Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಕರ್ತ ಖಾಸಗಿ ಬದುಕನ್ನು ಬದಿಗಿಟ್ಟು...

ಪತ್ರಕರ್ತ ಖಾಸಗಿ ಬದುಕನ್ನು ಬದಿಗಿಟ್ಟು ಕೆಲಸ ಮಾಡಬೇಕು: ಭಾರತಿ ಹೆಗಡೆ

ವಿವೇಕಾನಂದ ಪತ್ರಿಕೋದ್ಯಮ ವಿಭಾಗದ ದಶಮಾನೋತ್ಸವ

ವಾರ್ತಾಭಾರತಿವಾರ್ತಾಭಾರತಿ20 Aug 2016 6:07 PM IST
share
ಪತ್ರಕರ್ತ ಖಾಸಗಿ ಬದುಕನ್ನು ಬದಿಗಿಟ್ಟು ಕೆಲಸ ಮಾಡಬೇಕು: ಭಾರತಿ ಹೆಗಡೆ

ಪುತ್ತೂರು, ಆ.20: ಪೂರ್ವಾಗ್ರಹಕ್ಕೆ ಒಳಗಾಗದೆ ಪತ್ರಿಕೋದ್ಯಮದ ಬಗೆಗೆ ಹುಚ್ಚು ಪ್ರೀತಿಯನ್ನಿಟ್ಟುಕೊಂಡು ಕಾರ್ಯನಿರ್ವಹಿಸುವವರು ಪತ್ರಿಕಾ ಕ್ಷೇತ್ರಕ್ಕೆ ಬೇಕಾಗಿದ್ದಾರೆ. ಪತ್ರಕರ್ತ ವಿವಿದ ಘಟನೆಗಳಿಗೆ ವೈಯಕ್ತಿಕವಾಗಿ ತನ್ನ ಭಾವನೆಯನ್ನು ವ್ಯಕ್ತಪಡಿಸಬಹುದಾದರೂ ಬರವಣಿಗೆಯಲ್ಲಿ ಭಾವ ವ್ಯಕ್ತವಾಗಬಾರದು. ಖಾಸಗಿ ಬದುಕನ್ನು ಪಕ್ಕಕ್ಕಿಟ್ಟು ಕಾರ್ಯನಿರ್ವಹಿಸಲು ತಯಾರಾಗಿದ್ದರೆ ಮಾತ್ರ ಉತ್ತಮ ಪತ್ರಕರ್ತನಾಗಿ ಬೆಳೆಯಲು ಸಾಧ್ಯ ಎಂದು ಪತ್ರಕರ್ತೆ ಭಾರತಿ ಹೆಗಡೆ ಹೇಳಿದರು.

ಅವರು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ದಶಮಾನೋತ್ಸವ ಹಾಗೂ ‘ಪತ್ರಿಕೋದ್ಯಮ ಇಂದು ನಾಳೆ’ ಎಂಬ ವಿಷಯದ ಬಗೆಗಿನ ರಾಜ್ಯಮಟ್ಟದ ಮಾಧ್ಯಮಗೋಷ್ಠಿಯನ್ನು ಉದ್ಘಾಟಿಸಿ ಶನಿವಾರ ಮಾತನಾಡಿದರು.

ವಿಷಯದ ಎಳೆಯೊಂದನ್ನು ಹಿಡಿದುಕೊಂಡು ಮುಂದುವರಿದಾಗ ವಿವಿಧ ಬರಹಗಳನ್ನು ಬರೆಯುವಷ್ಟು ಒಳನೋಟಗಳು ಕಾಣಿಸುವುದೂ ಇದೆ. ಪತ್ರಕರ್ತನಾದವನಿಗೆ ಈ ಸೂಕ್ಷ್ಮತೆಯನ್ನು ಗ್ರಹಿಸುವ ಸಾಮರ್ಥ್ಯ ಇರಬೇಕು. ಜನರ ಬಳಿಗೆ ಹೋಗುವ ಅವಕಾಶ ಪತ್ರಕರ್ತರಿಗೆ ದೊರಕಿದೆ. ಜನರ ಕಷ್ಟ ನಷ್ಟಗಳಿಗೆ ಸ್ಪಂದಿಸುವ ಸಾಧ್ಯತೆಯನ್ನು ಸಾಕಾರಗೊಳಿಸಿದೆ. ಹಾಗಾಗಿ ಪತ್ರಿಕೋದ್ಯಮಕ್ಕೆ ಅಡಿಯಿಡುವುದು ಪುಣ್ಯದ ಕೆಲಸ ಎಂಬುದನ್ನು ಮನಗಾಣಬೇಕು. ನಾವು ಮಾಡುವ ಕೆಲಸ ಪತ್ರಿಕೋದ್ಯಮದಲ್ಲಿ ನಮ್ಮನ್ನು ಕಾಯುತ್ತದೆ ಎಂದರು.

