ಬದ್ರಿಯಾ ರಸ್ತೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು, ಆ.19: 70ನೆ ಸ್ವಾತಂತ್ರ್ಯ ದಿನಾಚರಣೆಯು ಬದ್ರಿಯಾ ರಸ್ತೆ ಕಂದಕ್‌ನಲ್ಲಿ ನಡೆಯಿತು. ಬದ್ರಿಯಾ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಇಸ್ಮಾಯೀಲ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಪೊರೇಟರ್ ಅಬ್ದುಲ್ಲತೀಫ್ ಕಂದಕ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರೊಸಾರಿಯೊ ಕಾಲೇಜಿನ ಪ್ರಾಂಶುಪಾಲ ಫಾ.ರೋಕಿ ಫೆರ್ನಾಂಡಿಸ್, ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್, ಪೋರ್ಟ್ ಅಧಿಕಾರಿ ಗೌಸ್ ಅಲಿ, ನೀರೇಶ್ವಾಲ್ಯ ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ರವಿಕಲಾ ಶೆಟ್ಟಿ, ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಹನುಮಂತ ಕಾಮತ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ತೀರಾ ಆರ್ಥಿಕವಾಗಿ ಹಿಂದುಳಿದ ಮೂರು ಧರ್ಮಗಳ ಮೂವರಿಗೆ ಹೊಲಿಗೆ ಯಂತ್ರ ವಿತರಣೆ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರಿಗೆ ಸನ್ಮಾನ ಹಾಗೂ ರಾತ್ರಿ ಸಂಗೀತ ರಸಮಂಜರಿ ಕಾರ್ಯಕ್ರಮಗಳು ಜರಗಿದವು.
Next Story





