Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋರಕ್ಷಣೆಯ ಹೆಸರಿನಲ್ಲಿ ದುಷ್ಕೃತ್ಯ...

ಗೋರಕ್ಷಣೆಯ ಹೆಸರಿನಲ್ಲಿ ದುಷ್ಕೃತ್ಯ ಎಸಗುವ ಸಂಘಟನೆಗಳನ್ನು ನಿಷೇಧಿಸಲು ಯುವಕಾಂಗ್ರೆಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 Aug 2016 3:36 PM IST
share
ಗೋರಕ್ಷಣೆಯ ಹೆಸರಿನಲ್ಲಿ ದುಷ್ಕೃತ್ಯ ಎಸಗುವ ಸಂಘಟನೆಗಳನ್ನು ನಿಷೇಧಿಸಲು ಯುವಕಾಂಗ್ರೆಸ್ ಆಗ್ರಹ

ಮಂಗಳೂರು, ಆ.20: ಗೋರಕ್ಷಣೆಯ ಹೆಸರಿನಲ್ಲಿ ದುಷ್ಕೃತ್ಯ ಎಸಗುವ ಸಂಘಟನೆಗಳನ್ನು ನಿಷೇಧಿಸಲು ಸರಕಾರ ಕ್ರಮಕೈಗೊಳ್ಳಬೇಕು ದ.ಕ. ಜಿಲ್ಲಾ ಯುವಕಾಂಗ್ರೆಸ್ ಆಗ್ರಹಿಸಿದೆ.

ಕಳೆದ ಕೆಲವು ಸಮಯಗಳಿಂದ ನಮ್ಮ ದೇಶದಲ್ಲಿ ಆಹಾರವೆನ್ನುವುದು ಅತಿ ಸೂಕ್ಷ್ಮ ವಿಚಾರವಾಗಿ ಮಾರ್ಪಟ್ಟಿದೆ. ಆಹಾರವಿಲ್ಲದೆ ನರಳುವವರು, ಆಹಾರಕ್ಕಾಗಿ ದಿನಂಪ್ರತಿ ಅಲೆಯುವವರೂ ಯಥೇಚ್ಛವಾಗಿದ್ದರೂ ಇದರ ಮಧ್ಯೆ ಆಹಾರವನ್ನು ಸೇವಿಸುವ ಕಾರಣಕ್ಕಾಗಿ ಅಥವಾ ವ್ಯಾಪಾರ ನಡೆಸಿದ ಕಾರಣಕ್ಕಾಗಿ ಹತ್ಯೆಗೀಡಾದ ಘಟನೆಗಳು ಈಗಾಗಲೆ ದಾದ್ರಿ, ಉನಾ ಮತ್ತು ಸಮೀಪದ ಉಡುಪಿಯ ಕೊಕ್ಕರ್ಣೆಯಲ್ಲೂ ಸಂಭವಿಸಿದೆ. ಆಹಾರವೆನ್ನುವುದು ವ್ಯಕ್ತಿಯ ವೈಯುಕ್ತಿಕ ಆಯ್ಕೆಯಾಗಿದ್ದರೂ ಅದಕ್ಕೆ ಗೋ ರಕ್ಷಣೆಯ ಧಾರ್ಮಿಕ ಲೇಪ ಹಚ್ಚಿ, ಅಮಾಯಕ ಅಲ್ಪಸಂಖ್ಯಾತರು, ದಲಿತರು, ಮತ್ತು ಇದೀಗ ಸ್ವ ಧರ್ಮೀಯರನ್ನೇ ಹತ್ಯೆಗೈದಿರುವುದು ಆತಂಕಕ್ಕೀಡುಮಾಡಿದೆ.

ದಲಿತರು, ಅಲ್ಪಸಂಖ್ಯಾತರಿಗಿಂತಲೂ ಸಂಘಪರಿವಾರದ ಮುಖಂಡರು ಹೆಚ್ಟು ದನದ ವ್ಯಾಪಾರ ನಡೆಸುತ್ತಿರುವುದು ನಗ್ನ ಸತ್ಯವಾಗಿದ್ದರೂ, ಸಂಘ ಪರಿವಾರಕ್ಕೆ ಸಮಯಕ್ಕೆ ಸರಿಯಾಗಿ ವಿವಾದ ಸೃಷ್ಟಿಸಲು ಗೊವು ಅಗತ್ಯವಾಗಿ ಬಿಟ್ಟಿದೆ. ಕಳೆದ 15 ವರ್ಷಗಳಿಂದ ಅಲ್ಪಸಂಖ್ಯಾತರ ಮೇಲಿನ ದಾಳಿಗಳು, ದಲಿತರ ಕಗ್ಗೊಲೆಗಳ ಮೂಲಕ ನಮ್ಮ ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡಿ ಜನರ ಮಾನ ಸಂಪತ್ತುಗಳಿಗೆ ಹಾನಿಯುಂಟು ಮಾಡುವ ಸಂಘ ಪರಿವಾರದ ಹಿಡನ್ ಅಜೆಂಡಾ ಭಾಗವಾಗಿರುವ ಈ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅವಿಭಜಿತ ಕರಾವಳಿಯ ಜಿಲ್ಲೆಗಳಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದೆ.

ದೇಶದೊಳಗಿನ ಈ ಎಲ್ಲಾ ಅಹಿತಕರ ವಿದ್ಯಾಮಾನಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕಿಸುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವರ್ಚಸ್ಸನ್ನು ಕುಗ್ಗುವಂತೆ ಮಾಡುತ್ತಿದೆ. ಆದ್ದರಿಂದ ಇಂತಹ ನಕಲಿ ಗೋ ರಕ್ಷಕ ಸಂಘಟನೆಗಳನ್ನು ನಿಷೇಧಿಸಿ ಸೂಕ್ತವಾದ ಕಾನೂನು ಕ್ರಮಗಳನ್ನು ಜರುಗಿಸಬೇಕು. ಜೊತೆಗೆ ಇಂತಹ ಸಂಘಟನೆಗಳಿಗೆ ಆರ್ಥಿಕ ಸಹಾಯಗಳನ್ನು ನೀಡಿ ಯುವಕರನ್ನು ಅಮಾಯಕರ ಮೇಲೆ ದಾಳಿ ನಡೆಸುವಂತೆ ಪ್ರಚೋದಿಸುವ ನಾಯಕರುಗಳನ್ನು ಬಂಧಿಸಬೇಕಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ನಿಟ್ಟಿನಲ್ಲಿ ರಾಜ್ಯ ಸರಕಾರಗಳಿಗೆ ಸೂಚನೆಯನ್ನು ಕೊಟ್ಟಿರುವುದು ಸ್ವಾಗತಾರ್ಹ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ತಮ್ಮ ಮೌನವನ್ನು ಮುರಿದು ಈ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X