸಹಿಸಲಾಗದು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಎಲ್ಲಾ ಸರಕಾರಿ ಆಸ್ಪತ್ರೆಗಳ ಕಟ್ಟಡಗಳನ್ನು ತ್ವರಿತಗತಿಯಲ್ಲಿ ಮುಗಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಲೇಡಿಗೋಷನ್‌ನಲ್ಲಿ ಐಸಿಯು ಘಟಕ

ಲೇಡಿಗೋಷನ್ ಆಸ್ಪತ್ರೆಯಲ್ಲಿ ಐಸಿಯು ಕೇಂದ್ರ ತೆರೆಯಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿಗಳು ಲೇಡಿಗೋಷನ್ ಅಧೀಕ್ಷಕರಿಗೆ ಸೂಚಿಸಿದರು. ಸಾಕಷ್ಟು ಸಂಖ್ಯೆಯಲ್ಲಿ ಹೆರಿಗೆಗಳಾಗುತ್ತಿರುವ ಲೇಡಿಗೋಷನ್ ಆಸ್ಪತ್ರೆಯಲ್ಲಿ ಐಸಿಯು ಘಟಕ ತೀರಾ ಅಗತ್ಯವಾಗಿದೆ. ಇದರಿಂದ ತುರ್ತು ಸಂದರ್ಭದಲ್ಲಿ ಸಕಾಲದಲ್ಲಿ ರೋಗಿಗೆ ವೈದ್ಯಕೀಯ ಚಿಕಿತ್ಸೆ ನೀಡಬಹುದು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಪ್ರಸವ ಮರಣ ಪ್ರಕರಣಗಳ ಪರಿಶೀಲನೆ ನಡೆಸಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯು ವೈದ್ಯಕೀಯ ಕ್ಷೇತ್ರದಲ್ಲಿ ದೇಶದಲ್ಲಿಯೇ ಸಾಕಷ್ಟು ಮುಂದುವರಿದಿದ್ದು, ಹಲವಾರು ಆಸ್ಪತ್ರೆಗಳು ಇಲ್ಲಿವೆ. ಹೀಗಿದ್ದರೂ, ಜಿಲ್ಲೆಯಲ್ಲಿ ಹೆರಿಗೆ ವೇಳೆ ತಾಯಿ ಸಾವಿನ ಪ್ರಕರಣಗಳು ನಡೆಯುತ್ತಿರುವುದು ಕಳವಳಕಾರಿಯಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಜಿಲ್ಲೆಯಲ್ಲಿ ಎಲ್ಲಾ ರೀತಿಯ ವೈದ್ಯಕೀಯ ಸೌಲಭ್ಯಗಳಿದ್ದರೂ ಹೆರಿಗೆ ವೇಳೆ ಅಥವಾ ನಂತರದ ಮರಣಗಳು ಸಂಭವಿಸುವುದು ದುರದೃಷ್ಟಕರ. ಈ ನಿಟ್ಟಿನಲ್ಲಿ ಗರ್ಭಾವಸ್ಥೆಯ ಎಲ್ಲಾ ಹಂತದಲ್ಲೂ ಮಹಿಳೆಯ ಆರೋಗ್ಯದ ಮೇಲೆ ನಿಗಾ ಇಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಪರಿಹಾರ ಹಾಗೂ ವೈದ್ಯಕೀಯ ಕಾರ್ಯಕ್ರಮಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕೇಂದ್ರ ಸ್ಥಾಪಿಸಲು ಈಗಾಗಲೇ ಪುತ್ತೂರು ತಾಲೂಕಿನ ಅಲಂಕಾರಿನಲ್ಲಿ 5 ಎಕರೆ ಜಾಗ ಕಾದಿರಿಸಲಾಗಿದೆ. ಸುಮಾರು 6.5 ಕೋಟಿ ವೆಚ್ಚದಲ್ಲಿ ಪುನರ್ವಸತಿ ಕೇಂದ್ರ, ಆಸ್ಪತ್ರೆ ಸ್ಥಾಪಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ .ಈ ಯೋಜನಾ ವೆಚ್ಚ ಪರಿಷ್ಕರಿಸಿ, ಪ್ರಸ್ತಾವನೆ ಸಲ್ಲಿಸಲು ಅವರು ಸೂಚಿಸಿದರು.

ಎಂಡೋಸಲ್ಫಾನ್ ಸಂತ್ರಸ್ತ ಪ್ರದೇಶಗಳಿಗೆ 4 ಸಂಚಾರಿ ಆರೋಗ್ಯ ಘಟಕಗಳನ್ನು ಒದಗಿಸಲಾಗುವುದು. ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಆಸ್ಪತ್ರೆ ಹಾಗೂ ಮೂಡುಬಿದಿರೆ, ವಿಟ್ಲ ಸಮುದಾಯ ಕೇಂದ್ರಗಳಲ್ಲಿ ಫಿಸಿಯೋಥೆರಫಿ ಘಟಕಗಳನ್ನು ಸ್ಥಾಪಿಸಲಾಗುವುದು. ಸಂತ್ರಸ್ತರಿಗೆ ಈಗ ನೀಡುತ್ತಿರುವ ಮಾಸಾಶನವನ್ನು ಹೆಚ್ಚಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕಟ್ಟಡ ಕಾರ್ಮಿಕರಲ್ಲಿ ಡೆಂಗ್ ಮಲೇರಿಯಾ ಹೆಚ್ಚಾಗಿ ಕಂಡುಬರುತ್ತಿರುವುದರಿಂದ ಕಟ್ಟಡ ನಿರ್ಮಾಣಕ್ಕೆ ಲೈಸನ್ಸ್ ನೀಡುವಾಗಲೇ ಗುತ್ತಿಗೆದಾರರು ಮತ್ತು ಕಟ್ಟಡ ಮಾಲಕರಿಗೆ ಈ ಬಗ್ಗೆ ಷರತ್ತು ವಿಧಿಸಿ ಲೈಸನ್ಸ್ ನೀಡಲು ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಿದರು. ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ತೀವ್ರಗೊಳಿಸಬೇಕು. ಸರಕಾರಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸೊಳ್ಳೆ ಪರದೆಗಳನ್ನು ವಿತರಿಸಬೇಕು. ಇದಲ್ಲದೆ, ಶಾಲಾ ಕಾಲೇಜುಗಳಲ್ಲಿ ಸಾಂಕ್ರಾಮಿಕ ರೋಗಗಳ ಕುರಿತು ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಜಾಗ್ರತಿ ಕಾರ್ಯಕ್ರಮ ನಡೆಸಲು ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ, ಪುತ್ತೂರು ಉಪವಿಭಾಗಾಧಿಕಾರಿ ಡಾ.ರಾಜೇಂದ್ರ, ಅಪರ ಜಿಲ್ಲಾಧಿಕಾರಿ ಕುಮಾರ್, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸಾಯ್ಥಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ರಾವ್, ಮಹಾನಗರಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X