Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧರ್ಮಸ್ಥಳ: ರುಡ್‌ಸೆಟ್ ಸಂಸ್ಥೆಗಳ...

ಧರ್ಮಸ್ಥಳ: ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ18 Aug 2016 8:03 PM IST
share
ಧರ್ಮಸ್ಥಳ: ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮ್ಮೇಳನ

ಬೆಳ್ತಂಗಡಿ, ಆ.18: ಜನರಲ್ಲಿ ಅನೇಕ ಪ್ರತಿಭೆ ಹಾಗೂ ಕೌಶಲ ಇದ್ದರೂ ಅದನ್ನು ಬಳಸುವ ವಿಧಾನ ಅವರಿಗೆ ಗೊತ್ತಿರುವುದಿಲ್ಲ. ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶದಲ್ಲಿ ರುಡ್‌ಸೆಟ್ ಮತ್ತು ಆರ್‌ಸೆಟ್ ಸಂಸ್ಥೆಗಳ ಕೊಡುಗೆ ಶ್ಲಾಘನೀಯವಾಗಿದ್ದು. ಕೇಂದ್ರ ಸರಕಾರ ಕೂಡಾ ಅನೇಕ ಪ್ರಗತಿಪರ ಯೋಜನೆಗಳನ್ನು ಉಭಯ ಸಂಸ್ಥೆಗಳ ಮೂಲಕ ಜಾರಿಗೆ ತರಲು ಉದ್ದೇಶಿಸಿದೆ ಎಂದು ಕೇಂದ್ರ ಸರಕಾರದ ಗ್ರಾಮಾಭಿವೃದ್ಧಿ ಸಚಿವಾಲಯದ ಉಪಕಾರ್ಯದರ್ಶಿ ಟಿ.ಸಿ. ನೌತಿಯಾಲ್ ಹೇಳಿದ್ದಾರೆ.

ಅವರು ಧರ್ಮಸ್ಥಳದಲ್ಲಿ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಗುರುವಾರ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಸಿಂಡಿಕೇಟ್ ಬ್ಯಾಂಕ್ ಮತ್ತು ಕೆನರಾ ಬ್ಯಾಂಕ್ ಸಹಭಾಗಿತ್ವದೊಂದಿಗೆ ಪ್ರಾರಂಭಿಸಲಾದ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಕೇಂದ್ರಗಳು ಸ್ಪೂರ್ತಿಯ ಸೆಲೆಯಾಗಿದ್ದು ಇದರ ಯಶಸ್ಸನ್ನು ಕೇಂದ್ರ ಸರಕಾರ ಗಮನಿಸಿ ಅದೇ ಮಾದರಿಯಲ್ಲಿ 523 ಆರ್‌ಸೆಟ್‌ಗಳನ್ನು ಪ್ರಾರಂಭಿಸಿದೆ. ರುಡ್‌ಸೆಟ್ ನಾಯಕತ್ವದಲ್ಲಿ ಅದೇ ಮಾದರಿಯಲ್ಲಿ ಆರ್‌ಸೆಟ್‌ಳು ಕೂಡಾ ಕೆಲಸ ಮಾಡುತ್ತಿವೆ. ಉಭಯ ಸಂಸ್ಥೆಗಳು ಸಾಮಾಜಿಕ ಪರಿವರ್ತನೆಯೊಂದಿಗೆ ಆರ್ಥಿಕ ಪ್ರಗತಿಯ ರೂವಾರಿಗಳಾಗಿವೆ ಎಂದು ಹೇಳಿದರು.

ಸರಕಾರ ಮತ್ತು ಸಮಾಜ ಎರಡೂ ಸಂಸ್ಥೆಗಳಿಂದ ಬಹಳಷ್ಟು ಸೇವೆ-ಸಾಧನೆಯ ನಿರೀಕ್ಷೆಯಿದೆ. ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸುವ ಉತ್ತಮ ಮಾರುಕಟ್ಟೆ ವ್ಯವಸ್ಥೆ ಹಾಗೂ ಉದ್ಯಮಶೀಲತೆ ಬಗ್ಯೆ ಆದ್ಯತೆ ನೀಡಬೇಕು. ಈ ದಿಸೆಯಲ್ಲಿ ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸೇವೆ-ಸಾಧನೆ ಶ್ಲಾಘನೀಯವಾಗಿದೆ. ಇಂತಹ ಸೇವಾ ಸಂಸ್ಥೆಗಳು ದೇಶದೆಲ್ಲೆಡೆ ಇರಬೇಕೆಂದು ಅವರು ಆಶಿಸಿದರು.

