ಮಂಗಳೂರು: ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ವಾಲ್ಟರ್ ಲೋಬೊ ನೇಮಕ
ಮಂಗಳೂರು, ಆ 22: ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ವಾಲ್ಟರ್ ಲೋಬೋ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ರಮಾನಾಥ ರೈ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್. ಲೋಬೊ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ವಾಲ್ಟರ್ ಲೋಬೋ ಅವರು ಈ ಮೊದಲು ಜಪ್ಪಿನಮೊಗರು ವಾರ್ಡ್ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಮರಳು ಮಾಲಕ ಮತ್ತು ಕಾರ್ಮಿಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
Next Story