ಅಮಿತ್ ಶಾಗೆ ರೈಲ್ವೆ ನಿಲ್ದಾಣದಲ್ಲಿ ಬಿಜೆಪಿ ಮುಖಂಡರಿಂದ ಸ್ವಾಗತ

ಮಂಗಳೂರು, ಆ.21: ತಿರಂಗಾ ರ್ಯಾಲಿಯಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಮಂಗಳೂರಿನ ರೈಲು ನಿಲ್ದಾಣದಲ್ಲಿ ಬಿಜೆಪಿ ಮುಖಂಡರು ಸ್ವಾಗತಿಸಿದರು.
ಮುಂಜಾನೆ 4:30ಕ್ಕೆ ರೈಲಿನ ಮೂಲಕ ಆಗಮಿಸಿದ ಅಮಿತ್ ಶಾ ಅವರ ಹಣೆಗೆ ಮಹಿಳೆಯರು ತಿಲಕವಿಟ್ಟು, ಸ್ವಾಗತಿಸಿದರು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಕೃಷ್ಣ ಜೆ. ಪಾಲೆಮಾರ್, ಯೋಗೀಶ್ ಭಟ್, ನಾಗರಾಜ ಶೆಟ್ಟಿ, ಜಗದೀಶ್ ಅಧಿಕಾರಿ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸುತ್ತಿರುವ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಇದು ಬಿಜೆಪಿಯ ಕಾರ್ಯಕ್ರಮವಲ್ಲ. ಪಕ್ಷದ ಧ್ವಜದ ಅಡಿ ನಡೆಯುವ ಕಾರ್ಯಕ್ರಮವಲ್ಲ ಎಂದು ಸ್ಪಷ್ಟಪಡಿಸಿದರು.
Next Story