ಕೆನರಾ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ದೀನಬಂಧು ಮಹಾಪಾತ್ರ ಮಾತನಾಡಿ, ಉತ್ತಮ ತರಬೇತಿಯಿಂದ ಕೌಶಲಾಭಿವೃದ್ಧಿಯಾಗಿ ಮಾನವ ಸಂಪನ್ಮೂಲದ ಸದುಪಯೋಗವಾಗುತ್ತದೆ. ಯುವಶಕ್ತಿಯ ಸದ್ಬಳಕೆಯಿಂದ ಉತ್ತಮ ಪ್ರಗತಿ ಸಾಧ್ಯವಾಗುತ್ತದೆ. ರುಡ್‌ಸೆಟ್ ಮತ್ತು ಆರ್‌ಸೆಟ್ ಸಂಸ್ಥೆಗಳ ನಿರ್ದೇಶಕರು ಮತ್ತು ತರಬೇತುದಾರರು ಸಾಮಾಜಿಕ ಪ್ರಗತಿಯ ಹರಿಕಾರರಾಗಿದ್ದು ಅವರು ಮಾಡುವ ಮಾನವ ಸೇವೆ ಸ್ತುತ್ಯಾರ್ಹವಾಗಿದೆ. ತರಬೇತಿ ಹಾಗೂ ಕೌಶಲಾಭಿವೃದ್ಧಿಯಿಂದ ಮಾನವ ಸಂಪನ್ಮೂಲ ಸದುಪಯೋಗವಾಗುತ್ತದೆ. ಮೌಲ್ಯ ವರ್ಧನೆಯಾಗುತ್ತದೆ ಎಂದರು. ಕೇಂದ್ರ ಸರಕಾರ ಕೂಡಾ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಿದೆ ಎಂದರು.

ಸಿಂಡಿಕೇಟ್ ಬ್ಯಾಂಕಿನ ಹಿರಿಯ ಅಧಿಕಾರಿ ಸತೀಶ್ ಕಾಮತ್ ಮತ್ತು ಕೆ.ಎನ್. ಜನಾರ್ಧನ್ ಶುಭಾಶಂಸನೆಗೈದರು.

ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಮೂರು ದಿನ ನಡೆಯುವ ವಾರ್ಷಿಕ ಸಮ್ಮೇಳನದಲ್ಲಿ ಸಮಸ್ಯೆಗಳು ಸವಾಲುಗಳು ಮತ್ತು ಹೊಸ ಯೋಜನೆಗಳ ಬಗ್ಯೆ ಮುಕ್ತ ಚರ್ಚೆ ನಡೆಸಲಾಗುವುದು. ಆರ್ಥಿಕ ಲಾಭ-ನಷ್ಟಕ್ಕಿಂತಲೂ ಸೇವೆಯಿಂದ ನಮಗೆ ಸಿಗುವ ಸಂತೋಷ ತೃಪ್ತಿಯನ್ನುಂಟು ಮಾಡುತ್ತದೆ. ಸ್ವ-ಉದ್ಯೋಗಿಗಳು ಯಾವುದೇ ದುಶ್ಚಟಕ್ಕೆ ಬಲಿಯಾಗಬಾರದು ಎಂದು ಅವರು ಸಲಹೆ ನೀಡಿದರು.
ಸ್ವ-ಉದ್ಯೋಗಿಗಳಿಗೆ ಬ್ಯಾಂಕ್‌ಗಳು ನೀಡುವ ಸಾಲದ ಮೊತ್ತವನ್ನು ಹೆಚ್ಚಿಸಬೇಕು ಎಂದು ಅವರು ಕೋರಿದರು. ಯುವ ಜನತೆಯ ಪ್ರಗತಿಗಾಗಿ ಅನೇಕ ಹೊಸ ಕಾರ್ಯಕ್ರಮಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ ಎಂದು ಹೆಗ್ಗಡೆಯವರು ಹೇಳಿದರು.

ರುಡ್‌ಸೆಟ್ ಸಂಸ್ಥೆಗಳ ಕೇಂದ್ರೀಯ ಕಚೇರಿಯ ಕಾರ್ಯನಿರ್ವಾಹಕ ನಿರ್ದೇಶಕ ವಿ.ಜೆ. ಅರುಣ್ ಸ್ವಾಗತಿಸಿದರು. ಉಜಿರೆ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜಿತ್ ಕೆ.ರಾಜಣ್ಣವರ್ ವಂದಿಸಿದರು. ಅನುಸೂಯಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X