Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೋಪಿಂಗ್ ವಿವಾದ: ನರಸಿಂಗ ಯಾದವ್...

ಡೋಪಿಂಗ್ ವಿವಾದ: ನರಸಿಂಗ ಯಾದವ್ ಒಲಿಂಪಿಕ್ಸ್‌ನಿಂದ ಔಟ್

ಭಾರತದ ಕುಸ್ತಿಪಟುವಿಗೆ ನಾಲ್ಕು ವರ್ಷ ನಿಷೇಧ

ವಾರ್ತಾಭಾರತಿವಾರ್ತಾಭಾರತಿ19 Aug 2016 6:17 AM IST
share
ಡೋಪಿಂಗ್ ವಿವಾದ: ನರಸಿಂಗ ಯಾದವ್ ಒಲಿಂಪಿಕ್ಸ್‌ನಿಂದ ಔಟ್

ರಿಯೊ ಡಿ ಜನೈರೊ,ಆ.19: ಭಾರತದ ಮಹಿಳೆಯರು ರಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಬರ ನೀಗಿಸಿ ದಾಖಲೆ ಬರೆದಿರುವ ಸಂತಸದ ನಡುವೆಯೇ ಮತ್ತೊಂದು ಶಾಕಿಂಗ್ ನ್ಯೂಸ್ ಭಾರತೀಯ ಕ್ರೀಡಾ ಪ್ರೇಮಿಗಳಿಗೆ ಎದುರಾಗಿದೆ. ಡೋಪಿಂಗ್ ಕಳಂಕ ಎದುರಿಸುತ್ತಿದ್ದ ಭಾರತದ ಕುಸ್ತಿಪಟು ನರಸಿಂಗ ಯಾದವ್ ಅವರಿಗೆ ವಿಶ್ವ ಡೋಪಿಂಗ್ ತಡೆ ಸಂಸ್ಥೆ (ವಾಡಾ) ಮೇಲ್ಮನವಿಯ ಮೇರೆಗೆ ನಾಲ್ಕು ವರ್ಷಗಳ ನಿಷೇಧ ಹೇರಲಾಗಿದೆ. ಈ ಮೂಲಕ ಒಲಿಂಪಿಕ್ಸ್‌ನಿಂದ ಯಾದವ್ ನಿರ್ಗಮಿಸಬೇಕಾಗಿದೆ.

ಭಾರತದ ರಾಷ್ಟ್ರೀಯ ಡೋಪಿಂಗ್ ತಡೆ ಏಜೆನ್ಸಿ (ನಾಡಾ) ನೀಡಿದ್ದ ತೀರ್ಪಿನ ವಿರುದ್ಧ ವಾಡಾ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ಕ್ರೀಡಾ ವ್ಯಾಜ್ಯ ಪರಿಹಾರ ನ್ಯಾಯಾಲಯ (ಸಿಎಎಸ್)ದ ತಾತ್ಕಾಲಿಕ ಸಮಿತಿ ಈ ಮಹತ್ವದ ತೀರ್ಪು ನೀಡಿದೆ.

 ನಾಡಾ 2016ರ ಜೂನ್ 25 ಹಾಗೂ ಜುಲೈ 5ರಂದು ನಡೆಸಿದ ಎರಡು ಉದ್ದೀಪನಾ ಪರೀಕ್ಷೆಯಲ್ಲಿ ನರಸಿಂಗ ಯಾದವ್ ಉದ್ದೀಪನಾ ಔಷಧಿ ಸೇವಿಸಿರುವುದು ಖಚಿತಗೊಂಡಿತ್ತು. ಆದರೆ ತಾನು ಮತ್ತೊಬ್ಬ ಸಹ ಕುಸ್ತಿಪಟು ದುರುದ್ದೇಶಪೂರ್ವಕವಾಗಿ ಆಹಾರದಲ್ಲಿ ಕಲಬೆರಕೆ ಮಾಡಿದ್ದರ ಬಲಿಪಶುವಾದೆ ಎಂದು ನರಸಿಂಗ ಯಾದವ್ ಸಮರ್ಥಿಸಿಕೊಂಡ ಹಿನ್ನಲೆಯಲ್ಲಿ, ನಾಡಾ ಯಾದವ್ ಪರ ತೀರ್ಪು ನೀಡಿ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಿತ್ತು.

ವಾಡಾ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ, ಯಾದವ್‌ಗೆ ನಾಲ್ಕು ವರ್ಷ ಅಂತರರಾಷ್ಟ್ರೀಯ ಸ್ಪರ್ಧೆ ಮೇಲೆ ನಿಷೇಧ ಹೇರಬೇಕು ಎಂದು ಕೋರಿತ್ತು. ನಾಲ್ಕು ಗಂಟೆಗಳ ಸುಧೀರ್ಘ ವಿಚಾರಣೆ ನಡೆಸಿದ ತಾತ್ಕಾಲಿಕ ಸಮಿತಿ, ಅಂತಿಮವಾಗಿ ನಾಡಾ ತೀರ್ಪನ್ನು ತಳ್ಳಿಹಾಕಿತು. ಯದವ್ ಅವರ ವಾದವನ್ನು ಒಪ್ಪದ ಜೂನ್ 25ರ ಬಳಿಕ ಯಾದವ್ ಯಾವುದೇ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರೆ ಅದರ ಫಲಿತಾಂಶ ಅನೂರ್ಜಿತಗೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದೆ. ಮುಂದಿನ ನಾಲ್ಕು ವರ್ಷಗಳ ಕಾಲ ಯಾದವ್ ಯಾವುದೇ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸುವಂತಿಲ್ಲ.

ಉಳಿದಂತೆ ಒಲಿಂಪಿಕ್ಸ್ ಕೂಟದ 13ನೇ ದಿನ ಪುರುಷರ ಹಾಕಿ ಫೈನಲ್ಸ್‌ನಲ್ಲಿ ಬೆಲ್ಜಿಯಂ ತಂಡವನ್ನು 4-2 ಅಂತರದಿಂದ ಸೋಲಿಸಿದ ಅರ್ಜೆಂಟೀನಾ ಚಿನ್ನದ ಪದಕ ಗೆದ್ದುಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X