ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪತ್ತೆ
ಬಂಟ್ವಾಳ, ಆ.18: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯನ್ನು ಹಾಸನದಲ್ಲಿ ಪತ್ತೆ ಹಚ್ಚುವಲ್ಲಿ ವಿಟ್ಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪುಷ್ಪಾಎನ್.ಡಿ. (21) ನಾಪತ್ತೆಯಾಗಿದ್ದ ವಿದ್ಯಾರ್ಥಿನಿ. ಈಕೆ ವಿಟ್ಲದ ಹಿಂದುಳಿದ ವರ್ಗಗಳ ದೇವರಾಜ್ ಅರಸು ವಸತಿಗೃಹದಲ್ಲಿ ವಾಸವಿದ್ದು ಆಗಸ್ಟ್ 11ರಂದು ಮನೆಗೆ ತೆರಳುವುದಾಗಿ ಹೇಳಿ ಹಾಸ್ಟೆಲ್‌ನಿಂದ ಹೊರಟವಳು ನಾಪತ್ತೆಯಾಗಿದ್ದಳು. ಈ ಬಗ್ಗೆ ಕಾರ್ಯ ಪ್ರವರ್ತರಾದ ವಿಟ್ಲ ಠಾಣೆ ಪೊಲೀಸರು ಹಾಸನ ಜಿಲ್ಲೆಯಲ್ಲಿ ಪತ್ತೆ ಹಚ್ಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
Next Story