ಪಠ್ಯದಲ್ಲಿ ಓದುವ ಪತ್ರಿಕೋದ್ಯಮಕ್ಕೂ ಪ್ರಾಯೋಗಿಕ ಪತ್ರಿಕೋದ್ಯಮಕ್ಕೂ ಸಾಕಷ್ಟು ವ್ಯತ್ಯಾಸಗಳಿವೆ. ಪತ್ರಿಕಾಲಯಕ್ಕೆ ಬಂದ ಮೇಲಷ್ಟೇ ನಿಜವಾದ ಪತ್ರಿಕೋದ್ಯಮದ ಆಳ ಅರ್ಥವಾಗಲು ಸಾಧ್ಯ. ಕೆಲವೊಮ್ಮೆ ಸಮಾಜದ ಗಣ್ಯರೆನಿಸಿದವರು ಗತಿಸಿಹೋದಾಗ, ಪ್ರಮುಖ ಘಟನೆಗಳು ಜರುಗಿದಾಗ ಪತ್ರಿಕಾಲಯದಲ್ಲಿ ಹೊಸ ವಾತಾವರಣ ಆವರಿಸಿಕೊಳ್ಳುತ್ತದೆ. ನಿಗದಿತ ಸಮಯಕ್ಕನುಗುಣವಾಗಿ ಕಚೇರಿಯಿಂದ ಮನೆಗೆ ತೆರಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ಪತ್ರಕರ್ತನಿಗೆ ಸಮಯದ ಹಂಗನ್ನು ಮೀರಿ ಕಾರ್ಯನಿರ್ವಹಿಸುವ ಅನಿವಾರ್ಯತೆ ಇರುತ್ತದೆ ಎಂದು ಅಭಿಪ್ರಾಯಪಟ್ಟರು.

ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಕಾರ್ತಿಕ್ ಎನ್.ಜೆ. ರೂಪಿಸಿದ ದಶಮಾನೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪಿ.ಶ್ರೀನಿವಾಸ ಪೈ ಮಾತನಾಡಿ, ಹತ್ತು ವರ್ಷಗಳ ಹಿಂದೆ ಪತ್ರಿಕೋದ್ಯಮ ವಿಭಾಗದ ಬಗೆಗೆ ಯಾವ ಕನಸನ್ನು ಕಾಣಲಾಗಿತ್ತೋ ಆ ಆಶಯಗಳನ್ನು ವಿಭಾಗ ಸಾಕಾರಗೊಳಿಸುತ್ತಿರುವುದು ಸಂಭ್ರಮದ ವಿಚಾರ. ಅನೇಕ ಅತ್ಯುತ್ತಮ ಕಾರ್ಯಗಳನ್ನು ವಿಭಾಗ ನಡೆಸಿಕೊಟ್ಟಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಬಾಕರ ಭಟ್ ಕಲ್ಲಡ್ಕ ಮಾತನಾಡಿ, ಪತ್ರಿಕೆಯ ವ್ಯವಹಾರ ಉದ್ಯಮವಾಗಬಾರದು. ಬದಲಾಗಿ ಪತ್ರಿಕಾ ಧರ್ಮವಾಗಬೇಕು. ಸತ್ಯಾಸತ್ಯತೆಯನ್ನು ವಿಶ್ಲೇಷಿಸಿ ಬರೆಯುವ ಜವಾಬ್ದಾರಿ ಪತ್ರಕರ್ತರ ಮೇಲಿದೆ. ರಾಷ್ಟ್ರಕ್ಕೆ ಶಕ್ತಿಯನ್ನು ತುಂಬುವ ಕಾಯಕದಲ್ಲಿ ಪತ್ರಕರ್ತರು ತೊಡಗಬೇಕೇ ವಿನಃ ದೇಶವನ್ನು ದುರ್ಬಲಪಡಿಸುವ ಕೆಲಸಕ್ಕೆ ಇಳಿಯಬಾರದು. ಇಡಿಯ ಜಗತ್ತಿನ ಹಿತವನ್ನು ಕಾಯುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದರು.

ವಿವೇಕಾನಂದ ಕಾಲೇಜಿನ ಸ್ಥಾಪಕ ಸಂಚಾಲಕ ಕೆ.ರಾಮ ಭಟ್ ಶು ಹಾರೈಸಿದರು. ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಸ್ವಾಗತಿಸಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಾಜೆ ಪ್ರಸ್ತಾವನೆಗೈದರು. ಪತ್ರಿಕೋದ್ಯಮ ಉಪನ್ಯಾಸಕಿ ಭವ್ಯಾ ಪಿ.ಆರ್ ನಿಡ್ಪಳ್ಳಿ ವಂದಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಎಸ್. ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X